ಸಮಾಜದ ಅಂಕುಡೊಂಕು ತಿದ್ದಿದ ಮಹಾಸಂತ ಸರ್ವಜ್ಞ: ಮೇಯರ್ ಬಿ.ಶ್ವೇತ

0
38

ಬಳ್ಳಾರಿ,ಫೆ.20: ವಚನಯುಗದ ತ್ರಿಪದಿ ಬ್ರಹ್ಮ ಸಂತ ಸರ್ವಜ್ಞನು ಸಮಾಜದಲ್ಲಿನ ಅಂಕುಡೊಂಕುಗಳನ್ನು ತಮ್ಮ ತ್ರಿಪದಿ ವಚನ ಗಾಯನದ ಮೂಲಕ ತಿದ್ದಿ ಸಮಾನತೆ ಸಾರಿದವರು ಎಂದು ಮಹಾನಗರ ಪಾಲಿಕೆಯ ಮಹಾಪೌರರಾದ ಬಿ.ಶ್ವೇತ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಬಿ.ಡಿ.ಎ.ಎ ಫುಟ್‍ಬಾಲ್ ಮೈದಾನದ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಸಂತಕವಿ ಸರ್ವಜ್ಞ ಜಯಂತಿ ಕಾರ್ಯಕ್ರಮವನ್ನು ಸರ್ವಜ್ಞರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಸರ್ವಜ್ಞನು ವಚನಕಾಲದ ಶ್ರೇಷ್ಠ ದಾರ್ಶನಿಕ ವಚನಕಾರರಲ್ಲಿ ಒಬ್ಬರಾಗಿದ್ದಾರೆ. ಗಾದೆ ಮಾತಿನಂತೆ ಆಡು ಮುಟ್ಟದ ಸೊಪ್ಪಿಲ್ಲ, ಸರ್ವಜ್ಞರು ರಚಿಸದ ವಚನಗಳಿಲ್ಲ ಎಂದು ಸಂತ ಕವಿಯ ಜೀವನ ಪರಿಚಯ ತಿಳಿಸಿದರು.

ಬೆಂಗಳೂರಿನಿಂದ ಸಮೂಹ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಚಿಕ್ಕ ವೀರಯ್ಯ ಟಿ.ಎನ್ ಅವರು ವಿಶೇಷ ಉಪನ್ಯಾಸದಲ್ಲಿ ಮಾತನಾಡಿ, ಮಣ್ಣಲ್ಲಿ ಚಿನ್ನವನ್ನು ತೆಗೆಯುವ ಶಕ್ತಿ ಕುಂಬಾರ ಸಮುದಾಯದವರಿಗೆ ಇದೆ. ಇವರು ಒಗ್ಗಟ್ಟು, ಒಮ್ಮತ, ಐಕ್ಯತೆ ಭಾವನೆಯಿಂದ ಕೂಡಿರಬೇಕು ಎಂದರು.
ಸರ್ವಜ್ಞನು ಸರ್ವರಲ್ಲಿ ಬೆರೆತು ಕಲಿತ ನಂತರ ಶ್ರೇಷ್ಟ ವಚನಕಾರರಾದವರು ಎಂದು ಸಂತ ಸರ್ವಜ್ಞನ ಜೀವನ ಮತ್ತು ವಚನ ಗಾಯನಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಕೆ.ದೊಡ್ಡಬಸವ ಗವಾಯಿ ತಂಡದಿಂದ ವಚನ ಗಾಯನ ಪ್ರಸ್ತುತ ಪಡಿಸಿದರು.

ಈ ಸಂದರ್ಭದಲ್ಲಿ ಉಪ ಮೇಯರ್ ಬಿ.ಜಾನಕಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಜಿಲ್ಲಾ ಶಾಲಿವಾಹನ ಕುಂಬಾರ ಸಂಘದ ಅಧ್ಯಕ್ಷ ಪಿ.ವಿ.ನರಸಯ್ಯ ಸೇರಿದಂತೆ ಸಮಾಜದ ಮುಖಂಡರು, ಜನ ಪ್ರತಿನಿಧಿಗಳು ಹಾಗೂ ಇನ್ನೀತರರು ಉಪಸ್ಥಿತರಿದ್ದರು.

ಸಡಗರದ ಮೆರವಣಿಗೆ:
ಸಂತಕವಿ ಸರ್ವಜ್ಞ ಜಯಂತಿ ಅಂಗವಾಗಿ ಏರ್ಪಡಿಸಿದ್ದ ಮೆರವಣಿಗೆಯು ಸಡಗರದಿಂದ ನಡೆಯಿತು. ಮೆರವಣಿಗೆಗೆ ಮಹಾನಗರ ಪಾಲಿಕೆ ಮೇಯರ್ ಬಿ.ಶ್ವೇತ ಅವರು ಚಾಲನೆ ನೀಡಿದರು.

ಮೆರವಣಿಗೆಯು ನಗರದ ಹೆಚ್.ಆರ್. ಗವಿಯಪ್ಪ ವೃತ್ತದ ಬಳಿಯಿಂದ ಆರಂಭವಾಗಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಿಂದ ಗಡಿಗಿ ಚೆನ್ನಪ್ಪ ವೃತ್ತದ ಮಾರ್ಗವಾಗಿ ಬಿ.ಡಿ.ಎ.ಎ ಫುಟ್‍ಬಾಲ್ ಮೈದಾನದ ವೇದಿಕೆ ಸಭಾಂಗಣದವರೆಗು ಸಾಗಿ ಬಂದು ಅಂತ್ಯಗೊಂಡಿತು. ಮೆರವಣಿಗೆಯಲ್ಲಿ ವಿವಿಧ ಸಾಂಸ್ಕøತಿಕ ಕಲಾತಂಡಗಳು ಭಾಗವಹಿಸಿ ಮೆರಗು ನೀಡಿದವು.

LEAVE A REPLY

Please enter your comment!
Please enter your name here