Thursday, February 5, 2026
HomeDistrictsBallariಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ನಿರ್ಧಾರ ಶಿಷ್ಟಾಚಾರದನ್ವಯ ಮಹನೀಯರ ಜಯಂತಿ ಅರ್ಥಪೂರ್ಣ ಆಚರಣೆ

ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ನಿರ್ಧಾರ ಶಿಷ್ಟಾಚಾರದನ್ವಯ ಮಹನೀಯರ ಜಯಂತಿ ಅರ್ಥಪೂರ್ಣ ಆಚರಣೆ

ಬಳ್ಳಾರಿ,ಫೆ.05:ಜಿಲ್ಲಾ ಕೇಂದ್ರದಲ್ಲಿ ವಿವಿಧ ಮಹನೀಯರ ಜಯಂತಿ ಕಾರ್ಯಕ್ರಮಗಳನ್ನು ಶಿಷ್ಟಾಚಾರದನ್ವಯ ಅಚ್ಚುಕಟ್ಟಾಗಿ ಆಯೋಜಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಗುವುದು.

ವಿವಿಧ ಮಹನೀಯರ ಜಯಂತಿ ಕಾರ್ಯಕ್ರಮ ಆಚರಣೆ ಕುರಿತು ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳು, ಸಮುದಾಯದ ಮುಖಂಡರೊAದಿಗೆ ಗುರುವಾರ ಏರ್ಪಡಿಸಿದ್ದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.

ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ ಅವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾಡಳಿತದಿಂದ ಫೆ.15 ರಂದು ಸಂತ ಸೇವಾಲಾಲ್ ಜಯಂತಿ, ಫೆ.19 ರಂದು ಛತ್ರಪತಿ ಶಿವಾಜಿ ಜಯಂತಿ ಮತ್ತು ಫೆ.20 ರಂದು ಸಂತ ಕವಿ ಸರ್ವಜ್ಞ ಜಯಂತಿ ಕಾರ್ಯಕ್ರಮಗಳನ್ನು ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಅಚ್ಚುಕಟ್ಟಾಗಿ ಆಯೋಜಿಸಲು ಬೇಕಾದ ಎಲ್ಲಾ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದರು.
ಬ್ಯಾನರ್ ಅಳವಡಿಕೆಗೆ ಸಂಬAಧಿಸಿದAತೆ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಸೂಚನೆಗಳಿದ್ದು, ಮಹಾನಗರ ಪಾಲಿಕೆಯಿಂದ ಅನುಮತಿ ಪಡೆಯಲೇ ಬೇಕು. ಡಿಜೆ ಧ್ವನಿವರ್ಧಕ ಬಳಕೆ, ಬೈಕ್ ರ‍್ಯಾಲಿಗೆ ಅವಕಾಶವಿಲ್ಲ. ಶಾಂತಿ-ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಭಕ್ತಿ-ಭಾವದಿಂದ ಮಹನೀಯರ ಜಯಂತಿ ಆಚರಿಸೋಣ. ಇದಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದರು.

ಶಿಷ್ಟಾಚಾರದAತೆ ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರಿಗೆ, ಸಂಘ-ಸAಸ್ಥೆಗಳಿಗೆ ವಿತರಿಸಿ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು. ಮಹನೀಯರ ಆಚಾರ-ವಿಚಾರಗಳನ್ನು ಪರಿಣಿತರಿಂದ ವಿಶೇಷ ಉಪನ್ಯಾಸ ಮೂಲಕ ತಲುಪಿಸಲು ಸಂಪನ್ಮೂಲ ವ್ಯಕ್ತಿಗಳನ್ನು ನಿಯೋಜಿಸಬೇಕು ಎಂದರು.
ಜಯAತಿ ಕಾರ್ಯಕ್ರಮದ ಅಂಗವಾಗಿ ಮೆರವಣಿಗೆ ನಡೆಯಲಿದ್ದು, ಯಾವುದೇ ರೀತಿಯ ತೊಂದರೆಯಾಗದAತೆ ನೋಡಿಕೊಳ್ಳಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಅವರು, ಮೆರವಣಿಗೆಯಲ್ಲಿ ವಿವಿಧ ಸಾಂಸ್ಕೃತಿಕ ಕಲಾತಂಡಗಳನ್ನು ನಿಯೋಜಿಸಲಾಗುವುದು ಎಂದರು.

ವೇದಿಕೆ ಕಾರ್ಯಕ್ರಮದಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಸ್ವಚ್ಛತೆ ಕಾರ್ಯವನ್ನು ನಿರ್ವಹಿಸಬೇಕು ಎಂದು ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.
ಜಯಂತಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ, ಯಶಸ್ವಿಗೊಳಿಸಬೇಕು ಎಂದರು. ಇದೇ ವೇಳೆ ಸಮಾಜದ ಮುಖಂಡರು ಜಯಂತಿ ಕಾರ್ಯಕ್ರಮ ಯಶಸ್ವಿಗೆ ತಮ್ಮ ಸಲಹೆ-ಸೂಚನೆ ನೀಡಿದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಮಹಾನಗರ ಪಾಲಿಕೆ, ಪೊಲೀಸ್ ಅಧಿಕಾರಿಗಳು, ಡಿಡಿಪಿಐ, ಅಧಿಕಾರಿಗಳು ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments