ಡಿ.30 ರಂದು ಜಿಲ್ಲಾಧಿಕಾರಿಗಳಿಂದ ಧಾರವಾಡದಲ್ಲಿ ತಾಲೂಕ ಮಟ್ಟದ ಜನತಾ ದರ್ಶನ

0
15

ಧಾರವಾಡ: ಡಿ.28 : ಸರ್ಕಾರದ ನಿರ್ದೇಶನದಂತೆ ತಾಲೂಕಾ ಮಟ್ಟದ ಜನತಾ ದರ್ಶನವನ್ನು ಧಾರವಾಡ ತಹಶೀಲ್ದಾರ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳು ಡಿಸೆಂಬರ 30 ರಂದು ಬೆಳಿಗ್ಗೆ 9 ಗಂಟೆಗೆ ಹಮ್ಮಿಕೊಂಡಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅಪರ ಜಿಲ್ಲಾಧಿಕಾರಿಗಳು, ಧಾರವಾಡ ತಾಲೂಕಿನ ಸಾರ್ವಜನಿಕರು ತಮ್ಮ ಅಹವಾಲು, ಮನವಿ, ಸಮಸ್ಯೆಗಳಿದಲ್ಲಿ ಡಿ. 30 ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯೊಜಿಸಿರುವ ಜನತಾ ದರ್ಶನದಲ್ಲಿ ಭಾಗವಹಿಸಿ, ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here