ಸಂವಿಧಾನ ನಡಿಗೆ ಕತ್ತಲೆಯಿಂದ ಬೆಳಕಿನಡೆಗೆ: ಜಾಗೃತಿ ಜಾಥಾ

0
43

ಹೊಸಪೇಟೆ (ವಿಜಯನಗರ) : ವಿಜಯನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಹೊಸಪೇಟೆಯಲ್ಲಿ “ಸಂವಿಧಾನ ಜಾಗೃತಿ ನಡಿಗೆ – ಕತ್ತಲೆಯಿಂದ ಬೆಳಕಿನಡೆಗೆ” ಶೀರ್ಷಿಕೆಯಡಿ ಫೆ.20 ರಂದು ವಿಶೇಷ ಜಾಥಾ ನಡೆಯಿತು.

ವಿಜಯನಗರ ಜಿಲ್ಲಾ ಕೇಂದ್ರದ ಪುನೀತ್ ರಾಜ್‌ಕುಮಾರ್ ವೃತ್ತದಿಂದ ಅಂಬೇಡ್ಕರ್ ವೃತ್ತದವರೆಗೆ ಹಮ್ಮಿಕೊಂಡಿದ್ದ ಸಂವಿಧಾನ ಜಾಗೃತಿ ಜಾಥಾಕ್ಕೆ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಮಂಜುನಾಥ ಹೆಚ್.ಎಸ್. ಅವರು ಚಾಲನೆ ನೀಡಿದರು.

ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಸಂವಿಧಾನದ ಪೀಠಿಕೆಯನ್ನು ಬೋಧಿಸಲಾಯಿತು. ಮಾನವ ಸರಪಳಿ ರಚನೆ, ಪಂಜಿನ ಕವಾಯತ, ಮೇಣದ ಭತ್ತಿ ಬೆಳಗಿಸುವುದರ ಮೂಲಕ ಡಾ.ಅಂಬೇಡ್ಕರ್‌ರವರಿಗೆ ನಮನ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಿಶು ಅಭಿವೃದ್ದಿ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು, ಪೌರಕಾರ್ಮಿಕರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸಮಾಜ ಕಲ್ಯಾಣ ಇಲಾಖೆಯ ಎಲ್ಲಾ ಸಿಬ್ಬಂದಿ ವರ್ಗ ಮತ್ತು ವಸತಿ ನಿಲಯದ ವಿದ್ಯಾರ್ಥಿಗಳು, ವಿವಿಧ ಸಂಘಟನೆಯ ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ಬಳಿಕ ವಸತಿ ನಿಲಯದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.

LEAVE A REPLY

Please enter your comment!
Please enter your name here