ಎಚ್‍ಐವಿ ಸೋಂಕಿತರ ಬಗ್ಗೆ ಕಳಂಕ-ತಾರತಮ್ಯ ಬೇಡ, ಚಿಕಿತ್ಸೆ ಒದಗಿಸಿ: ಡಿಹೆಚ್‍ಒ ಡಾ.ಜನಾರ್ಧನ್

0
30

ಬಳ್ಳಾರಿ,ಆ.24:ಎಚ್‍ಐವಿ ಮತ್ತು ಏಡ್ಸ್ ಸೋಂಕಿತರನ್ನು ಕಳಂಕ ತಾರತಮ್ಯ ಮಾಡದೇ ಎಲ್ಲರೊಡನೆ ಒಂದಾಗಿ ಬಾಳಲು ಅವಕಾಶ ನೀಡುವ ಮೂಲಕ ಸಮಾಜಮುಖಿಯಾಗಿಸಲು ಸಹಕರಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಚ್.ಎಲ್ ಜನಾರ್ಧನ್ ಅವರು ಹೇಳಿದರು.
2017ರ ಎಚ್‍ಐವಿ ಮತ್ತು ಏಡ್ಸ್ ತಡೆ ಕಾಯ್ದೆಯ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಾರ್ಯಾಲಯದಲ್ಲಿ ಜಿಲ್ಲೆಯ ವೈದ್ಯಾಧಿಕಾರಿಗಳಿಗೆ ಗುರುವಾರ ಹಮ್ಮಿಕೊಂಡ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಯಾವುದೇ ವ್ಯಕ್ತಿಗೆ ಐಸಿಟಿಸಿ ಕೇಂದ್ರಗಳಲ್ಲಿ ಹೆಚ್‍ಐವಿ ಪರೀಕ್ಷೆ ಮಾಡಿಸುವ ಪೂರ್ವದಲ್ಲಿ ಒಪ್ಪಿಗೆ ಪಡೆಯಬೇಕು. ಸಾರ್ವಜನಿಕವಾಗಿ ವ್ಯಕ್ತಿಗಳ ಮಾಹಿತಿಯನ್ನು ಬಹಿರಂಗಪಡಿಸಬಾರದು ಮತ್ತು ಅವರಿಗೆ ಆರೋಗ್ಯ ಸೇವೆಗಳನ್ನು ಯಾವುದೇ ಅಡೆ ತಡೆಯಿಲ್ಲದೆ ಒದಗಿಸಬೇಕು, ಸೇವೆ ಒದಗಿಸುವಲ್ಲಿ ನ್ಯೂನ್ಯತೆಗಳಿಗೆ ಅವಕಾಶ ನೀಡಬಾರದು ಎಂದು ತಿಳಿಸಿದರು.
ಸೋಂಕಿತರಿಗೆ ಸರ್ಕಾರದ ಕಾರ್ಯಕ್ರಮದಡಿಯಲ್ಲಿ ವಸತಿ ಯೋಜನೆ ಹಾಗೂ ಸಾಲ ಸೌಲಭ್ಯಗಳ ಮಾಹಿತಿಯನ್ನು ಸಹ ಒದಗಿಸಬೇಕು. ಈ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಕ್ರಮವಹಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿ ಹಾಗೂ ಹೆಚ್‍ಐವಿ ನಿಯಂತ್ರಣಾಧಿಕಾರಿ ಡಾ.ಇಂದ್ರಾಣಿ ವಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಅನಿಲ್ ಕುಮಾರ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಪೂರ್ಣಿಮ ಕಟ್ಟಿಮನಿ, ಜಿಲ್ಲಾ ಮಲೇರಿಯ ನಿಯಂತ್ರಣಾಧಿಕಾರಿ ಡಾ.ಅಬ್ದುಲ್ಲಾ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ ವಿ.ಕೆ., ಜಿಲ್ಲಾ ಕುಷ್ಟರೋಗ ನಿರ್ಮೂಲನಾಧಿಕಾರಿ ಡಾ.ವೀರೇಂದ್ರಕುಮಾರ್, ತಾಲೂಕಾ ಆರೋಗ್ಯಾಧಿಕಾರಿಗಳಾದ ಡಾ.ಮೋಹನ್‍ಕುಮಾರಿ, ಡಾ.ಈರಣ್ಣ, ಡಾ.ಭರತ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್.ದಾಸಪ್ಪನವರ, ಜಿಲ್ಲಾ ಡ್ಯಾಪೆÇ್ಕೀ ಮೇಲ್ವಿಚಾರಕ ಗಿರೀಶ್, ಡಿಎನ್‍ಓ ಗಿರೀಶ್, ಡಿಪಿಎಮ್ ವೆಂಕೋಬ ನಾಯ್ಕ್ ಸೇರಿದಂತೆ ಜಿಲ್ಲೆಯ ಎಲ್ಲ ವೈದ್ಯಾಧಿಕಾರಿಗಳು ಹಾಗೂ ಮೇಲ್ವಿಚಾರಣಾ ಸಿಬ್ಬಂದಿಯವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here