Monday, October 27, 2025
HomeVijayanagaraಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಗುಜ್ಜಲ್ ನಾಗರಾಜ್ ರಾಜೀನಾಮೆ ಸಲ್ಲಿಕೆ

ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಗುಜ್ಜಲ್ ನಾಗರಾಜ್ ರಾಜೀನಾಮೆ ಸಲ್ಲಿಕೆ

ಕಾಂಗ್ರೆಸ್ ಪಕ್ಷದ ಕಾನೂನು ಮತ್ತು ಮಾನವ ಹಕ್ಕುಗಳ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಗುಜ್ಜಲ್ ನಾಗರಾಜ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಕಳೆದ 30 ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠಾವಂತವಾಗಿ ಸೇವೆ ಸಲ್ಲಿಸುತ್ತಿದ್ದ ನಾನು, ಇತ್ತೀಚಿಗೆ ಸರ್ಕಾರ ತೆಗೆದುಕೊಂಡಿರುವ ಕುರುಬ ಸಮಾಜವನ್ನು ಎಸ್‌.ಟಿ. ಪಟ್ಟಿಗೆ ಸೇರಿಸುವ ನಿರ್ಧಾರ ನಮ್ಮ ವಾಲ್ಮೀಕಿ (ನಾಯಕ) ಸಮಾಜಕ್ಕೆ ಹಾನಿಕಾರಕವಾಗಿದೆ ಎಂದು ನಾಗರಾಜ್ ಹೇಳಿದ್ದಾರೆ.

“ಈ ನಿರ್ಧಾರವನ್ನು ಸರ್ಕಾರ ತಕ್ಷಣ ಕೈಬಿಡಬೇಕು. ಇಲ್ಲವಾದರೆ ನಮ್ಮ ಸಮಾಜದ ಒತ್ತಡದ ನಡುವೆ ನಾನು ಪಕ್ಷದಲ್ಲಿ ಮುಂದುವರಿಯಲು ಸಾಧ್ಯವಿಲ್ಲ. ಆದ್ದರಿಂದಲೇ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ,” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ರಾಜ್ಯ ಸರ್ಕಾರವು ಈ ನಿರ್ಧಾರವನ್ನು ಹಿಂತೆಗೆದುಕೊಳ್ಳದಿದ್ದರೆ, ರಾಜೀನಾಮೆ ಅಂಗೀಕರಿಸಿ ಅಥವಾ 05-10-2025ರೊಳಗೆ ತಮ್ಮ ಸ್ಥಾನದಿಂದ ಮುಕ್ತಗೊಳಿಸಲು ಮನವಿ ಮಾಡಿದ್ದಾರೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments