Tuesday, January 13, 2026
HomeDistrictsBallariಅಪರಾಧಗಳನ್ನು ನಿಯಂತ್ರಿಸಲು ಸಾರ್ವಜನಿಕರ ಸಹಕಾರ ಅಗತ್ಯ: ಎಸ್‌ಪಿ ಡಾ.ಶೋಭಾರಾಣಿ ವಿ.ಜೆ

ಅಪರಾಧಗಳನ್ನು ನಿಯಂತ್ರಿಸಲು ಸಾರ್ವಜನಿಕರ ಸಹಕಾರ ಅಗತ್ಯ: ಎಸ್‌ಪಿ ಡಾ.ಶೋಭಾರಾಣಿ ವಿ.ಜೆ

ಬಳ್ಳಾರಿ,ಡಿ.23:ಅಪರಾಧಗಳನ್ನು ನಿಯಂತ್ರಿಸಲು ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ. ಅವರು ಹೇಳಿದರು.
ನಗರದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಗೃಹ ಇಲಾಖೆಯ ಜಿಲ್ಲಾ ಮಟ್ಟದ ಸಾರ್ವಜನಿಕರ ಕುಂದುಕೊರತೆ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸಿಸಿಟಿವಿ ಗಳ ಡಿವಿಆರ್‌ಗಳನ್ನು ಕಳ್ಳರು ಕಿತ್ತುತ್ತಿರುವ ಕಾರಣ ಸಿಸಿಟಿವಿ ಗಳನ್ನು ಗೂಗಲ್ ಡ್ರೆöÊವ್ ಅಥವಾ ಐ ಕ್ಲೌಡ್ ಡ್ರೆöÊವ್‌ಗೆ ಕನೆಕ್ಟ್ ಮಾಡಲಾಗಿದ್ದು, ರೆಕಾರ್ಡ್ ಆಗಿರುವ ಮಾಹಿತಿ ಇರುತ್ತದೆ. ಯಾವುದೇ ತನಿಖಾ ಏಜೆನ್ಸಿಗಳ ವಿಚಾರಣೆಯು ಆನ್‌ಲೈನ್‌ನಲ್ಲಿ ನಡೆಯುವುದಿಲ್ಲ. ಸಿಬಿಐ, ಇಡಿ, ಪೊಲೀಸ್ ಇನ್ನಿತರೆಗಳ ಹೆಸರಿನಲ್ಲಿ ನಡೆಯುತ್ತಿರುವ ಸೈಬರ್ ಅಪರಾಧಗಳ ಕುರಿತು ಜನರು ಸದಾಕಾಲ ಎಚ್ಚರವಾಗಿದ್ದು, ಏನಾದರೂ ಸಮಸ್ಯೆಗಳಿದ್ದಲ್ಲಿ ತಕ್ಷಣವೇ ಪೊಲೀಸ್ ಇಲಾಖೆಯ ಗಮನಕ್ಕೆ ತರಬೇಕು ಎಂದರು.
ಸAಚಾರಿ ಪೊಲೀಸ್ ಠಾಣೆಯ ಸಿಪಿಐ ಅಯ್ಯನಗೌಡ ಪಾಟೀಲ್ ಅವರು ಮಾತನಾಡಿ, ಮಕ್ಕಳ ಸುರಕ್ಷತೆಗಾಗಿ ಅಪ್ರಾಪ್ತರಿಗೆ ವಾಹನಗಳನ್ನು ಚಲಾಯಿಸಲು ಕೊಡಬಾರದು. ಅಪ್ರಾಪ್ತರು ವಾಹನ ಚಾಲಿಸಿದಲ್ಲಿ ಮತ್ತು ವಾಹನ ಕೊಟ್ಟವರಿಗೆ ದಂಡ ವಿಧಿಸಲಾಗುತ್ತದೆ ಎಂದು ತಿಳಿಸಿದರು.

ನಗರದ ಐದು ವೃತ್ತಗಳಲ್ಲಿ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಿದ್ದು, ಉಳಿದೆರೆಡು ವೃತ್ತಗಳಲ್ಲಿ ಶೀಘ್ರದಲ್ಲೇ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಲಾಗುತ್ತದೆ. ಶಿಕ್ಷಣ ಸಂಸ್ಥೆಗಳ ವಾಹನಗಳು – ಅವಶ್ಯಕ ಪದಾರ್ಥಗಳ ವಾಹನಗಳ ಸಂಚಾರ, ಸಂಚಾರಿ ನಿಯಮಗಳನ್ನು ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸಲು ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಅವ್ವಾರು ಮಂಜುನಾಥ್ ಪ್ರಾಸ್ತಾವಿಕವಾಗಿ ಮಾತನಾಡಿ, ದಿನದ 24 ತಾಸು ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಇಲಾಖೆಗೆ ನಮ್ಮೆಲ್ಲರ ಸಹಕಾರ ಅತ್ಯಗತ್ಯ. ಕರ್ತವ್ಯದ ಒತ್ತಡ, ಸಿಬ್ಬಂದಿಗಳ ಕೊರತೆ ಮತ್ತು ಇನ್ನಿತರೆ ಸಮಸ್ಯೆಗಳಲ್ಲೂ ಉತ್ತಮವಾದ ಸೇವೆ ಸಲ್ಲಿಸಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುತ್ತಿರುವ ಪೊಲೀಸ್ ಇಲಾಖೆಯ ಸೇವೆ ಶ್ಲಾಘನೀಯ ಎಂದರು.

ಈ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಹಿರಿಯ ಉಪಾಧ್ಯಕ್ಷ ಎಸ್. ದೊಡ್ಡಗೌಡ, ಉಪಾಧ್ಯಕ್ಷ ಸೊಂತ ಗಿರಿಧರ, ಗೌರವ ಕಾರ್ಯದರ್ಶಿ ಕೆ.ಸಿ. ಸುರೇಶಬಾಬು ಜಂಟಿ ಕಾರ್ಯದರ್ಶಿಗಳಾದ ಡಾ. ಮರ್ಚೆಡ್ ಮಲ್ಲಿಕಾರ್ಜುನಗೌಡ, ವಿ. ರಾಮಚಂದ್ರ, ನಿಕಟಪೂರ್ವ ಅಧ್ಯಕ್ಷ ಯಶವಂತರಾಜ್ ನಾಗಿರೆಡ್ಡಿ, ಮಾಜಿ ಅಧ್ಯಕ್ಷ ಬಿ. ಮಹಾರುದ್ರಗೌಡ, ಡಿವೈಎಸ್ಪಿ ಮಾಲತೇಶ್ ಕೋನಬೇವು ಸೇರಿದಂತೆ ಕಾರ್ಯಕಾರಿ ಸಮಿತಿ ಸದಸ್ಯರು, ವಿಶೇಷ ಸಮನ್ವಯ ಸಮಿತಿ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಸಾರ್ವಜನಿಕರು ಪಾಲ್ಗೊಂಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments