ಕುಡಿಯುವ ನೀರಿನ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ತುರ್ತಾಗಿ ಪರಿಹರಿಸಬೇಕು: ಡಾ. ಕುಮಾರ

0
22

ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ತಹಶೀಲ್ದಾರರು ಮತ್ತು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಖುದ್ದು ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ತುರ್ತಾಗಿ ಪರಿಹರಿಸಬೇಕು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅವರು ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಮಾತನಾಡಿದರು.

ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ಖಾಸಗಿ ಬೋರ್ ವೆಲ್ ನೀರು ಪಡೆಯುವ ಮೊದಲು ತಹಶೀಲ್ದಾರ್, ಕಾರ್ಯನಿರ್ವಾಹಕ ಅಧಿಕಾರಿ, ಗ್ರಾಮೀಣ ಕುಡಿಯುವ ನೀರು ಇಲಾಖೆಯ ಅಭಿಯಂತರರು ಲಭ್ಯವಿರುವ ಬೋರ್ ವೆಲ್ ಗಳಲ್ಲಿ ನೀರು ಪಡೆಯಲು ಸಾಧ್ಯವಿಲ್ಲ ಎಂದು ದೃಢೀಕರಣ ನೀಡಬೇಕು. ನಂತರ ಅನುಮೋದನೆಯಾಗಿರುವ ದರಗಳಂತೆ ಖಾಸಗಿ ಬೋರ್ ವೆಲ್ ನಿಂದ ನೀರು ಪಡೆಯಬೇಕು ಎಂದರು.

ಗ್ರಾಮದಲ್ಲಿ ಇರುವ ಜನಸಂಖ್ಯೆ, ಬೋರ್ ವೆಲ್ ಗಳ ಸಂಖ್ಯೆ, ಮುಂದಿನ ಒಂದು ತಿಂಗಳಲಲ್ಲಿ ಸಮಸ್ಯೆ ಉಂಟಾಗಬಹುದಾದ ಗ್ರಾಮ, ಕಳೆದ 3-4 ವರ್ಷಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವ ಗ್ರಾಮ, ಸಮಸ್ಯೆ ಉಂಟಾದಲ್ಲಿ ಪರಿಹರಿಸಲು ಲಭ್ಯವಿರುವ ನೀರಿನ ಮೂಲ ಕುರಿತಂತೆ ವಿಸ್ತೃತ ಪಟ್ಟಿಯನ್ನು ಗ್ರಾಮ ವಾರು ಸಿದ್ಧಪಡಿಸಿಕೊಳ್ಳಿ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಆನಂದ್ ಕುಮಾರ್, ತಹಶೀಲ್ದಾರ್ ಶಿವಕುಮಾರ್ ಬಿರಾದಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ. ಮೋಹನ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ. ವಿ. ಎಸ್. ಅಶೋಕ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕಿ ರೂಪಶ್ರೀ, ಪಶು ಸಂಗೋಪನ ಇಲಾಖೆಯ ಉಪನಿರ್ದೇಶಕ ಡಾ. ಸುರೇಶ್, ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತ ಪುನೀತ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here