Monday, October 27, 2025
HomeDistrictsDharwadಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮಎಐ ಮೂಲಕ ಕೈಗಾರಿಕೆಗಳಿಗೆ ಮಾನವಸಂಪನ್ಮೂಲ ಪೂರೈಸಲು ಪ್ರಾಯೋಗಿಕ ಯೋಜನೆ ಧಾರವಾಡ ಜಿಲ್ಲೆಯಲ್ಲಿ...

ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮಎಐ ಮೂಲಕ ಕೈಗಾರಿಕೆಗಳಿಗೆ ಮಾನವಸಂಪನ್ಮೂಲ ಪೂರೈಸಲು ಪ್ರಾಯೋಗಿಕ ಯೋಜನೆ ಧಾರವಾಡ ಜಿಲ್ಲೆಯಲ್ಲಿ ಪ್ರಥಮವಾಗಿ ಜಾರಿ.

ಧಾರವಾಡ: ಸೆ.11: ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರ ಮತ್ತು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಆಯುಕ್ತರು, ಹುಬ್ಬಳ್ಳಿ ಧಾರವಾಡದಲ್ಲಿ ಐಟಿಐ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶಗಳನ್ನು ಸುಧಾರಿಸಲು ಕೃತಕ ಬುದ್ಧಿಮತ್ತೆಯ (ಂಟ) ವೇದಿಕೆಯನ್ನು ಬಳಸಿಕೊಂಡು ಎಕ್ ಸ್ಟೆಪ್ ಫೌಂಡೇಶನ್ (ಇಞ Sಣeಠಿ ಈouಟಿಜಚಿಣioಟಿ) ದೊಂದಿಗೆ ಧಾರವಾಡ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಹಮ್ಮಿಕೊಂಡಿರುವ ಕಾರ್ಯಕ್ರಮ ಕುರಿತು ಇಂದು (ಸೆ.11) ಬೆಳಿಗ್ಗೆ ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಕಾರ್ಯಾಗಾರ ಜರುಗಿತು.

ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಈ.ವಿ.ರಮಣರೆಡ್ಡಿ ಅವರು ಮಾತನಾಡಿ, ಕೈಗಾರಿಕಾ ವಲಯಗಳ ಸುತ್ತಮುತ್ತ 30 ಕಿಲೋಮೀಟರ್ ವ್ಯಾಪ್ತಿಯಲ್ಲಿರುವ ಉದ್ಯೋಗದಾತರಿಗೆ ಹೊಂದಿಕೆಯಾಗುವ ಪೆÇ್ರೀಫೈಲ್‍ಗಳು ಲಭ್ಯವಾದ ತಕ್ಷಣ ಐಟಿಐ ವಿದ್ಯಾರ್ಥಿಗಳಿಗೆ ಇಂಟರ್ನಶಿಪ ಮತ್ತು ಖಾಯಂ ಉದ್ಯೋಗಗಳನ್ನು ತ್ವರಿತವಾಗಿ ಮತ್ತು ಸಮಯಕ್ಕೆ ಸರಿಯಾಗಿ ಒದಗಿಸುವುದು ಈ ಪ್ರಾಯೋಗಿಕ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಹೇಳಿದರು.

ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮಾತನಾಡಿ, ಹುಬ್ಬಳ್ಳಿ-ಧಾರವಾಡದಲ್ಲಿನ ಸರ್ಕಾರಿ ಐಟಿಐಗಳಲ್ಲಿ, ಸಂವಾದಾತ್ಮಕ ಕೃತಕ ಬುದ್ಧಿಮತ್ತೆ ಧ್ವನಿಬಾಟ್ (iಟಿಣeಡಿಚಿಛಿಣive ಂಟ voiಛಿe ಃoಣ) ಬಳಸಿಕೊಂಡು, ಪ್ರಾಂಶುಪಾಲರು ಮತ್ತು ಉದ್ಯೋಗಾಧಿಕಾರಿಗಳು ಪರಿಶೀಲಿಸಿದ 1,100 ಕ್ಕೂ ಹೆಚ್ಚು ಬ್ಲೂ ಡಾಟ್ (ಐಟಿಐ ಅಂತಿಮ ವರ್ಷದ ವಿದ್ಯಾರ್ಥಿಗಳ ಡಿಜಿಟಲ್ ಪೆÇ್ರೀಫೈಲ್‍ಗಳು) ರಚಿಸಲಾಗಿದೆ. ಇದಲ್ಲದೇ ಮೋಬೈಲ್ ಅಪ್ಲಿಕೇಶನ್ ಬಳಸಿ ವಿದ್ಯಾರ್ಥಿಗಳು ತಮ್ಮ ಡಿಜಿಟಲ್ ಪೆÇ್ರೀಫೈಲ್‍ಗಳನ್ನು ಮಾರ್ಪಡಿಸುವ ಮತ್ತು ವಿಸ್ತರಿಸುವ ಸಾಮಥ್ರ್ಯವನ್ನು ಹೊಂದಿದ್ದಾರೆ. ಆರು ಕೈಗಾರಿಕಾ ಸಂಘಗಳು ಈ ಪ್ರಾಯೋಗಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದು, ಎಂಎಸ್‍ಎಂಇ (ಒSಒಇ) ಗಳು ಹೊರಡಿಸಿದ ವಿವರಣೆಯಲ್ಲಿ ನಮೂದಿಸಲಾದ ಅವಶ್ಯಕತೆಗಳ ಆಧಾರದ ಮೇಲೆ 300 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಪೆÇ್ರೀಫೈಲ್‍ಗಳನ್ನು ಹೊಂದಿಸಿ 50 ಕ್ಕೂ ಹೆಚ್ಚು ಅಭ್ಯರ್ಥಿಗಳನ್ನು ಅಂತಿಮ ಸುತ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಬೇರೆ ವಾಣಿಜ್ಯ ನಗರಗಳನ್ನು ಬಿಟ್ಟು, ನಮ್ಮ ಧಾರವಾಡದಲ್ಲಿ ಎಐ ಮೂಲಕ ಉದ್ಯೋಗ ಕಲ್ಪಿಸುವ ಈ ಆ್ಯಪ್‍ನ್ನು ಬಿಡುಗಡೆ ಮಾಡಿರುವುದು ನಮ್ಮಗೆ ಹೆಮ್ಮೆಯ ವಿಷಯವಾಗಿದೆ. ಅದಾಗಿಯೂ ನಮ್ಮ ಹುಬ್ಬಳ್ಳಿ ಧಾರವಾಡ ಜಿಲ್ಲೆಯು ವಿದ್ಯಾ ನಗರಿ, ಸಂಸ್ಕøತಿ ಮತ್ತು ವಾಣಿಜ್ಯ ಕ್ಷೇತ್ರಗಳಲ್ಲಿ ತನ್ನದೇ ಆದ ಛಾಪು ಮೂಡಿಸಿದೆ. ಇಲ್ಲಿ ಗುಣಮಟ್ಟದ ಶಿಕ್ಷಣ ಸಂಸ್ಥೆಗಳು, ಶ್ರೀಮಂತ ಸಾಂಸ್ಕೃತಿಕ ಪರಂಪರೆ ಮತ್ತು ಬಲವಾದ ವ್ಯಾಪಾರ ವಾತಾವರಣವಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.

ಜಿಲ್ಲೆಯ ಆರ್ಥಿಕ ಪ್ರಗತಿಗೆ ಕೈಗಾರಿಕೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಯುವ ಸಮುದಾಯಕ್ಕೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವಲ್ಲಿ ಅವುಗಳ ಕೊಡುಗೆ ಅನಿವಾರ್ಯ. ವಿಶೇಷವಾಗಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಹೆಚ್ಚಿನ ಪೆÇ್ರೀತ್ಸಾಹ ನೀಡಲಾಗುವುದು. ಯುವಕರು ಉದ್ಯೋಗ ಸೃಷ್ಟಿಕರ್ತರಾಗಲು ಪ್ರೇರೇಪಿಸಲು ಸ್ಟಾರ್ಟ್‍ಅಪ್‍ಗಳಿಗೆ ಅಗತ್ಯ ಬೆಂಬಲ ಮತ್ತು ಮಾರ್ಗದರ್ಶನ ನೀಡಲಾಗುವುದು ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಯೋಜನೆಗಳನ್ನು ಸದುಪಯೋಗಪಡಿಸಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಕೈಜೋಡಿಸುವಂತೆ ಅವಳಿನಗರದಲ್ಲಿ ಯುವಕರಿಗೆ ಅವರ ವಿದ್ಯಾರ್ಹತೆಗೆ ಅನುಗುಣವಾಗಿ ಉದ್ಯೋಗಗಳನ್ನು ಸೃಷ್ಟಿಸಲು ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ಬಲಪಡಿಸುವ ಅವಶ್ಯಕತೆ ಇದೆ. ಯುವ ಸಮುದಾಯಕ್ಕೆ ಸೂಕ್ತ ಕೌಶಲ್ಯ ತರಬೇತಿ ನೀಡುವುದರಿಂದ ಅವರ ಉದ್ಯೋಗ ಸಾಮಥ್ರ್ಯವನ್ನು ಹೆಚ್ಚಿಸಬಹುದು ಮತ್ತು ಆರ್ಥಿಕ ಅಭಿವೃದ್ಧಿಗೆ ಕೊಡುಗೆ ನೀಡಬಹುದು ಎಂದು ಅವರು ತಿಳಿಸಿದರು.

ಉದ್ಯೋಗ ಮತ್ತು ತರಬೇತಿ ಇಲಾಖೆಯ ಆಯುಕ್ತೆ ರಾಗಪ್ರೀಯಾ ಅವರು ಮಾತನಾಡಿ, ರಾಜ್ಯದ ಐಟಿಐಗಳಿಂದ ಪ್ರತಿ ವರ್ಷ ಸುಮಾರು 70 ಸಾವಿರ ವಿದ್ಯಾರ್ಥಿಗಳು ಉತ್ತೀರ್ಣರಾಗುತ್ತಾರೆ. ಆದರೆ ಅವರಿಗೆ ಉದ್ಯೋಗಕ್ಕೆ ಅಗತ್ಯವಿರುವ ಕೌಶಲ್ಯಗಳು ಮತ್ತು ಕೆಲಸದ ಸ್ಥಳದಲ್ಲಿ ತಾಳ್ಮೆಯಿಂದ ಕಾರ್ಯನಿರ್ವಹಿಸುವ ಸಾಮಥ್ರ್ಯದ ಕೊರತೆಯಿದೆ ಎಂದು ತಿಳಿಸಿದರು.

ಪ್ರಾಯೋಗಿಕ ತರಬೇತಿಗೆ ಹೆಚ್ಚಿನ ಒತ್ತು ನೀಡುವುದು ಮತ್ತು ವಿದ್ಯಾರ್ಥಿಗಳಲ್ಲಿ ವೃತ್ತಿಪರ ನೀತಿ ಸಂಹಿತೆ ಹಾಗೂ ತಾಳ್ಮೆಯಂತಹ ಮೃದು ಕೌಶಲ್ಯಗಳನ್ನು ಬೆಳೆಸುವುದು ಅವಶ್ಯಕವಾಗಿದೆ ಎಂದು ಹೇಳಿದರು.
ಐಟಿಐ ಪದವೀಧರರಿಗೆ ಉತ್ತಮ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಮತ್ತು ರಾಜ್ಯದ ಕೈಗಾರಿಕಾ ಬೆಳವಣಿಗಾಗಿ ವಿದ್ಯಾರ್ಥಿಗಳಿಗೆ ಅವಕಾಶಗಳನ್ನು ಕಲ್ಪಿಸಿಕೊಟ್ಟು ಕೌಶಲ್ಯಗಳ ಬಗ್ಗೆ ಮಾಹಿತಿ ನೀಡಬೇಕಾಗಿದೆ ಎಂದು ಹೇಳಿದರು.

ಕಂಪನಿಗಳಲ್ಲಿ ವಿದ್ಯಾರ್ಥಿಗಳ ಆಸಕ್ತಿ ಮತ್ತು ನಿರಂತರ ಶ್ರಮದ ಕೊರತೆಯು ಕಲಿಕೆಯ ಪ್ರಕ್ರಿಯೆಗೆ ಅಡ್ಡಿಯಾಗುತ್ತಿದೆ. ಈ ಸಮಸ್ಯೆಯನ್ನು ಪರಿಹರಿಸಲು ನವೀನ ವಿಧಾನಗಳು ಬೇಕಾಗಬಹುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಪ್ರೊಬೇಷನರಿ ಐಎಎಸ್ ಅಧಿಕಾರಿ ರಿತೀಕಾ ವರ್ಮಾ, ಏಕಸ್ಟೆಪ್ ಡೈರೆಕ್ಟರ್ ವಿದ್ಯಾಸಾಗರ, ಪ್ರೋಗ್ರಾಂ ಹೆಡ್ ಆದರ್ಶ ವಿಜಯಕುಮಾರ, ಎಚ್.ಎಚ್.ಎಚ್. ಫೌಂಡೆಷನ್‍ನ ಮುಖ್ಯಸ್ಥರ ಮುರಳಿರಾವ್ ಅವರು ವೇದಿಕೆಯಲ್ಲಿ ಇದ್ದರು.

ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ರವೀಂದ್ರ ದ್ಯಾಬೇರಿ ಅವರು ಸ್ವಾಗತಿಸಿ, ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಬ್ಲೂಡಾಟ್ ರಚನೆ ಹಾಗೂ ಕೃತಕ ಬುದ್ಧಿಮತ್ತೆಯಲ್ಲಿ ನೋಂದಾಯಿತರಾದ ಧಾರವಾಡ ಜಿಲ್ಲೆಯ ವಿವಿಧ ಕೈಗಾರಿಕೋದ್ಯಮಿಗಳಾದ ಮೆ. ಪಾಟೀಲ ಇಲೆಕ್ಟ್ರೀಕಲ್ಸ್, ಉತ್ತರ ಕರ್ನಾಟಕ ಸಣ್ಣ ಕೈಗಾರಿಕಾ ಸಂಘದ ಅಧ್ಯಕ್ಷರಾದ ಗಿರೀಶ ನಲವಡಿ, ಮೆ. ಎಸ್.ಎಪ್. ಆಟೊಮೊಬೈಲ್ಸ್‍ನ ಎಸ್.ಡಿ. ಭಟ್, ಹಾಗೂ ಬೇಲೂರು ಕೈಗಾರಿಕಾ ಸಂಘದ ಅಧ್ಯಕ್ಷ ಗಿರೀಶ ಉಪ್ಪಿನ, ರಾಯಾಪೂರ ಕೈಗಾರಿಕೆಗಳ ಸಂಘದ ಅಧ್ಯಕ್ಷೆ ದೇವಕಿ ಯೋನಾನಂದ, ಧಾರವಾಡ ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಐಟಿಐ ಸಂಸ್ಥೆಗಳ ಪ್ರಾಂಶುಪಾಲರು, ಕೈಗಾರಿಕೋದ್ಯಮಿಗಳು, ಎಐ ಆ್ಯಪ್‍ನಿಂದ ಉದ್ಯೋಗ ದೊರಕಿಸಿಕೊಂಡ ಐಟಿಐ ವಿದ್ಯಾರ್ಥಿಗಳು ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments