ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ವ್ಯಕ್ತಿಗಳು ಸಮಾಜದಲ್ಲಿ ತಪ್ಪು ಮಾಡಲು ಸಾಧ್ಯವಿಲ್ಲ. ಯುವ ಜನತೆ ನಕಾರಾತ್ಮಕ ಚಿಂತನೆಗಳನ್ನು ತೆರೆದು ಸಕಾರಾತ್ಮಕವಾಗಿ ಚಿಂತನೆಗಳನ್ನು ಮೈಗೂಡಿಸಿಕೊಂಡಾಗ, ಕಠಿಣ ಪರಿಶ್ರಮ ಪಟ್ಟಲ್ಲಿ ಜೀವನದಲ್ಲಿ ಯಶಸ್ಸುಗಳಿಸಲು ಸಾಧ್ಯ. ವಿವೇಕಾನಂದರಂತಹ ಮಹಾನ್ ವ್ಯಕ್ತಿಗಳ ಚರಿತ್ತೆ ಓದಿ ತಿಳಿಯಬೇಕಾಗಿದೆ. ಉತ್ತಮ ಆಲೋಚನೆಗಳಿಂದ ಸಮಾಜದಲ್ಲಿ ಮಹಾನ್ ವ್ಯಕ್ತಿಗಳಾಗಿದ್ದಾರೆ. ಅಂತಹ ಮಹಾನೀಯರ ಆದರ್ಶಗುಣಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕಾಗಿದೆ. ನಾನು ಎನ್ನುವ ಮನೋಭಾವನೆಯನ್ನು ತೊರೆದು ನಾವು ಎನ್ನುವ ಮನೋಭಾವನೆ ಬೆಳೆಸಿಕೊಳ್ಳಬೇಕಾಗಿದೆ ಎಂದು ಸಂಡೂರಿನ ಜೆ.ಎಂ.ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶರಾದ ದೇವಾರೆಡ್ಡಿ ಅಭಿಪ್ರಾಯಪಟ್ಟರು.
ಅವರು ಪಟ್ಟಣದ ಕೃಪಾನಿಲಯ ಶಾಲೆಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ತಾಲೂಕು ವಕೀಲರ ಸಂಘ, ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಹಿರಿಯ ವಕೀಲರಾದ ಅರ್. ವೀರೇಶಪ್ಪ ರಾಷ್ಟ್ರೀಯ ಯುವ ದಿನಾಚರಣೆ ಕುರಿತು ಉಪನ್ಯಾಸ ನೀಡಿ ಸ್ವಾಮಿ ವಿವೇಕಾನಂದರ ಜೀವನ ಸಾಧನೆ ಯುವ ಜನಾಂಗಕ್ಕೆ ಪ್ರೇರಣೆಯಾಗಿದೆ. ದೇಶದ ಸಂಸ್ಕೃತಿಯನ್ನು ಪ್ರಪಂಚಕ್ಕೆ ಪರಿಚಯಿಸಿದ ಮಹಾನ್ ವ್ಯಕ್ತಿ ಸ್ವಾಮಿ ವಿವೇಕಾನಂದರು. ಅವರ ಜನ್ಮ ದಿನವನ್ನು ಯುವ ದಿನವನ್ನಾಗಿ ಆಚರಿಸಲಾಗುತ್ತಿದೆ ತಮ್ಮ ಜೀವನ್ನವನು ಸಮಾಜ ಸುಧಾರಣೆಗೆ ದೇಶಕ್ಕಾಗಿ ಮುಡಿಪಾಗಿಟ್ಟರು ಎಂದು ತಿಳಿಸಿದರು.
ಹಿರಿಯ ವಕೀಲರಾದ ಟಿ.ಎಂ. ಶಿವಕುಮಾರ್, ಕೃಪಾನಿಲಯ ಸಂಸ್ಥೆಯ ವ್ಯವಸ್ಥಾಪಕಿ ಸಿಸ್ಟರ್ ಸಿಸಿಲಿ ಫೆಲಿಕ್ಸ್, ವಕೀಲರ ಸಂಘದ ಅಧ್ಯಕ್ಷ ಅರಳಿ ಮಲ್ಲಪ್ಪ ಮಾತನಾಡಿದರು.
ಕಾರ್ಯಕ್ರಮದಲ್ಲಿ ಕ್ಷೇತ್ರ ಸಮನ್ವಯ ಅಧಿಕಾರಿ ಶರಣಪ್ಪ ಕರಿಶೆಟ್ರು. ಕೆ.ಅರ್. ದಾದಾಪೀರ್, ಹೆಚ್. ಕುಮಾರಸ್ವಾಮಿ ಮಂಜುನಾಥಗೌಡ. ಎಂ.ಪಿ.ಎಂ. ಸುರೇಂದ್ರನಾಥ, ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಡಿ.ನಾಗರಾಜ ನಿರೂಪಿಸಿದರು. ಮಹಾರುದ್ರಪ್ಪ ವಂದಿಸಿದರು. ಶಾಲಾ ಮಕ್ಕಳು ಪ್ರಾರ್ಥಿಸಿದರು.