ಜಿಲ್ಲಾಡಳಿತದಿಂದ ಒನಕೆ ಓಬವ್ವ ಜಯಂತಿ ಆಚರಣೆ

0
41

ಬಳ್ಳಾರಿ,ನ.11: ವೀರ ವನಿತೆ ಒನಕೆ ಓಬವ್ವನ ವೀರತನ ಎಲ್ಲರಿಗೂ ಮಾದರಿಯಾಗಿದೆ, ಪ್ರತಿಯೊಬ್ಬ ಹೆಣ್ಣು ಮಕ್ಕಳು ಓಬವ್ವನ ಧೈರ್ಯ ಮತ್ತು ಸಾಹಸವನ್ನು ಆಳವಡಿಸಿಕೊಳ್ಳಬೇಕು ಎಂದು ಮಹಾನಗರ ಪಾಲಿಕೆ ಉಪ ಮೇಯರ್ ಬಿ.ಜಾನಕಿ ಅವರು ತಿಳಿಸಿದರು.

ಇಂದು ಬೆಳಿಗ್ಗೆ ನಗರದ ಡಾ.ರಾಜ್‍ಕುಮಾರ್ ರಸ್ತೆಯ ಸಾಂಸ್ಕøತಿಕ ಸಮುಚ್ಛಯ ಆವರಣದ ಹೊಂಗಿರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವೀರ ವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಚಿತ್ರದುರ್ಗ ಸಾಮ್ರಾಜ್ಯದಲ್ಲಿ ಹೈದರಾಲಿ ಸೈನ್ಯ ಕೋಟೆಯ ಮೇಲೆ ದಾಳಿ ಮಾಡಿದಾಗ ವೀರತನದಿಂದ ಸೈನ್ಯವನ್ನು ಹಿಮ್ಮೆಟ್ಟಿದ ದಿಟ್ಟ ಮಹಿಳೆ ಎಂದು ತಿಳಿಸಿದ ಅವರು, ಅವರ ನಿಷ್ಠೆ, ಪರಾಕ್ರಮ, ವೀರತನ, ಸಮಯ ಪ್ರಜ್ಞೆಯನ್ನು ಓಬವ್ವನನ್ನು ನೋಡಿ ಕಲಿಯಬೇಕು. ಆ ಸಮಯದಲ್ಲಿ ಓಬವ್ವ ತೋರಿದ ಧೈರ್ಯ ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಚೋರನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಎಂ.ರಾಜಣ್ಣ ಅವರು ಜಯಂತಿಯ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಕಂಪ್ಲಿ ತಾಲ್ಲೂಕು ತಹಶೀಲ್ದಾರ್ ಗೌಸಿಯಾಬೇಗಂ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಹೊನ್ನೂರಪ್ಪ.ಟಿ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಂ.ಶಿವಾಜಿರಾವ್ ಸೇರಿದಂತೆ ಸಮಾಜದ ಗಣ್ಯರು, ಇಲಾಖೆಯ ಸಿಬ್ಬಂದಿಗಳು ಹಾಗೂ ಇತರರು ಹಾಜರಿದ್ದರು.

ಗಮನ ಸೆಳೆದ ಮೆರವಣಿಗೆ, ಕಲಾತಂಡ:
ಸ್ವಾತಂತ್ರ್ಯ ಹೋರಾಟಗಾರ್ತಿ ಒನಕೆ ಓಬವ್ವ ಜಯಂತ್ಯೋತ್ಸವ ಅಂಗವಾಗಿ ಏರ್ಪಡಿಸಿದ್ದ ಮೆರವಣಿಗೆ ಹಾಗೂ ಸಾಂಸ್ಕøತಿಕ ಕಲಾ ತಂಡಗಳು ಗಮನಸೆಳೆದವು. ನಗರದ ನೂತನ ಜಿಲ್ಲಾಡಳಿತ ಭವನದ ಆವರಣದಲ್ಲಿ ಉಪ ಮೇಯರ್ ಬಿ.ಜಾನಕಿ ಅವರು, ಕಿತ್ತೂರು ರಾಣಿ ಚೆನ್ನಮ್ಮ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು.

ಮೆರವಣಿಗೆಯು ನೂತನ ಜಿಲ್ಲಾಡಳಿತ ಭವನದಿಂದ ಆರಂಭವಾಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಾಂಸ್ಕøತಿಕ ಸಮುಚ್ಚಯ ಆವರಣದ ಹೊಂಗಿರಣದ ವೇದಿಕೆ ಕಾರ್ಯಕ್ರಮಕ್ಕೆ ತಲುಪಿತು.

LEAVE A REPLY

Please enter your comment!
Please enter your name here