ಸರ್ಕಾರಿ ಪದವಿ ಕಾಲೇಜು ಆರಂಭಿಸಲು :ಎನ್ ಎಫ್ ಐ ಡಬ್ಲ್ಯೂ ರಾಜ್ಯ ಕಾರ್ಯದರ್ಶಿ ಕೆ ರೇಣುಕಮ್ಮ  ಒತ್ತಾಯ

0
130

ಕೊಟ್ಟೂರು : ಪಟ್ಟಣದಲ್ಲಿ ಸರ್ಕಾರಿ ಪದವಿ ಕಾಲೇಜು ಆರಂಭಿಸಬೇಕು ಎನ್ನುವ ಬೇಡಿಕೆ ಹಾಗೆಯೇ ಉಳಿದಿದೆ.
ಈಗಾಗಲೇ ಎರಡೂ ಬಾರಿ ಇನ್ನೇನು ಪ್ರಾರಂಭ ವಾಗಬೇಕೆಂಬುವ ಆಶಯ ಹೊತ್ತ ಕೊಟ್ಟೂರು ಹಾಗೂ ಸುತ್ತಮುತ್ತಲಿನ ತಾಲೂಕಿನ ವಿದ್ಯಾರ್ಥಿಗಳಿಗೆ ಸರ್ಕಾರ  ನಿರಾಸೆಗೊಳಿಸಿತು.

ಕೊಟ್ಟೂರು ತಾಲೂಕಿನಲ್ಲಿ ಹಲವು ಸಂಘಟನೆಗಳು ಪದವಿಪೂರ್ವ ಕಾಲೇಜ್ ಗೆ ಶಿಫಾರಸ್ಸು ಮಾಡಿದ್ದರೂ ಜನಪ್ರತಿನಿಧಿಗಳು ಕಾಲೇಜು ಆರಂಭಕ್ಕೆ ಮೀನಮೇಷ ಎಣಿಸುತ್ತಿದ್ದಾರೆ. ಶೀಘ್ರವೇ ಕಾಲೇಜು ಆರಂಭಿಸಬೇಕು.

ತಾಲ್ಲೂಕು ಕೇಂದ್ರವಾಗಿ ಹಲವು ದಿನಗಳು ಕಳೆದರೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪದವಿ ಕಾಲೇಜಿಗೆ ನೆರೆಯ ಜಿಲ್ಲಾಗಳಿಗೆ ತೆರಳುತ್ತಿದ್ದಾರೆ.

ಅನಿವಾರ್ಯವಾಗಿ ಕೆಲ ವಿದ್ಯಾರ್ಥಿಗಳು ಖಾಸಗಿ ಕಾಲೇಜುಗಳ ಮೊರೆ ಹೋಗಿದ್ದಾರೆ. ನಿತ್ಯ ಓಡಾಟವೇ ದಿನಚರಿ ಯಾಗಿದೆ. ಬಡ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ.

ಅನೇಕ ವಿದ್ಯಾರ್ಥಿ ಸಂಘಟನೆಗಳು ಕಾಲೇಜು ಮಂಜೂರಾತಿಗೆ ಮನವಿ ಸಲ್ಲಿಸಿದ್ದರೂ ಪ್ರಯೋಜನೆ ಯಾಗಿಲ್ಲ. ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆಯಿಂದ ಕಾಲೇಜು ಆರಂಭ ನನೆಗುದಿಗೆ ಬಿದ್ದಿದೆ ಎಂದು ದೂರಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ ಕೂಡಲೇ ಸರ್ಕಾರ ಕಾಲೇಜು ಆರಂಭಕ್ಕೆ ಮುಂದಾಗಬೇಕು ಎಂದು ಎನ್ ಎಫ್ ಐ ಡಬ್ಲ್ಯೂ ರಾಜ್ಯ ಕಾರ್ಯದರ್ಶಿ ಕೆ ರೇಣುಕಮ್ಮ  ಒತ್ತಾಯಿಸಿದರು.

ವರದಿ: ಶಿವರಾಜ್ ಕನ್ನಡಿಗ

LEAVE A REPLY

Please enter your comment!
Please enter your name here