“ಪ್ರಜಾಪ್ರಭುತ್ವದ ಪ್ರತಿಜ್ಞಾವಿಧಿ ದಿನಾಚರಣೆ “

0
57

ಕೊಟ್ಟೂರು ಕೊಟ್ಟೂರೇಶ್ವರ ಮಹಾವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಹಾಗೂ ಜಾಗತಿಕ ಮಟ್ಟದ ಮೇರು ತಾಂತ್ರಿಕ ತಜ್ಞ ಭಾರತರತ್ನ  ಸರ್ ಎಂ ವಿಶ್ವೇಶ್ವರಯ್ಯರವರ ಜನ್ಮ ದಿನಾಚರಣೆಯನ್ನು ಶುಕ್ರವಾರ ರಂದು ಕೊಟ್ಟೂರೇಶ್ವರ ಮಹಾವಿದ್ಯಾಲಯದ ಆಡಳಿತ ಮಂಡಳಿಯ ಗೌರವಾನ್ವಿತ ಅಧ್ಯಕ್ಷರಾದ ಶ್ರೀ ಸಿದ್ದರಾಮ ಕಲ್ಮಠ ಸರ್ ರವರ ಶುಭಾಶಯಗಳೊಂದಿಗೆ ಆಚರಿಸಲಾಯಿತು,                 

ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ ರವಿಕುಮಾರ್ ವಿದ್ಯಾರ್ಥಿಗಳಿಗೆ ಭಾರತ ಸಂವಿಧಾನದ ಪ್ರಸ್ತಾವನೆಯ ಪ್ರತಿಜ್ಞಾವಿಧಿ ಬೋಧಿಸಿ. ಹಾಗೂ   ಸರ್ ಎಂ ವಿಶ್ವೇಶ್ವರಯ್ಯನವರ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.

ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ಕೆ .ಪಿ .ರಾಧಾಸ್ವಾಮಿ ಪ್ರಾಸ್ತಾವಿಕ ನುಡಿಯನ್ನು ನುಡಿದರು. ಪದವಿಪೂರ್ವ ಪ್ರಾಚಾರ್ಯರಾದ ಪ್ರಶಾಂತ್ ಕುಮಾರ್ ಎಂ ಹೆಚ್,ಹಿರಿಯ ಪ್ರಾಧ್ಯಾಪಕರಾದ ಪ್ರೊ. ರವೀಂದ್ರ ಗೌಡ                                      
ಡಾ.ಜೆ .ಬಿ. ಸಿದ್ದನಗೌಡ, ಪ್ರೊ.ಎಸ್.ಕೃಷ್ಣಪ್ಪ. ಶ್ರೀ ಸಿ ಬಸವರಾಜ್, ಡಾ.ಚೇತನ್ ಚೌಹಾನ್,ಡಾ ಶಿವಕುಮಾರ್ ದೈಹಿಕ ಶಿಕ್ಷಣ ನಿರ್ದೇಶಕರು. ಏ ನಿಜಲಿಂಗ ಸ್ವಾಮಿ. ಪದವಿ  ಹಾಗೂ  ಪದವಿ ಪೂರ್ವಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

LEAVE A REPLY

Please enter your comment!
Please enter your name here