ಚುನಾವಣಾ ದೂರು ನಿಯಂತ್ರಣ ಕೊಠಡಿ, ಮಾಧ್ಯಮ ಪ್ರಮಾಣೀಕರಣ ಮತ್ತು ನಿಗಾ ಕೇಂದ್ರಕ್ಕೆ ಸಾಮಾನ್ಯ ವೀಕ್ಷಕ ಚಂದ್ರಶೇಖರ್ ಸಖಮುರಿ ಭೇಟಿ, ವೀಕ್ಷಣೆ

0
20

ಬಳ್ಳಾರಿ,ಏ.19: ಬಳ್ಳಾರಿ ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತವಾಗಿ ನಡೆಸಲು ಮತ್ತು ಅಕ್ರಮ ಚಟುವಟಿಕೆಗಳ ದೂರು ದಾಖಲು ಮಾಡಿಕೊಳ್ಳಲು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಈಗಾಗಲೇ ಕಾರ್ಯಪ್ರವೃತ್ತರಾಗಿರುವ ಚುನಾವಣಾ ದೂರು ನಿಯಂತ್ರಣ ಕೊಠಡಿ, ಮಾಧ್ಯಮ ಪ್ರಮಾಣೀಕರಣ ಮತ್ತು ನಿಗಾ ಕೇಂದ್ರಕ್ಕೆ ಸಾಮಾನ್ಯ ವೀಕ್ಷಕರಾದ ಚಂದ್ರಶೇಖರ್ ಸಖಮುರಿ ಅವರು ಶುಕ್ರವಾರ ಭೇಟಿ ನೀಡಿ ವೀಕ್ಷಣೆ ಮಾಡಿದರು.
ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ ಇಲ್ಲಿಯವರೆಗೆ ಚುನಾವಣಾ ಅಕ್ರಮಗಳಿಗೆ ಸಂಬಂಧಿಸಿದಂತೆ ಸಿ-ವಿಜಿಲ್ ಮೂಲಕ ಸಲ್ಲಿಕೆಯಾಗಿರುವ ದೂರುಗಳ ಮಾಹಿತಿ ಪಡೆದುಕೊಂಡರು. ಸಕಾಲದಲ್ಲಿ ವಿಲೇವಾರಿ ಮಾಡುವಂತೆ ಸೂಚಿಸಿದರು.

ಬಳಿಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಪ್ರಮಾಣೀಕರಣ ಮತ್ತು ನಿಗಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಚುನಾವಣೆ ಅಕ್ರಮ, ಕಾಸಿಗಾಗಿ ಸುದ್ದಿ ಹಾಗೂ ಇತರೆ ವಿಷಯಗಳ ಕುರಿತು ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗುವುದನ್ನು ಹದ್ದಿನ ಕಣ್ಣಿನಂತೆ ನಿಗಾವಹಿಸಬೇಕು ಎಂದು ಎಂಸಿಎಂಸಿ ಸಮಿತಿಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಸ್ವೀಪ್ ನೋಡೆಲ್ ಅಧಿಕಾರಿ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here