ಮಕ್ಕಳ ಹಕ್ಕುಗಳ ರಕ್ಷಣೆಯನ್ನು ಬಲಪಡಿಸಬೇಕು

0
49

ಹೊಸಪೇಟೆ: ಮಕ್ಕಳ ಹಿತ ಕಾಪಾಡಲು ಆಯಾ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಹೇಳಿದರು.

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಬೆಂಗಳೂರು ಮತ್ತು ವಿಜಯನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹೊಸಪೇಟೆ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾಡಳಿತ ಭವನದ ಸಭಾಂಗಣ, ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಇಲಾಖೆ, ಶಾಲಾ ಶಿಕ್ಷಣ, ಸಾಕ್ಷರತಾ ಇಲಾಖೆ, ವಿವಿಧ ಇಲಾಖೆಗಳ ಸಹಯೋಗದಲ್ಲಿ ಮಕ್ಕಳ ಹಕ್ಕುಗಳ ಕಾನೂನುಗಳ ಕುರಿತು ಮಧ್ಯಸ್ಥಗಾರರ ಎರಡು ದಿನಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳ ಹಕ್ಕುಗಳ ಕುರಿತು ಅನೇಕ ಕಾನೂನುಗಳನ್ನು ಜಾರಿಗೆ ತರಲಾಗಿದೆ. ಬಾಲ್ಯವಿವಾಹ ನಿಷೇಧ ಕಾಯಿದೆ ಜಾರಿಯಾಗಿದ್ದರೂ ಬಾಲ್ಯವಿವಾಹಗಳು ನಡೆಯುತ್ತಲೇ ಇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು. ಈ ಹಿನ್ನೆಲೆಯಲ್ಲಿ ಸಮಾಜದಲ್ಲಿ ಜವಾಬ್ದಾರಿಯುತ ಸ್ಥಾನದಲ್ಲಿರುವ ನಾವು ಮಕ್ಕಳಿಗೆ ನ್ಯಾಯ ಕೊಡಿಸಬೇಕೆಂದರು. ಮಕ್ಕಳ ಹಕ್ಕುಗಳ ವಿಚಾರದಲ್ಲಿ ದೋಷ ಕಂಡುಬಂದಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ಮತ್ತು ಮಾಹಿತಿ ನೀಡಬೇಕು.

ಈ ಸಂದರ್ಭದಲ್ಲಿ ಎಸ್ಪಿ ಶ್ರೀ ಹರಿಬಾಬು, ಅಪರ ಜಿಲ್ಲಾಧಿ ಕಾರಿ ಅನುರಾಧ, ಪಂಚಾಯತ್ ಮುಖ್ಯ ಯೋಜನಾಧಿಕಾರಿ ಅನುಧಾನ ಸ್ವಾಮಿ, ಜಿಲ್ಲಾ ಮಕ್ಕಳ ಕಲ್ಯಾಣಾಧಿಕಾರಿ ಸುದೀಪ್ ಕುಮಾರ್ ಉಂಕಿ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾಜಿ ಸದಸ್ಯ ರಾಘವೇಂದ್ರ ಹೆಚ್ ಸಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here