ಬಳ್ಳಾರಿ,ನ.05:ಮನುಷ್ಯನಿಗೆ ಪಾರ್ಶ್ವವಾಯು ಸಂಭವಿಸಿದಾಗ ಮೊದಲ ನಾಲ್ಕು ಗಂಟೆ ಸಮಯದಲ್ಲಿ ನಿರ್ಲಕ್ಷ್ಯ ವಹಿಸದೇ ತಕ್ಷಣ ಹತ್ತಿರ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್.ಎನ್ ಹೊಸಮನೆ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಮೆದುಳಿನ ಆರೋಗ್ಯ ಉಪಕ್ರಮ, ಜಿಲ್ಲಾ ಮೆದುಳಿನ ಆರೋಗ್ಯ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ನಗರದ ಅನಂತಪುರ ರಸ್ತೆಯ ಜಿಲ್ಲಾ ಆಸ್ಪತ್ರೆ ಆವರಣದ ಮೆದುಳಿನ ಚಿಕಿತ್ಸಾ ಕೇಂದ್ರದಲ್ಲಿ ಮಂಗಳವಾರ ಆಯೋಜಿಸದ್ದ ವಿಶ್ವ ಸ್ಟ್ರೋಕ್ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದೈಹಿಕ ಬಲಹೀನತೆ, ಮೆದುಳು ನಿಷ್ಕ್ರಿಯತೆ ಲಕ್ಷಣ ಹೊಂದಿದ ಸ್ಟ್ರೋಕ್ ಖಾಯಿಲೆಯು ನಾಟಿ ಔಷಧಿಯಿಂದ ಸಂಪೂರ್ಣ ಗುಣಮುಖವಾಗುವುದಿಲ್ಲ, ಬದಲಾಗಿ ಆಧುನಿಕ ಚಿಕಿತ್ಸೆಯಿಂದ ಸಂಪೂರ್ಣ ಗುಣಮುಖವಾಗುವ ಭರವಸೆ ಇದೆ ಎಂದು ತಿಳಿಸಿದರು.
ಜಿಲ್ಲಾ ಆಸ್ಪತ್ರೆಯಲಿ ಸ್ಟ್ರೋಕ್ ಖಾಯಿಲೆಗೆ ತಜ್ಞ ವೈದ್ಯರಿಂದ ಸ್ಪೀಚ್ ತೆರಪಿ, ಫಿಸಿಕಲ್ ಥೆರಪಿ ಸೌಲಭ್ಯವಿದೆ ಹಾಗೂ ಇತರೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಸೌಲಭ್ಯವಿದ್ದು, ಸಾರ್ವಜನಿಕರು ಸದುಪಯೋಗಪಡೆದುಕೊಳ್ಳಬೇಕು ಎಂದರು.
ಜೀವನ ಶೈಲಿಯ ಬದಲಾವಣೆಯಿಂದ ಆರೋಗ್ಯದಲ್ಲಿ ಏರು-ಪೇರು ಉಂಟಾಗುವ ಸಾಧ್ಯತೆ ಇದ್ದು, ನಿಯಮಿತ ಆಹಾರ ಸೇವನೆ, ಯೋಗ-ವ್ಯಾಯಾಮ, ಸಂಗೀತ ಆಲಾಪನೆ ಸೇರಿದಂತೆ ಇತರೆ ಕ್ರಿಯಾಶೀಲ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳುವ ಮೂಲಕ ಶಿಸ್ತಿನ ಜೀವನ ನಡೆಸಿ ಸುಸ್ಥಿರ ಆರೋಗ್ಯ ಹೊಂದಬೇಕು ಎಂದು ಅವರು ಕರೆ ನೀಡಿದರು.
ಜಿಲ್ಲಾ ಶಸ್ತçಚಿಕಿತ್ಸಕ ಡಾ.ಬಸರೆಡ್ಡಿ.ಎನ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಅಧಿಕ ರಕ್ತದೊತ್ತಡ, ಹೆಚ್ಚಿನ ಮಧುಮೇಹ, ತಲೆಸುತ್ತು, ರಕ್ತ ಪರಿಚಲನೆಯಲ್ಲಿ ಬದಲಾವಣೆ ಲಕ್ಷಣಗಳು ಕಂಡುಬAದಲ್ಲಿ ತಕ್ಷಣವೇ ವೈದ್ಯರನ್ನು ಸಂಪರ್ಕಿಸಿ, ಅಗತ್ಯ ಚಿಕಿತ್ಸೆ ಪಡೆದುಕೊಳ್ಳುವ ಮೂಲಕ ರೋಗಮುಕ್ತರಾಗಬೇಕು ಎಂದು ಹೇಳಿದರು.
ಯಾವುದೇ ಖಾಯಿಲೆಯಿಂದ ಬಳಲುತ್ತಿರುವವರು ಆತ್ಮಸ್ಟೈರ್ಯದಿಂದ ಜೀವನ ನಡೆಸಬೇಕು. ಉತ್ತಮ ಆರೋಗ್ಯ ಹೊಂದಲು ಮಧ್ಯಸೇವನೆ, ಧೂಮಪಾನ ವ್ಯಸನದಿಂದ ದೂರವಿರಬೇಕು ಹಾಗೂ ಸ್ಟ್ರೋಕ್ ಸೇರಿದಂತೆ ಸಂಬಂಧಿಸಿದ ಖಾಯಿಲೆಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದರು.
ಈ ವೇಳೆ ಸ್ಟ್ರೋಕ್ ಖಾಯಿಲೆ ಅರಿವು ಮೂಡಿಸಲು ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿ ವತಿಯಿಂದ ಕಿರು-ನಾಟಕ ಪ್ರದರ್ಶಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಆಸ್ಪತ್ರೆಯ ಸ್ಥಾನಿಕ ವೈದ್ಯಾಧಿಕಾರಿ ಡಾ.ವಿಶ್ವನಾಥ.ಕೆ., ಜಿಲ್ಲಾ ಆಸ್ಪತ್ರೆಯ ವಿಭಾಗೀಯ ಮುಖ್ಯಸ್ಥರೂ ಹಾಗೂ ತಜ್ಞ ವೈದ್ಯರಾದ ಡಾ.ಯೋಗಾನಂದ ರೆಡ್ಡಿ, ಮೆದುಳಿನ ಆರೋಗ್ಯ ಚಿಕಿತ್ಸಾ ಕೇಂದ್ರದ ತಜ್ಞ ವೈದ್ಯ ಹಾಗೂ ನೋಡಲ್ ಅಧಿಕಾರಿ ಡಾ.ರಾಕೇಶ್, ಜಿಲ್ಲಾ ಆಸ್ಪತ್ರೆಯ ಶುಶ್ರೂಷಾಧೀಕ್ಷಕಿ ವಿಮಲಾಕ್ಷಿ, ನರರೋಗ ತಜ್ಞರಾದ ಕಮಾಲ್ ಕುಮಾರ್ ಜೈನ್, ಪೈಥಾಲಾಜಿಸ್ಟ್ ಉದಯ್ ಶಂಕರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ.ಹೆಚ್ ದಾಸಪ್ಪನವರ, ಕರ್ನಾಟಕ ಮೆದುಳಿನ ಆರೋಗ್ಯ ಉಪಕ್ರಮದ ಜಿಲ್ಲಾ ಕಾರ್ಯಕ್ರಮ ಸಂಯೋಜಕ ಸಣ್ಣಕೇಶವ ಸೇರಿದಂತೆ ಜಿಲ್ಲಾ ಆಸ್ಪತ್ರೆಯ ವೈದ್ಯರು, ಸಿಬ್ಬಂದಿ, ಸಾರ್ವಜನಿಕರು ಹಾಗೂ ಇತರರು ಉಪಸ್ಥಿತರಿದ್ದರು.