ಮತಗಟ್ಟೆಗೆ ಮೊದಲೇ ಬಂದು ನೋಡಿ ಮತದಾನ ಮಾಡಿ- ಸತೀಶ್

0
8

ಸಂಡೂರು: ಏ: 29: ಮತಗಟ್ಟೆಯನ್ನು ಮೊದಲೇ ನೋಡಿ ನಿಮಗೆ ಬೇಕಾದ ಸೌಲಭ್ಯ ಒದಗಿಸಿದೆ ಚುನಾವಣಾ ಆಯೋಗ ಎಂಬ ಅಂಶವನ್ನು ಇಟ್ಟುಕೊಂಡು ಇಂದು ನಮ್ಮ ನಡೆ ಮತಗಟ್ಟೆ ಕಡೆ ಎನ್ನುವ ಕಾರ್ಯಕ್ರಮವನ್ನು ಧ್ವಜಾರೋಹಣ ಮಾಡುವ ಮೂಲಕ ಚಾಲನೆ ನೀಡಿದ್ದೇವೆ ಎಂದು ತಾಲೂಕು ಸಹಾಯಕ ಚುನಾವಣಾಧಿಕಾರಿ ಸತೀಶ್ ತಿಳಿಸಿದರು.

ಅವರು ಇಂದು ಮಾನ್ಯ ಚುನಾವಣೆ ಆಯೋಗದ ಆದೇಶದಂತೆ ಸಂಡೂರು ತಾಲೂಕಿನ ತಾಲ್ಲೂಕು ಪಂಚಾಯಿತಿ ಅವರಣದಲ್ಲಿ ತಾಲೂಕು ಆಡಳಿತ ಹಾಗೂ ತಾಲೂಕು ಸ್ವೀಪ್ ಸಮಿತಿ ವತಿಯಿಂದ ನಡೆದ “ನಮ್ಮ ನಡೆ ಮತಗಟ್ಟೆ ಕಡೆ ಜಾಗೃತಿ ಹಾಗೂ ಧ್ವಜಾರೋಹಣ ಕಾರ್ಯಕ್ರಮ” ದ್ವಜಾರೋಹಣ ಮಾಡುವುದರ ಮೂಲಕ ನೆರವೇರಿ ತಾಲೂಕಿನ ವ್ಯಾಪ್ತಿಯ ಎಲ್ಲಾ ಮತದಾರರು ತಮ್ಮ ಮತ ಚಲಾಯಿಸುವ ಮತಗಟ್ಟೆಯನ್ನು ಮುಂಚಿತವಾಗಿ ಬಂದು ನೋಡಿ, ಮತಗಟ್ಟೆಯಲ್ಲಿ ಮತದಾನ ಮಾಡಲು ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು, ಮತದಾನದ ದಿನದಂದು ತಪ್ಪದೆ ಮತದಾನ ಮಾಡಿ ಸದೃಢ ಪ್ರಜಾಪ್ರಭುತ್ವ ನಿರ್ಮಾಣಕ್ಕೆ ಸಹಕರಿಸಿ ಎಂದರು. ಯಾವುದೇ ಆಮಿಷಗಳಿಗೆ ಒಳಗಾಗದೆ ವಿವೇಚನೆಯಿಂದ ಮತ ಚಲಾಯಿಸಿ ಹಾಗೂ ಯಾವುದೇ ಚುನಾವಣಾ ಅಕ್ರಮಗಳು ಕಂಡುಬಂದಲ್ಲಿ ತಕ್ಷಣ ಸಿ-ವಿಜಿಲ್ ಆಪ್ ನಲ್ಲಿ ದಾಖಲಿಸಲು ವಿನಂತಿಸಿದರು.ಸದರಿ ಕಾರ್ಯಕ್ರಮದಲ್ಲಿ ತಾಲ್ಲೂಕಿನ ತಹಶೀಲ್ದಾರರಾದ ಅನಿಲಕುಮಾರ್, ಸ್ವೀಪ್ ಸಮಿತಿ ಅಧ್ಯಕ್ಷರಾದ ಷಡಾಕ್ಷರಯ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾದಿಕಾರಿಯವರು , ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ, ತಾಲ್ಲೂಕು ಪಂಚಾಯತಿ ಸಿಬಂದ್ದಿ, ಸ್ವಸಹಾಯ ಸಂಘದ ಸದಸ್ಯರು ಹಾಜರಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ತಾಲ್ಲೂಕಿನಾದ್ಯಂತ ಎಲ್ಲಾ ಗ್ರಾಮಗಳಲ್ಲಿ ಮತದಾನ ಜಾಗೃತಿ ಜಾಥಾ ಕೈಗೊಂಡು ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ, ಬಣ್ಣ ಬಣ್ಣದ ರಂಗೋಲಿ ಬಿಡಿಸಿ ಮತದಾರರನ್ನು ಮತಗಟ್ಟೆ ಗೆ ಸೆಳೆದರು. ಎಲ್ಲ ಮತಗಟ್ಟೆ ಗಳಲ್ಲಿ ಹಬ್ಬದ ರೀತಿಯಲ್ಲಿ ನಮ್ಮ ನಡೆ ಮತಗಟ್ಟೆ ಕಡೆ ಕಾರ್ಯಕ್ರಮ ವನ್ನು ಧ್ವಜರೋಹಣ ನೆರವೇರಿಸುವುದರ ಮೂಲಕ ಮತದಾರರಲ್ಲಿ ದಿನಾಂಕ 07.05.2024 ರಂದು ತಪ್ಪದೆ ಮತಗಟ್ಟೆ ಗೆ ಬಂದು ತಮ್ಮ ಹಕ್ಕು ಚಲಾಯಿಸಿ ಮತದಾನ ಮಾಡಿ ಎಂದು ಜಾಗೃತಿ ಮೂಡಿಸಲಾಯಿತು.

LEAVE A REPLY

Please enter your comment!
Please enter your name here