ಮತದಾನ ಜಾಗೃತಿಗೆ ‘ಸಾಂಸ್ಕøತಿಕ ಕಾರ್ಯಕ್ರಮ’ ಪ್ರತಿ ಮತ ಅಮೂಲ್ಯ, ತಪ್ಪದೇ ಚಲಾಯಿಸಿ: ಜಿಲ್ಲಾ ಚುನಾವಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಕರೆ

0
9

ಬಳ್ಳಾರಿ,ಮೇ 05:ಬಳ್ಳಾರಿ ಲೋಕಸಭೆ ಕ್ಷೇತ್ರಕ್ಕೆ ಮೇ 07 ರಂದು ಮತದಾನ ನಡೆಯಲಿದ್ದು, ಪ್ರತಿ ಮತವು ಅಮೂಲ್ಯವಾಗಿದ್ದು, ತಪ್ಪದೇ ಮತ ಚಲಾಯಿಸಿ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಕರೆ ನೀಡಿದರು.

ಅವರು ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನದ ಜಾಗೃತಿ ಅಂಗವಾಗಿ ನಗರದ ಹೆಚ್.ಆರ್.ಗವಿಯಪ್ಪ (ಮೋತಿ) ವೃತ್ತದಲ್ಲಿ ಶನಿವಾರ ಸಂಜೆ ಏರ್ಪಡಿಸಿದ್ದ ಸಾಂಸ್ಕøತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮತದಾನದ ಮೌಲ್ಯ ಅರಿತುಕೊಂಡು, ಪ್ರತಿಯೊಬ್ಬರೂ ನಿಷ್ಠೆಯಿಂದ ಮತ ಚಲಾಯಿಸಬೇಕು. ಜಿಲ್ಲೆಯ ಶೇಕಡವಾರು ಮತದಾನ ಪ್ರಮಾಣ ಹೆಚ್ಚಾಗಲು ತಾವು ಮಾತ್ರವಲ್ಲದೆ, ತಮ್ಮ ನೆರೆಹೊರೆಯವರೂ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ತಿಳಿಸಬೇಕು ಎಂದರು.
ಈ ಬಾರಿ ಬಿಸಿಲಿನ ಬೇಗೆ ಜಾಸ್ತಿಯಿರುವುದರಿಂದ ನಾಗರಿಕರು ಆದಷ್ಟು ಬೇಗನೇ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡಬೇಕು ಎಂದು ಸಲಹೆ ಮಾಡಿದರು.
ಯಾವುದೇ ಆಸೆ ಆಮೀಷಗಳಿಗೆ ಒಳಗಾಗದೆ ನಿರ್ಭೀತರಾಗಿ ಮತಗಟ್ಟೆಗೆ ತೆರಳಿ ಮತ ಚಲಾವಣೆ ಮಾಡಬೇಕು ಎಂದರು.

ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯ ಮತದಾನ ಪ್ರಮಾಣ ಹೆಚ್ಚಳಕ್ಕೆ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಹಲವಾರು ವಿಭಿನ್ನ ಕಾರ್ಯಕ್ರಮ ಆಯೋಜಿಸಿದ್ದು, ಸಾರ್ವಜನಿಕರು ತಪ್ಪದೇ ಮತ ಚಲಾಯಿಸಿ ಮತದಾನ ಪ್ರಮಾಣ ಹೆಚ್ಚಳಕ್ಕೆನ ಸಹಕರಿಸಬೇಕು ಎಂದು ಕೋರಿದರು.
ಮತಗಟ್ಟೆಗಳಿಗೆ ಬರುವ ಮತದಾರರಿಗೆ ಉತ್ತಮ ಅನುಭವ ಹೊಂದಲು ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸುವ ಮೂಲಕ ಸಕಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ಅದೇರೀತಿಯಾಗಿ ನೆರಳಿಗೆ ಶ್ಯಾಮಿಯಾನ, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಸೇರಿದಂತೆ ವಿಕಲಚೇತನರಿಗೆ, ಹಿರಿಯನಾಗರಿಕರಿಗೆ ರ್ಯಾಂಪ್, ವೀಲ್‍ಚೇರ್ ಹಾಗೂ ವಿಶೇಷ ಸಾಲಿನಲ್ಲಿ ಬಂದು ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಮತದಾನ ಜಾಗೃತಿಗೆ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಯವರನ್ನೊಳಗೊಂಡಂತೆ ಸ್ವೀಪ್ ಚಟುವಟಿಕೆಗಳಲ್ಲಿ ಉತ್ಸುಕರಾಗಿ ಭಾಗವಹಿಸಿ ನಿಷ್ಠೆಯಿಂದ ಕಾರ್ಯ ನಿರ್ವಹಿಸಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಜಿಲ್ಲಾ ಸ್ವೀಪ್ ಐಕಾನ್ ಆದ ಎಸ್.ಕೆ.ಆರ್.ಜಿಲಾನ್ ಭಾಷಾ ಅವರು ಮಾತನಾಡಿ, ಮತದಾನ ದಿನದಂದು ರಜೆ ಇದೆ ಎಂದು ಮೊಬೈಲ್ ಗೀಳಿಗೆ ಅವಲಂಬಿತರಾಗದೇ ಪ್ರತಿಯೊಬ್ಬರೂ ತಪ್ಪದೇ ಮತಗಟ್ಟೆಗಳಿಗೆ ತೆರಳಿ ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ, ತಮ್ಮ ಕರ್ತವ್ಯವನ್ನು ನಿಭಾಯಿಸಬೇಕು ಎಂದರು.
ಇದೇ ವೇಳೆ ಮತದಾರರ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.

ಕಣ್ಮನ ಸೆಳೆದ ಸಾಂಸ್ಕøತಿಕ ಕಾರ್ಯಕ್ರಮಗಳು:
ಮತದಾನ ಜಾಗೃತಿ ಅಭಿಯಾನ ಅಂಗವಾಗಿ ಆಯೋಜಿಸಿದ್ದ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಬಯಲಾಟ ಸನ್ನಿವೇಷಗಳು, ಜಾನಪದ ಗೀತೆಗಳು, ಗಾಯನ, ಭರತನಾಟ್ಯ ಸೇರಿದಂತೆ ಸಮೂಹ ನೃತ್ಯಗಳು ನೋಡುಗರ ಮೈಮನ ಸೆಳೆಯಿತು.
ಮುದ್ದಟನೂರಿನ ಹೆಜ್ಜೆ-ಗೆಜ್ಜೆ ಕಲಾತಂಡದವರಿಂದ ಬಯಲಾಟ ಸನ್ನಿವೇಶ, ಚಿಗುರು ಕಲಾತಂಡದಿಂದ ಜಾನಪದ ಗೀತೆಗಳು, ಜಡೇಶ್ ಎಮ್ಮಿಗನೂರು ಅವರಿಂದ ಗಾಯನ ರಸಮಂಜರಿ ಮತ್ತು ಜಿಲಾನ್ ಭಾಷಾ ಅವರ ತಂಡ, ಇಂದ್ರಾಣಿಯವರ ತಂಡ ಹಾಗೂ ಬಲಕುಂದಿ ಬಸವರಾಜ ತಂಡದವರಿಂದ ಭರತನಾಟ್ಯ ಕಾರ್ಯಕ್ರಮ ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಸೆಲ್ಪಿ ಬೂತ್ ತೆರೆಯಲಾಗಿದ್ದು, ಸಾರ್ವಜನಿಕರು ಫೋಟೊ ಕ್ಲಿಕ್ಕಿಸಿಕೊಂಡು ಸಂತಸಪಟ್ಟರು.
ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಪ್ರಾದೇಶಿಕ ಉಪವಿಭಾಗದ ಉಪ ಸಂರಕ್ಷಣಾಧಿಕಾರಿ ಸಂದೀಪ್ ಹೆಚ್.ಸೂರ್ಯವಂಶಿ, ಮಹಾನಗರ ಪಾಲಿಕೆ ಆಯುಕ್ತ ಜಿ,ಖಲೀಲ್ ಸಾಬ್, ಜಿಲ್ಲಾ ಪಂಚಾಯತ್‍ನ ಮುಖ್ಯ ಯೋಜನಾಧಿಕಾರಿ ವಾಗೇಶ್ ಶಿವಾಚಾರ್ಯ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ್, ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಯವರು ಸೇರಿದಂತೆ ಕಲಾವಿದರು, ಸಾರ್ವಜನಿಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here