Monday, October 27, 2025
HomeKotturuಕೊಟ್ಟೂರು ತಾಲೂಕು ಉಜ್ಜಯಿನಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಧ್ವಜಾರೋಹಣ

ಕೊಟ್ಟೂರು ತಾಲೂಕು ಉಜ್ಜಯಿನಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಧ್ವಜಾರೋಹಣ

ವರದಿ: ಶಿವರಾಜ್ ಕನ್ನಡಿಗ
ಕೊಟ್ಟೂರು ತಾಲೂಕು ಉಜ್ಜಯಿನಿ ಗ್ರಾಮ ಪಂಚಾಯಿತಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಸೆಪ್ಟೆಂಬರ್ 17, 2025 ರಂದು ಧ್ವಜಾರೋಹಣ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಪ್ರತಿ ವರ್ಷ ಸೆಪ್ಟೆಂಬರ್ 17 ರಂದು ಆಚರಿಸಲ್ಪಡುವ ಕಲ್ಯಾಣ ಕರ್ನಾಟಕ ಉತ್ಸವವು, ಭಾರತದ ಸ್ವಾತಂತ್ರ್ಯದ ನಂತರವೂ ಹೈದರಾಬಾದ್ ನಿಜಾಮರ ಆಳ್ವಿಕೆಯಿಂದ ಮುಕ್ತರಾಗಲು ನಡೆದ ಹೋರಾಟದ ಇತಿಹಾಸ, ತ್ಯಾಗ ಮತ್ತು ಬಲಿದಾನಗಳನ್ನು ಸ್ಮರಿಸುವ ದಿನವಾಗಿದೆ. ಈ ಬಾರಿ 77ನೇ ವಾರ್ಷಿಕೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಉಜ್ಜಯಿನಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಡೆದ ಧ್ವಜಾರೋಹಣವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀ ಬಿ. ಚೌಡಪ್ಪ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಕಲ್ಯಾಣ ಕರ್ನಾಟಕ ಹೋರಾಟಗಾರರ ತ್ಯಾಗವನ್ನು ಸ್ಮರಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments