Monday, October 27, 2025
HomeKotturu"ವ್ಯಕ್ತಿತ್ವ ವಿಕಸನ ಕಾರ್ಯಕ್ರಮ"

“ವ್ಯಕ್ತಿತ್ವ ವಿಕಸನ ಕಾರ್ಯಕ್ರಮ”

ವರದಿ: ಶಿವರಾಜ್ ಕನ್ನಡಿಗ
ಕೊಟ್ಟೂರು :ಪಟ್ಟಣದ ಕೊಟ್ಟೂರೇಶ್ವರ ಮಹಾವಿದ್ಯಾಲಯ ಹಾಗೂ ರಾಮಕೃಷ್ಣ ಆಶ್ರಮ ಮೈಸೂರು ಮತ್ತು ಕಾಲೇಜ್ ಐಕ್ಯುಎಸಿ, ವಿದ್ಯಾರ್ಥಿ ಕಲ್ಯಾಣ ಘಟಕ ,ಎನ್.ಎಸ್.ಎಸ್. ಮತ್ತು ದೈಹಿಕ ಶಿಕ್ಷಣ ವಿಭಾಗದಿಂದ ವ್ಯಕ್ತಿತ್ವ ವಿಕಸನ ವಿಷಯ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ. ಎಂ. ರವಿಕುಮಾರ್ ಸ್ಪರ್ಧಾತ್ಮಕ ಜಗತ್ತಿನಲ್ಲಿ ಉದ್ಯೋಗ ಪಡೆಯುವುದು ಸುಲಭವಲ್ಲ, ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಗುರಿ ಮುಟ್ಟಲು ಮೊದಲು ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ನಂತರ ಮಾತನಾಡಿದ ಜಿ ಚಂದ್ರಶೇಖರ್ ಮಾತನಾಡಿ ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಂಸ್ಕಾರ ಮತ್ತು ನಮ್ಮ ವ್ಯಕ್ತಿತ್ವವನ್ನು ವಿಕಸನ ಮಾಡಿಕೊಂಡಾಗ ಏನಾದರೂ ಸಾಧಿಸಬಹುದು ಇಂದಿನ ಆಧುನಿಕ ಯುಗದಲ್ಲಿ ಹೆಚ್ಚಿನ ಸಮಯವನ್ನು ಮೊಬೈಲ್ ಜೊತೆ ಕಳೆಯದೆ ಪುಸ್ತಕ ಓದುವುದು ಯೋಗ ಧ್ಯಾನಗಳಿಂದ ಸದುಪಯೋಗ ಪಡೆದುಕೊಂಡು ಜೀವನದಲ್ಲಿ ಯಶಸ್ಸು ಗಳಿಸಬಹುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ ಜೆ ಬಿ ಸಿದ್ದನಗೌಡ ರಾಜ್ಯಶಾಸ್ತ್ರದ ಮುಖ್ಯಸ್ಥರಾದ ರಾಧಾಸ್ವಾಮಿ ಕೆ ಪಿ ಕಾರ್ಯಕ್ರಮ ಸಂಯೋಜಕರಾದ ಡಾ. ಶಿವಕುಮಾರ್ ದೈಹಿಕ ನಿರ್ದೇಶಕರು ರಾಜ್ಯಶಾಸ್ತ್ರ ಉಪನ್ಯಾಸಕಿ ಶ್ರೀಮತಿ ರಶ್ಮಿ, ರೆಹಂಬಿ ಉಪಸ್ಥಿತರಿದ್ದರು

ಈ ಕಾರ್ಯಕ್ರಮವನ್ನು ಇತಿಹಾಸ ಉಪನ್ಯಾಸಕರಾದ ಓ ಶಿವಪ್ರಕಾಶ್ ನಿರೂಪಿಸಿ ಸ್ವಾಗತಿಸಿದರು ಉಪನ್ಯಾಸಕರಾದ ರಮೇಶ್ ಹೆಚ್ ವಂದನಾರ್ಪಣೆ ಮಾಡಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ಯಶಸ್ವಿಗೊಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments