ಬಳ್ಳಾರಿ ಮಹಾನಗರ ಪಾಲಿಕೆಯ ನೂತನ ಮಹಾಪೌರರಾಗಿ ಬಿ.ಶ್ವೇತಾ ಅಧಿಕಾರ ಸ್ವೀಕಾರ

0
108

ಬಳ್ಳಾರಿ,ಜ.12: ಬಳ್ಳಾರಿ ಮಹಾನಗರ ಪಾಲಿಕೆಯ ನೂತನ ಮಹಾಪೌರರಾಗಿ ಬಿ.ಶ್ವೇತಾ ಅವರು ಶುಕ್ರವಾರ ಅಧಿಕಾರ ಸ್ವೀಕಾರ ಮಾಡಿದರು.

ಮಹಾನಗರ ಪಾಲಿಕೆಯ ಮೇಯರ್ ಕಚೇರಿ ಸಭಾಂಗಣದಲ್ಲಿ ನೂತನ ಮೇಯರ್ ಆದ ಬಿ.ಶ್ವೇತಾ ಅವರು ದಾಖಲಾತಿಯಲ್ಲಿ ಸಹಿ ಹಾಕುವುದರ ಮೂಲಕ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್‌ಸಾಬ್ ಅವರು ಹೂ ಗುಚ್ಛ ನೀಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಪಾಲಿಕೆಯ ಸದಸ್ಯರು, ಜನಪ್ರತಿನಿಧಿಗಳು ಹಾಗೂ ಪಾಲಿಕೆಯ ಅಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here