Monday, October 27, 2025
HomeDistrictsBallariಗಂಡಾಂತರ ಗರ್ಭಿಣಿ ಮಹಿಳೆಯರ ತಪಾಸಣೆ ನಿರಂತರವಾಗಿರಲಿ: ಡಿಹೆಚ್‌ಒ ಡಾ.ಯಲ್ಲಾ ರಮೇಶ್ ಬಾಬು

ಗಂಡಾಂತರ ಗರ್ಭಿಣಿ ಮಹಿಳೆಯರ ತಪಾಸಣೆ ನಿರಂತರವಾಗಿರಲಿ: ಡಿಹೆಚ್‌ಒ ಡಾ.ಯಲ್ಲಾ ರಮೇಶ್ ಬಾಬು

ಬಳ್ಳಾರಿ,ಸೆ.10: ಜಿಲ್ಲೆಯಾದ್ಯಂತ ಪ್ರತಿ ತಿಂಗಳು 09 ಮತ್ತು 24ನೇ ತಾರೀಖಿನಂದು ಗಂಡಾಂತರ ಗರ್ಭಿಣಿ ಮಹಿಳೆಯರ ಆರೋಗ್ಯ ತಪಾಸಣೆ ಕೈಗೊಳ್ಳುವ ಕಾರ್ಯ ಜರುಗುತ್ತಿದ್ದು, ಇದು ನಿರಂತರವಾಗಿರಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಹೇಳಿದರು.

ಮಂಗಳವಾರ, ಸಿರುಗುಪ್ಪ ತಾಲ್ಲೂಕಿನ ಸಿರಿಗೇರಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನ ಕಾರ್ಯಕ್ರಮ ಕುರಿತು ಪರಿಶೀಲನೆ ನಡೆಸಿ ಅವರು ಮಾತನಾಡಿದರು.
ಗಂಡಾAತರ ಗರ್ಭಿಣಿ ಮಹಿಳೆಯರು ಎಂದು ಗುರುತಿಸಿಕೊಳ್ಳುವ ಚೊಚ್ಚಲು ಗರ್ಭಿಣಿ, ಎತ್ತರ ಕಡಿಮೆ, ಅಧಿಕ ರಕ್ತದೊತ್ತಡ, ರಕ್ತದಲ್ಲಿ ಕಬ್ಬಿಣಾಂಶ ಕೊರತೆ, ಅವಳಿ-ಜವಳಿ ಗರ್ಭಿಣಿ, ವಿವಾಹವಾಗಿ ಐದಕ್ಕಿಂತ ಹೆಚ್ಚು ವರ್ಷಗಳ ನಂತರ ಗರ್ಭಿಣಿಯಾಗುವುದು, ಮೊದಲ ಹೆರಿಗೆ ಸಿಸೇರಿಯನ್ ಮುಂತಾದ ಕಾರಣಗಳಿದ್ದರೆ ಅವರನ್ನು ನಿರ್ಲ್ಯಕ್ಷಿಸದೇ ನಿರಂತರ ನಿಗಾವಹಿಸಬೇಕು. ಗರ್ಭಿಣಿ ಮಹಿಳೆಯರ ತಾಯಿ ಕಾರ್ಡ್ ಪರಿಶೀಲಿಸಿ ಗೆಸ್ಟೋಸಿಸ್ ಸ್ಕೋರ್ ಬಗ್ಗೆ ಪರಿಶೀಲಿಸಬೇಕು ಎಂದು ವೈದ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಾಮಾನ್ಯವಾಗಿ 12 ವಾರದೊಳಗೆ ಗರ್ಭಿಣಿ ಎಂದು ತಿಳಿದ ನಂತರ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ ತಪಾಸಣೆ ಕೈಗೊಳ್ಳಲು ಸೂಚಿಸಬೇಕು. ಆರೋಗ್ಯ ಇಲಾಖೆಯಿಂದ ನೀಡುವ ತಾಯಿ ಕಾರ್ಡ್ನಲ್ಲಿ ಮಹಿಳೆಯ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಬೇಕು. ವೈದ್ಯರ ಸೂಚನೆಯಂತೆ ಪ್ರತಿ ತಿಂಗಳು ತೂಕ, ರಕ್ತದ ಪ್ರಮಾಣ ಹಾಗೂ ಇತರೆ ಅಗತ್ಯ ಪರೀಕ್ಷೆಗಳನ್ನು ಮಾಡಿಸಬೇಕು. ಇದರಿಂದ ಹೆರಿಗೆ ಸಮಯದಲ್ಲಿ ಅನುಕೂಲವಾಗುತ್ತದೆ ಎಂದು ಆಶಾಕಾರ್ಯಕರ್ತೆಯರಿಗೆ ಸೂಚಿಸಿದರು.

ತೀವ್ರ ರಕ್ತಹೀನತೆಯ ಸನ್ನಿವೇಶದಲ್ಲಿ ಸ್ಥಳೀಯವಾಗಿ ನೀಡುವ ಐಎಫ್‌ಎ ಮಾತ್ರೆ, ಐರನ್ ಸುಕ್ರೋಸ್, ರಕ್ತ ಹಾಕಿಸುವಿಕೆ ವಿಧಾನ ಕೈಗೊಳ್ಳಬೇಕು. ಅಗತ್ಯವಿದ್ದಲ್ಲಿ ಸ್ಕಾö್ಯನ್ ಮಾಡಿಸಲು ತಿಳಿಸಬೇಕು. ಮೊದಲ ಹೆರಿಗೆ ಶಸ್ತçಚಿಕಿತ್ಸೆ ಮೂಲಕವಾದಲ್ಲಿ ಪುನಃ ಗರ್ಭಿಣಿಯಾಗುವ ಅವಧಿಯನ್ನು ಕನಿಷ್ಟ 3 ವರ್ಷಕ್ಕೆ ಕಡ್ಡಾಯವಾಗಿ ಮುಂದೂಡುವುದು, ಇದಕ್ಕಾಗಿ ಅಂತರ ಚುಚ್ಚುಮದ್ದು, ಕಾಪರ-ಟಿ, ನೀರೊಧ ಬಳಸುವಂತೆ ಜಾಗೃತಿ ಮೂಡಿಸಬೇಕು ಎಂದರು.
ಗರ್ಭಿಣಿ ಮಹಿಳೆಯರು ಗುಣಮಟ್ಟದ ಪೌಷ್ಟಿಕ ಆಹಾರ ಸೇವಿಸುವುದರ ಜೊತೆಗೆ ವೈದ್ಯರ ಸಲಹೆಯಂತೆ ಉಚಿತವಾಗಿ ನೀಡುವ ಕಬ್ಬಿಣಾಂಶ ಮಾತ್ರೆಗಳನ್ನು ಪ್ರತಿದಿನ ಒಂದರAತೆ ಕನಿಷ್ಟ 180 ಮತ್ತು ಒಂದು ವೇಳೆ ರಕ್ತಹೀನತೆಯ ಪ್ರಮಾಣ ತೀವ್ರವಾಗಿದ್ದಲ್ಲಿ ದಿನಕ್ಕೆ 2 ರಂತೆ 360 ಮಾತ್ರೆಗಳನ್ನು 6 ತಿಂಗಳ ಅವಧಿಯಲ್ಲಿ ಸೇವಿಸಬೇಕು. ಜೊತೆಗೆ ದೈಹಿಕವಾಗಿ ಸದೃಢರಾಗಿರಲು ಕ್ಯಾಲ್ಸಿಯಂ ಮಾತ್ರೆಗಳನ್ನು ಸಹ ನುಂಗಬೇಕು ಎಂದು ವಿನಂತಿಸಿದರು.

ಬಳಿಕ ಡಿಹೆಚ್‌ಒ ಡಾ.ಯಲ್ಲಾ ರಮೇಶ್ ಬಾಬು ಅವರು ಗರ್ಭಿಣಿ ಮಹಿಳೆಯರ ಸಾಮಾನ್ಯ ಆರೋಗ್ಯ ತಪಾಸಣೆ ಕೈಗೊಂಡರು.
ಈ ಸಂದರ್ಭದಲ್ಲಿ ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಡಾ.ಆರ್.ಅಬ್ದುಲ್ಲಾ, ವೈದ್ಯಾಧಿಕಾರಿಗಳಾದ ಡಾ.ತಿಪ್ಪಾರೆಡ್ಡಿ, ಡಿವಿಬಿಡಿಸಿಪಿ ಜಿಲ್ಲಾ ಸಲಹೆಗಾರ ಪ್ರತಾಪ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಚಿದಾನಂದ, ಪಿಹೆಚ್‌ಸಿಒ ಗಂಗಮ್ಮ, ನರ್ಸಿಂಗ್ ಅಧಿಕಾರಿ ಈರಮ್ಮ ಸೇರಿದಂತೆ ಆಶಾ ಕಾರ್ಯಕರ್ತೆಯರು, ತಾಯಂದಿರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments