ಬಳ್ಳಾರಿ,ಫೆ.05:ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿ ಯೋಜನೆಗಳಿಂದ ಜನರ ಕಲ್ಯಾಣವಾಗುತ್ತಿದೆ ಎಂದು ಶಿಡಗಿನಮೊಳ ಗ್ರಾಮಪಂಚಾಯತ್ ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಶ್ರದ್ ಬಾನು ಅವರು ಹೇಳಿದರು.
ಬಳ್ಳಾರಿ ತಾಲ್ಲೂಕಿನ ಮೀನಳ್ಳಿ ಗ್ರಾಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕ್ಷೇತ್ರ ಪ್ರಚಾರ ಕಾರ್ಯಕ್ರಮದಡಿ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಸೇರಿದಂತೆ ವಿವಿಧ ಯೋಜನೆಗಳ ಕುರಿತು ಜಾನಪದ ಸಂಗೀತ ಮೂಲಕ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಮಂಗಳವಾರ ಚಾಲನೆ ನೀಡಿ ಅವರು ಮಾತನಾಡಿದರು.
ರಾಜ್ಯ ಸರ್ಕಾರ ಪಂಚ ಗ್ಯಾರಂಟಿಗಳ ಜೊತೆಗೆ ಹಲವಾರು ಅಭಿವೃದ್ಧಿ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ.
ಸಾರ್ವಜನಿಕರು ಅವುಗಳ ಸದ್ಭಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಅಕ್ಷಯ ಕಲಾ ಟ್ರಸ್ಟ್ ಹೊಸ ಯರಗುಡಿ ತಂಡವು ರಾಜ್ಯ ಸರ್ಕಾರದ ಯೋಜನೆಗಳನ್ನು ಜಾನಪದ ಸಂಗೀತ ಕಾರ್ಯಕ್ರಮದ ಮೂಲಕ ಅರಿವು ಮೂಡಿಸಿದರು.
ಈ ಸಂದರ್ಭದಲ್ಲಿ ಶಿಡಗಿನಮೊಳ ಗ್ರಾಪಂ ಅಧ್ಯಕ್ಷರಾದ ಸುಜಾತ ತಾಯಣ್ಣ, ಉಪಾಧ್ಯಕ್ಷ ಮಹಾನಂದಿ ತಿಮ್ಮಯ್ಯ, ಅಂಗನವಾಡಿ ಕಾರ್ಯಕರ್ತೆ ವರಲಕ್ಷಿö್ಮ, ಅಕ್ಷಯ ಕಲಾ ಟ್ರಸ್ಟ್ ನ ಅಧ್ಯಕ್ಷ ಹಾಗೂ ಕಲಾವಿದ ಹೆಚ್.ಜಿ.ಸುಂಕಪ್ಪ, ಕಲಾವಿದರಾದ ಸರ್ವಮಂಗಳಮ್ಮ, ಪಾರ್ವತಿ, ದೇವೇಂದ್ರಪ್ಪ, ತಮಟೆ ವಾದಕರಾಗಿ ಸೋಮಶೇಖರ್, ನಾಗಮೂರ್ತಿ ಸೇರಿದಂತೆ ಗ್ರಾಮದ ಸಾರ್ವಜನಿಕರು ಇದ್ದರು.
