ಸಂವಿಧಾನ ಪಾತ್ರ ಅರಿಯಿರಿ:ರಜನಿ ಕುಮಾರಿ

0
26

ಬಳ್ಳಾರಿ,ಫೆ.28:ಸಮಾಜದಲ್ಲಿ ಸಂವಿಧಾನವು ಬಹಳ ಮಹತ್ವ ಪೂರ್ಣವಾಗಿದ್ದು, ಎಲ್ಲರೂ ಸಂವಿಧಾನವನ್ನು ಅರಿತುಕೊಳ್ಳಬೇಕು ಎಂದು ವುಂಕಿ ಸಣ್ಣ ರುದ್ರಪ್ಪ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ರಜನಿ ಕುಮಾರಿ ಅವರು ತಿಳಿಸಿದರು.

ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಅಂಗವಾಗಿ ಸಂವಿಧಾನದ ಆಶಯ ಮತ್ತು ಮೌಲ್ಯಗಳನ್ನು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ಮಂಗಳವಾರದಂದು ವುಂಕಿ ಸಣ್ಣ ರುದ್ರಪ್ಪ ಕಾನೂನು ಮಹಾವಿದ್ಯಾಲಯ ಸಭಾಂಗಣದಲ್ಲಿ ಸಂವಿಧಾನ ಕುರಿತು ಏರ್ಪಡಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸಂವಿಧಾನವೆಂದರೆ ಈ ದೇಶದ ಮೂಲಭೂತ ಕಾನೂನು. ಭಾರತದ ಎಲ್ಲಾ ಪ್ರಜೆಗಳು ಸಂವಿಧಾನದ ಬಗ್ಗೆ, ಪ್ರಜಾಪ್ರಭುತ್ವ, ಮತದಾನದ ಮಹತ್ವದ ಬಗ್ಗೆ ತಿಳಿದುಕೊಂಡರೆ ಮಾತ್ರ ಪ್ರಬುದ್ಧ ಭಾರತವನ್ನು ನಾವು ಕಾಣಬಹುದು. ಸಂವಿಧಾನದಡಿಯಲ್ಲಿ ಪ್ರತಿಯೊಬ್ಬರೂ ಸಮಾನರು ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಸಂವಿಧಾನದ ಪ್ರತಿಜ್ಞಾ ವಿಧಿಯನ್ನು ಭೋಧಿಸಿದರು.
ಬಳಿಕ, ನಗರದ ಬಳ್ಳಾರಿ ಬ್ಯುಸಿನೆಸ್ ಕಾಲೇಜಿನಲ್ಲಿ ಏರ್ಪಡಿಸಿದ್ದ ಸಂವಿಧಾನ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯರಾದ ಡಾ.ಎಂ.ರಾಮಚಂದ್ರ ಅವರು ಮಾತನಾಡಿ, ಸಂವಿಧಾನ ಒಂದೇ ಜಾತಿ, ಧರ್ಮಕ್ಕೆ ಸಂಬಂಧಿಸಿದಿಲ್ಲ. ಎಲ್ಲಾ ವರ್ಗದವರಿಗೂ ಸಂಬಂಧಿಸಿದ್ದು, ನಾವೆಲ್ಲರೂ ಸಂವಿಧಾನವನ್ನು ಉಳಿಸಿ ಬೆಳೆಸಿ ಕಾಪಾಡಿಕೊಂಡು ಹೋಗುವುದು ನಮ್ಮ ಕರ್ತವ್ಯವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿಯವರಾದ ಕೊಟ್ರೇಶ್, ಸ್ವಪ್ನಾ, ವೀರಾರೆಡ್ಡಿ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು, ಇನ್ನೀತರರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here