ನರೇಗಾ ಕಾಮಗಾರಿ: ಜಿಪಂ ಸಿಇಒ ಅವರಿಂದ ವಿವಿಧೆಡೆ ಭೇಟಿ, ವೀಕ್ಷಣೆ

0
82

ಬಳ್ಳಾರಿ,ಮೇ 16: ತಾಲ್ಲೂಕಿನ ವಿವಿಧ ಗ್ರಾಮಗಳ ಗ್ರಾಮ ಪಂಚಾಯಿತಿಗಳಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅನುಷ್ಠಾನಗೊಳಿಸಿದ ಕಾಮಗಾರಿಗಳನ್ನು ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಗುರುವಾರ ವೀಕ್ಷಣೆ ಮಾಡಿದರು.

ಬಳ್ಳಾರಿ ತಾಲ್ಲೂಕಿನ ಬೈರದೇವನಹಳ್ಳಿ ಗ್ರಾಮದಲ್ಲಿ ಕೈಗೊಂಡಿರುವ ಸಿಸಿ ಚರಂಡಿ ಕಾಮಗಾರಿ ವೀಕ್ಷಣೆ ನಡೆಸಿ, ಕಾಮಗಾರಿ ಗುಣಮಟ್ಟತೆ ಕಾಯ್ದುಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಬಳಿಕ ಶಿವಪುರ ಗ್ರಾಮದಲ್ಲಿ ಅರಣ್ಯ ಇಲಾಖೆಯ ನರ್ಸರಿ ಕ್ಷೇತ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೋಕಾದಲ್ಲಿ ಕೃಷಿ ಹೊಂಡ ನಿರ್ಮಾಣ ಕಾಮಗಾರಿ ವೀಕ್ಷಿಸಿದರು.

ನಂತರದಲ್ಲಿ ಕಾರೇಕಲ್ಲು ಗ್ರಾಮದಲ್ಲಿ ಕೃಷಿ ಇಲಾಖೆಯ ಬದು ಮತ್ತು ಕೃಷಿ ಹೊಂಡ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದರು. ಶಿಡಿಗಿನಮೋಳ ಮತ್ತು ಮೀನಹಳ್ಳಿ ಗ್ರಾಮದಲ್ಲಿ ಶಾಲಾ ಕಾಂಪೌಂಡ್ ನಿರ್ಮಾಣ, ಪರಮದೇವನಹಳ್ಳಿ ಗ್ರಾಮದಲ್ಲಿ ಸ್ಮಶಾನ ಕಾಮಗಾರಿಗಳನ್ನು ಪರಿಶೀಲನೆ ಮಾಡಿದರು.

ಈ ವೇಳೆ ಬಳ್ಳಾರಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಡಗಿನ ಬಸಪ್ಪ, ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಹಾಯಕ ನಿರ್ದೇಶಕ ಬಸವರಾಜ ಸೇರಿದಂತೆ ಅನುಷ್ಠಾನ ಇಲಾಖೆಯ ಅಧಿಕಾರಿಗಳು, ಟಿಸಿ, ಟಿಐಇಸಿ, ಟಿಎಂಐಎಸ್, ಪಿಡಿಒ, ಟಿಎಇ, ಡಿಇಓ, ಬಿಎಫ್‍ಟಿ, ಗ್ರಾಮ ಕಾಯಕ ಮಿತ್ರರು ಮತ್ತು ಗ್ರಾಮ ಪಂಚಾಯತಿ ಸಿಬ್ಬಂದಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here