ಧಾರ್ಮಿಕ ಸಂಸ್ಕಾರವನ್ನು ಪಡೆಯುವುದು ಪ್ರತಿಯೊಬ್ಬರ ಪ್ರಗತಿಗೆ ಮತ್ತು ಶಾಂತಿಗೆ ಕಾರಣವಾಗುತ್ತದೆ: ಸಿದ್ದಲಿಂಗ ಶಿವಾಚಾರ್ಯ ಸ್ವಾಮಿಗಳು

0
11

ಸಂಡೂರು:ಮಾ: 12 : ಧಾರ್ಮಿಕ ಸಂಸ್ಕಾರವನ್ನು ಪಡೆಯುವುದು ಪ್ರತಿಯೊಬ್ಬರ ಪ್ರಗತಿಗೆ ಮತ್ತು ಶಾಂತಿಗೆ ಕಾರಣವಾಗುತ್ತದೆ ಅಂತಹ ಮಹತ್ತರ ಕಾರ್ಯವನ್ನು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯವರು ಹಮ್ಮಿಕೊಂಡಿರುವುದು ಉತ್ತಮಕಾರ್ಯವಾಗಿದೆ ಎಂದು ವಣ್ಣಗಿ ಮಠದ ಸಿದ್ದಲಿಂಗ ಶಿವಾಚಾರ್ಯ ಸ್ವಾಮಿಗಳು ತಿಳಿಸಿದರು.

ಅವರು ಸಂಡೂರು ತಾಲೂಕು ದರೋಜಿ ಗ್ರಾಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯವತಿಯಿಂದ ದರೋಜಿ ವಲಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ಮತ್ತು ಧಾರ್ಮಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿ ಇಂದು ನಮ್ಮ ಮಕ್ಕಳು ಮೊಬೈಲ್ ಹಿಂದೆ ಬಿದ್ದಿದ್ದಾರೆ, ಅಲ್ಲದೆ ಅಧುನಿಕ ಸಂಸ್ಕøತಿಗೆ ಮಾರು ಹೋಗುತ್ತಿದ್ದಾರೆ, ಮಹಿಳೆಯರು ಧಾರವಾಹಿಗಳ ದಾಸರಾಗುತ್ತಿದ್ದಾರೆ, ಶ್ರೀಕ್ಷೇತ್ರ ಧರ್ಮಸ್ಥಳ ಸಂಸ್ಥೆಯವರು ಇಂತಹ ಧಾರ್ಮಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಮೂಲಕ ಮಹಿಳೆಯರಲ್ಲಿ ಧಾರ್ಮಿಕ ಜಾಗೃತಿ ಉಂಟಾಗುವುದರ ಜೊತೆಗೆ ನಮ್ಮ ಸಂಸ್ಕøತಿಯನ್ನು ಉಳಿಸಿದಂತಹ ಮಹತ್ತರ ಕಾರ್ಯವಾಗುತ್ತದೆ, ಅಲ್ಲದೆ ಯುವಕರು ಇಂತಹ ಕಾರ್ಯಗಳಲ್ಲಿ ಭಾಗವಹಿಸಿದಲ್ಲಿ ಅವರು ಕೆಟ್ಟ ಹವ್ಯಾಸಗಳಿಂದ ದೂರ ಉಳಿಯಲು ಸಾಧ್ಯವಾಗುತ್ತದೆ, ಡಾ. ವೀರೇಂದ್ರ ಹೆಗ್ಗಡೆಯವರು ಕೈಗೊಂಡಿರುವ ಸಾಮಾಜಿಕ ಕಾರ್ಯಕ್ರಮಗಳು ಬಹು ಪ್ರಮುಖವಾಗಿದ್ದು ಸಾರ್ವಜನಿಕರು ಪೂರ್ಣಪ್ರಮಾಣದಲ್ಲಿ ಸದುಪಯೋಗ ಪಡಿಸಿಕೊಳ್ಳುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ನಾಂದಿಯಾಗಲಿ ಎಂದರು.

ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಜಿಲ್ಲಾ ನಿರ್ದೇಶಕರಾದ ರೋಹಿತಾಕ್ಷರವರು ಮಾತನಾಡಿ ಡಾ.ವೀರೇಂದ್ರ ಹೆಗ್ಗಡೆಯವರು ಹಾಗೂ ಹೇಮಾವತಿ ಅಮ್ಮನವರ ಕೃಪಾಶ್ರೀವಾದದಿಂದ ಇಂದು ಇಡೀ ಸಮಾಜದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ಸ್ವಚ್ಚತೆಯ ಅಭಿಯಾನ, ಸ್ಮಶಾನ ಅಭಿವೃದ್ದಿ ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಅನುದಾನ ನೀಡುವ ಮೂಲಕ ಸಮಾಜದಲ್ಲಿ ಉತ್ತಮ ಸಂಸ್ಕಾರ ಉಂಟುಮಾಡುವಂತಹ ಕಾರ್ಯವನ್ನು ಮಾಡುತ್ತಿದ್ದು ಸಮಾಜದ ಬಂಧುಗಳು ಅದನ್ನು ಪೂರ್ಣಪ್ರಮಾಣದಲ್ಲಿ ಸದುಪಯೋಗ ಪಡಿಸಿಕೊಳ್ಳುವ ಮೂಲಕ ಉತ್ತಮ ಕಾರ್ಯದಲ್ಲಿ ಪ್ರತಿಯೊಬ್ಬರೂ ಭಾಗಿಯಾಗಬೇಕು ಎಂದು ಸಂಸ್ಥೆ ಕೈಗೊಂಡ ಕಾರ್ಯಕ್ರಮಗಳ ಪೂರ್ಣ ಮಾಹಿತಿ ನೀಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಗೀತಾಗಣೇಶ್ ಅವರು ಮಾತನಾಡಿ ಸಮಾಜ ನೆಮ್ಮದಿಯಾಗಿರಬೇಕಾದರೆ ಇಂತಹ ಕಾರ್ಯಕ್ರಮಗಳು ಅತಿ ಅಗತ್ಯ ಅಂತಹ ಅಗತ್ಯಗಳನ್ನು ಪೂರೈಸುವಂತಹ ಸಂಸ್ಥೆಯಾಗಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆ ನಿರ್ವಹಿಸುತ್ತಿರುವುದು ನಮ್ಮ ಹೆಮ್ಮೆಯಾಗಿದೆ ಎಂದರು.

ತಾಲೂಕು ಯೋಜನಾಧಿಕಾರಿಗಳಾದ ಹಾಲಪ್ಪ ಎಂ.ಎ. ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಮಾಯಣ್ಣ,ನಾಗವೇಣಿ,ಹಂಪಮ್ಮ, ಊರಿನ ಗಣ್ಯರಾದ ಅಂಬಣ್ಣ ಹಾಗೂ ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಸ್ವಾಮಿ ತಾಲೂಕಿನ ಕೃಷಿ ಮೇಲ್ವಿಚಾರಕರಾದ ಸಂಜೀವ್, ಹಾಗೂ ಜ್ಞಾನವಿಕಾಸ ಸಮನ್ವಯ ಅಧಿಕಾರಿ ರೇಖಾ, ಕೃಷಿ ಮೇಲ್ವಿಚಾರಕರಾದ ರಾಜು , ವಲಯದ ಎಲ್ಲಾ ಸೇವಾ ಪ್ರತಿನಿಧಿಗಳು ಮತ್ತು ವಿ.ಎಲ್.ಇ ಗಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here