786 ಲಕ್ಷ ರೂ.ಗಳ ವೆಚ್ಚದಲ್ಲಿ ಮೆಟ್ರಿಕ್ ಬಾಲಕರ ವಿದ್ಯಾರ್ಥಿ ನಿಲಯ ನೂತನ ಕಟ್ಟಡ ಉದ್ಘಾಟನೆ: ಕೆ ನೇಮಿರಾಜ್ ನಾಯ್ಕ್

0
112

ಕೊಟ್ಟೂರು ಪಟ್ಟಣದಲ್ಲಿ  ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನಡೆಯುತ್ತಿರುವ ಸರ್ಕಾರಿ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿನಿಲಯದ ನೂತನ ಕಟ್ಟಡವನ್ನು ಸೋಮವಾರ ಹಗರಿಬೊಮ್ಮನಹಳ್ಳಿ ಶಾಸಕರು ಉದ್ಘಾಟಿಸಿದರು.

ವಿದ್ಯಾರ್ಥಿನಿಲಯದ ಸ್ವಚ್ಛತೆಯನ್ನು ಕಾಪಾಡಿ ಎಂದು ವಿದ್ಯಾರ್ಥಿನಿಲಯದ ಮೇಲ್ವಿಚಾರಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ತಿಳಿಸಿದರು. ೨೦೧೪-೧೫ನೇ ಸಾಲಿನಲ್ಲಿ ಮಂಜೂರಾಗಿರುವ ಈ ವಿದ್ಯಾರ್ಥಿನಿಲಯಕ್ಕೆ ೨೦೧೯-೨೦ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ೭೮೬ ಲಕ್ಷ ರೂ.ಗಳ ವೆಚ್ಚದಲ್ಲಿ ಕಟ್ಟಡ ನಿರ್ಮಾಣವಾಗಿದೆ. ೧೦೦ ವಿದ್ಯಾರ್ಥಿಗಳ ನೂತನ ವಿದ್ಯಾರ್ಥಿನಿಲಯವಾಗಿದೆ. ನಂತರ ಪತ್ರಿಕಾ ಗೋಷ್ಠಿಯಲ್ಲಿ ಶಾಸಕರು ಕೊಟ್ಟೂರಿನ ಪಟ್ಟಣದ ಎಲ್ಲಾ ವಾರ್ಡ್‌ಗಳಿಗೆ ಮೂಲಭೂತ ಸೌಕರ್ಯಗಳನ್ನು ಕೈಗೊಳ್ಳಲು ಕೆ.ಕೆ.ಆರ್.ಡಿ.ಬಿ. ಮಂಡಳಿಯಿಂದ ಹಣ ಮಂಜೂರು ಮಾಡಲಾಗುವುದು ಹಾಗೆಯೇ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಜಾಕ್‌ವೆಲ್ ಹಾಕಿ ಕ್ರಮ ವಹಿಸಲಾಗುವುದು ಎಂದು ಹೇಳಿದರು.

ತಾಲ್ಲೂಕು ಪಂಚಾಯಿತಿಯ ೧೪ ಗ್ರಾಮ ಪಂಚಾಯಿತಿಗಳಲ್ಲಿ ಪಿ.ಡಿ.ಒ. ಕೊರತೆಯಿದ್ದು ಈಗಿರುವ ಪಿ.ಡಿ.ಓ. ಗಳನ್ನು ಮಾಜಿ ಶಾಸಕರು ಎತ್ತಂಗಡಿ ಮಾಡಿಸುವ ಕೆಲಸ ನಡೆಯುತ್ತಿದ್ದರೂ ಸಹ ಇದ್ಯಾವುದನ್ನು ತಲೆಕೆಡಿಸಿಕೊಳ್ಳದ ಶಾಸಕರು ನಾನು ನನ್ನ ಕ್ಷೇತ್ರಕ್ಕೆ ಹಣವನ್ನು ತಂದು ಹೇಗೆ ಅಭಿವೃದ್ಧಿಪಡಿಸಬೇಕು ಎನ್ನುವುದು ನನಗೆ ಗೊತ್ತಿದೆ ಅಭಿವೃದ್ಧಿಯನ್ನು ಮಾಡುತ್ತೇನೆ ಎಂದರು. ಮಾತು ಮಾತಿಗೂ ನಾನು ಅಭಿವೃದ್ಧಿ ಮಾಡುತ್ತೇನೆ ಎನ್ನುವ ಶಾಸಕರು ಮುಖ್ಯಮಂತ್ರಿಗಳ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಸಭೆಗೆ ಗೈರು ಹಾಜರಾಗಿರುತ್ತಾರೆ. ಅಲ್ಲದೇ ತಮ್ಮ ಪ್ರವಾಸ ದಿನಚರಿಯಲ್ಲಿ ಹೇಳಿರುವುದು ಒಂದು ಸಮಯವಾದರೆ ಬರುವುದು ಇನ್ನೊಂದು ಸಮಯಕ್ಕೆ. ಅಧಿಕಾರಿಗಳು, ಸಾರ್ವಜನಿಕರು, ಪತ್ರಕರ್ತರು ಇವರಿಗಾಗಿ ಗಂಟೆಗಟ್ಟಲೇ ಕಾಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಶಾಸಕರು ಹೇಗೆ ಅಭಿವೃದ್ಧಿ ಮಾಡುತ್ತಾರೆ? ಸರ್ಕಾರದ ಸಭೆಗಳಿಗೆ ಹೋಗದ ಶಾಸಕರು ಹೇಗೆ ಕ್ಷೇತ್ರದಲ್ಲಿ ಅಭಿವೃದ್ಧಿಪತದತ್ತ ಒಯ್ಯಲು ಸಾಧ್ಯ? ಎಂದು ಸಾರ್ವಜನಿಕರು ಮಾತನಾಡಿಕೊಂಡರು.

ಕೊಟ್ಟೂರು ತಾಲ್ಲೂಕಿಗೆ ಪದವಿ ಕಾಲೇಜ್ ಹಾಗೂ ನೋಂದಣಿ ಕಛೇರಿ ಹಾಗೂ ಇನ್ನು ಹಲವಾರು ತಾಲ್ಲೂಕು ಮಟ್ಟದ ಕಛೇರಿಗಳನ್ನು ಐದು ವರ್ಷದಲ್ಲಿ ಅಭಿವೃದ್ಧಿ ಪಡಿಸುತ್ತೇನೆ. ಇಲ್ಲವಾದರೆ ಐದು ವರ್ಷದ ನಂತರ ಕೇಳಿ ಎಂದು ಹಾರಿಕೆ ಉತ್ತರವನ್ನು ನೀಡಿದರು. ಈ ಸಂದರ್ಭದಲ್ಲಿ ಡಿ.ಎಸ್.ಎಸ್. ಮುಖಂಡರು, ಪ್ರಮುಖ ಕಾರ್ಯಕರ್ತರು, ಅಧಿಕಾರಿವರ್ಗ, ಸಿಬ್ಬಂದಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

■ಸರ್ಕಾರ ಮಟ್ಟದಲ್ಲಿ ಹಾಗು ಉಸ್ತುವಾರಿ ಸಚಿವರುಗಳ ನೇತೃತ್ವದಲ್ಲಿ ಜರಗುವ ಅಭಿವೃದ್ಧಿ ಅನುದಾನಕ್ಕೆ ಸಂಬಂಧಿಸಿದ ಸಭೆಗಳಿಗೆ ಗೈರು ಹಾಜರಾಗುವ ಶಾಸಕರುಗಳಿಂದ ಕ್ಷೇತ್ರದ ಅಭಿವೃದ್ಧಿ ಹೇಗೆ ಸಾಧ್ಯ..! ಎಂದು ನಾಗರೀಕ ರಮೇಶ್ ಅಭಿಪ್ರಾಯ ತಿಳಿಸಿದರು.

LEAVE A REPLY

Please enter your comment!
Please enter your name here