Tuesday, March 3, 2026
HomeKotturuವಿಶ್ವ ವನ್ಯಜೀವಿ ದಿನಾಚರಣೆ–2026 ಆಚರಣೆ: ಪರಿಸರ ಸಂರಕ್ಷಣೆಯ ಮಹತ್ವದ ಕುರಿತು ಜಾಗೃತಿ

ವಿಶ್ವ ವನ್ಯಜೀವಿ ದಿನಾಚರಣೆ–2026 ಆಚರಣೆ: ಪರಿಸರ ಸಂರಕ್ಷಣೆಯ ಮಹತ್ವದ ಕುರಿತು ಜಾಗೃತಿ

ವರದಿ:ಶಿವರಾಜ್ ಕನ್ನಡಿಗ
ಕೊಟ್ಟೂರು, ಮಾರ್ಚ್ 3:
ಕೊಟ್ಟೂರಿನ ಕೊಟ್ಟೂರೇಶ್ವರ ಕಾಲೇಜಿನಲ್ಲಿ ಸಸ್ಯಶಾಸ್ತ್ರ ಹಾಗೂ ಪ್ರಾಣಿಶಾಸ್ತ್ರ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ವನ್ಯಜೀವಿ ದಿನಾಚರಣೆ–2026 ಅನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಅಂತರಿಕ ಗುಣಮಟ್ಟ ಭರವಸೆ ಕೋಶ (IQAC), ಎನ್‌ಸಿಸಿ, ಎನ್‌ಎಸ್‌ಎಸ್, ರೆಡ್‌ಕ್ರಾಸ್, ಸಂಶೋಧನೆ ಮತ್ತು ಅಭಿವೃದ್ಧಿ ಘಟಕ ಹಾಗೂ ಸೈನ್ಸ್ ಫೋರಂ ಸಹಯೋಗದಲ್ಲಿ ಆಯೋಜಿಸಲಾಗಿತ್ತು.

ಈ ವರ್ಷದ ವಿಶ್ವ ವನ್ಯಜೀವಿ ದಿನದ ಥೀಮ್ “ಔಷಧೀಯ ಮತ್ತು ಆರೊಮ್ಯಾಟಿಕ್ ಸಸ್ಯಗಳು: ಆರೋಗ್ಯ, ಪರಂಪರೆ ಮತ್ತು ಜೀವನೋಪಾಯಗಳನ್ನು ಸಂರಕ್ಷಿಸುವುದು” ಆಗಿದ್ದು, ವನ್ಯಜೀವಿ ಸಂರಕ್ಷಣೆ, ಜೀವವೈವಿಧ್ಯತೆ ಹಾಗೂ ನೈಸರ್ಗಿಕ ಪರಿಸರ ವ್ಯವಸ್ಥೆಗಳ ಮಹತ್ವದ ಕುರಿತು ವಿಶೇಷವಾಗಿ ಜಾಗೃತಿ ಮೂಡಿಸಲಾಯಿತು.

ಕಾರ್ಯಕ್ರಮವು ಕುಮಾರಿ ಸಲ್ಮಾ ಅವರ ಪ್ರಾರ್ಥನಾ ಗೀತೆಯಿಂದ ಆರಂಭವಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ. ರವಿಕುಮಾರ್ ಅವರು ಮಾತನಾಡಿ, ವನ್ಯಜೀವಿಗಳ ರಕ್ಷಣೆ ಮತ್ತು ಔಷಧೀಯ ಸಸ್ಯಗಳ ಸಂರಕ್ಷಣೆ ಇಂದಿನ ಅಗತ್ಯವಾಗಿದ್ದು, ಪರಿಸರ ಸಂರಕ್ಷಣೆಯ ಹೊಣೆಗಾರಿಕೆಯನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಉಪನ್ಯಾಸಕರಾದ ಶ್ರೀ ರಾಧಾ ಸ್ವಾಮಿ, ಡಾ. ಪೃಥ್ವಿರಾಜ್ ಸಿ. ಬೆಡ್ಜರಗಿ, ಡಾ. ಸ್ವಾಮಿ ಆರಾಧ್ಯ ಮಠ, ವಿ. ಕೊಟ್ರೇಶ್, ಅರುಣ್ ಹಾಗೂ ಉಪನ್ಯಾಸಕಿಯರಾದ ಗಗನಶ್ರೀ, ನಂದಿತಾ, ಶಾರದಾಶ್ರೀ ಮತ್ತು ಸಂಗೀತ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡು ವನ್ಯಜೀವಿ ಸಂರಕ್ಷಣೆ ಹಾಗೂ ಪರಿಸರ ಉಳಿವಿನ ಅಗತ್ಯತೆಯನ್ನು ಒತ್ತಿಹೇಳಿದರು. ವಿದ್ಯಾರ್ಥಿಗಳ ಉತ್ಸಾಹಭರಿತ ಭಾಗವಹಿಸುವಿಕೆಯಿಂದ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.

ಈ ಆಚರಣೆ ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಹೆಚ್ಚಿಸುವುದರ ಜೊತೆಗೆ ಜೀವವೈವಿಧ್ಯ ಸಂರಕ್ಷಣೆ ಮತ್ತು ನೈಸರ್ಗಿಕ ಸಂಪನ್ಮೂಲಗಳ ರಕ್ಷಣೆಯ ಕುರಿತು ಜವಾಬ್ದಾರಿಯ ಮನೋಭಾವ ಬೆಳೆಸುವಲ್ಲಿ ಮಹತ್ವದ ಪಾತ್ರವಹಿಸಿತು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments