Tuesday, March 24, 2026
HomeDistrictsBallariಎಮ್ಮಿಗನೂರು ಗ್ರಾಮದಲ್ಲಿ ಹೆಚ್.ಪಿ.ವಿ ಲಸಿಕಾ ಅಭಿಯಾನಕ್ಕೆ ಚಾಲನೆ – 14 ವರ್ಷದ ಬಾಲಕಿಯರಿಗೆ ಉಚಿತ ಲಸಿಕೆ

ಎಮ್ಮಿಗನೂರು ಗ್ರಾಮದಲ್ಲಿ ಹೆಚ್.ಪಿ.ವಿ ಲಸಿಕಾ ಅಭಿಯಾನಕ್ಕೆ ಚಾಲನೆ – 14 ವರ್ಷದ ಬಾಲಕಿಯರಿಗೆ ಉಚಿತ ಲಸಿಕೆ

ವರದಿ:ಜಿ ಎಂ.ಬಸಯ್ಯ ಸ್ವಾಮಿ
ಕುರುಗೋಡು ಸಮೀಪದ ಎಮ್ಮಿಗನೂರು ಪ್ರಾಥಮಿಕ ಆರೋಗ್ಯ ಕೇಂದ್ರ ಗ್ರಾಮೀಣ ವ್ಯಾಪ್ತಿಯಲ್ಲಿ 14 ವರ್ಷದ ಹೆಣ್ಣು ಮಕ್ಕಳು ತಪ್ಪದೇ ಹೆಚ್.ಪಿ.ವಿ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಮಹಮ್ಮದ್ ಫಾರೂಕ್ ಅವರು ಹೇಳಿದರು.

ಸಮೀಪದ ಎಮ್ಮಿಗನೂರು ಗ್ರಾಮದಲ್ಲಿ ಮಂಗಳವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸ್ಥಳೀಯ ಪ್ರಾಥಮಿಕ ಕೇಂದ್ರದಿಂದ ಹಮ್ಮಿಕೊಂಡಿದ್ದ ಹೆಚ್.ಪಿ.ವಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿ ಅವರು ಹೆಣ್ಣು ಮಕ್ಕಳ ಜೀವನದಲ್ಲಿ ಗಂಭೀರ ಆರೋಗ್ಯ ಸಮಸ್ಯೆಯನ್ನುಂಟು ಮಾಡುವ ಗರ್ಭಕಂಠದ ಕ್ಯಾನ್ಸ‌ರ್ ತಡೆಗೆ ಈ ಲಸಿಕೆ ಅತ್ಯಂತ ಉಪಯುಕ್ತವಾಗಿದ್ದು, 14 ವರ್ಷದ ಹೆಣ್ಣು ಮಕ್ಕಳಿಗೆ ಉಚಿತ ಹೆಚ್.ಪಿ.ವಿ(ಹೂಮನ್ ಪ್ಯಾಪಿಲೋಮ ವೈರಸ್)ವಿರುದ್ಧದ ಲಸಿಕೆ ನೀಡಲಾಗುತ್ತಿದೆ. ಪೋಷಕರು ತಮ್ಮ ಮಕ್ಕಳಿಗೆ ತಪ್ಪದೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಲಸಿಕೆ ಹಾಕಿಸಬೇಕು ಎಂದು ತಿಳಿಸಿದರು.

ನಂತರ ಕೇಂದ್ರ ಸುರಕ್ಷಾಧಿಕಾರಿ ಪೂಜಾ ಭಾವ ಮಾತನಾಡಿ, ಸಾಮಾನ್ಯವಾಗಿ ವೈಯಕ್ತಿಕ ಶುಚಿತ್ವ, ಜನನಾಂಗಗಳಲ್ಲಿ ತೊಂದರೆ, ಹುಣ್ಣು, ಅಸುರಕ್ಷಿತ ಲೈಂಗಿಕ ಸಂಪರ್ಕದಿಂದ ಹರಡುವ ಹೂಮನ್ ಪ್ಯಾಪಿಲೋಮ ವೈರಸ್ (ಹೆಚ್.ಪಿ.ವಿ) ಸೋಂಕು ಕ್ರಮೇಣ ಗರ್ಭಕಂಠದ ಜೀವಕೋಶಗಳಲ್ಲಿ ಬದಲಾವಣೆಗಳಾಗಿ ಕ್ಯಾನ್ಸ‌ರ್ ಆಗಿ ಬದಲಾಗುತ್ತದೆ. ಈ ಹಿನ್ನಲೆಯಲ್ಲಿ ಆರೋಗ್ಯಕ್ಕೆ ಮಾರಕವಾಗುವುದನ್ನು ತಡೆಯಲು ಹೆಚ್.ಪಿ.ವಿ ಲಸಿಕೆಯನ್ನು ಸರ್ಕಾರದ ಮಾರ್ಗಸೂಚಿಯಡಿ 14 ವರ್ಷದ ಹೆಣ್ಣು ಮಕ್ಕಳಿಗೆ ಉಚಿತವಾಗಿ ಹಾಕಲಾಗುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಲು ಹತ್ತಿರದ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಬಹುದು ಎಂದರು. ಮಹಿಳೆಯರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಗರ್ಭಕಂಠ ಕ್ಯಾನ್ಸ‌ರ್ ತಡೆಗೆ ಹೆಚ್‌ ಪಿವಿ ಲಸಿಕೆ ಸಹಕಾರಿಯಾಗಿದ್ದು, ಈ ಕುರಿತು ಸಮುದಾಯಗಳಲ್ಲಿ ಹೆಚ್ಚು ಅರಿವು ಮೂಡಿಸುವ ಕಾರ್ಯವಾಗಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಈ ಲಸಿಕಾ ಅಭಿಯಾನ 90 ದಿನಗಳವರೆಗೆ ನಡೆಯಲಿದ್ದು, 14 ವರ್ಷದ ಎಲ್ಲಾ ಹೆಣ್ಣು ಮಕ್ಕಳು ಲಸಿಕೆ ಪಡೆಯಲು ಅರ್ಹರಿರುತ್ತಾರೆ. ಲಸಿಕೆ ಪಡೆಯುವುದರಿಂದ ಗರ್ಭಕಂಠದ ಕ್ಯಾನ್ಸರ್ ಅನ್ನು ಶೇ 99 ರಷ್ಟು ತಡೆಯಬಹುದು ಎಂದು ಹೇಳಿದರು. ಲಸಿಕೆ ಪಡೆಯಲು ಬರುವ ಪಲಾನುಭವಿಗಳು ಖಡ್ಡಾಯವಾಗಿ ಪೊಷಕರನ್ನು ಜೊತೆಯಲ್ಲಿ ಕರೆದುಕೊಂಡು ಬರಬೇಕು. ಜೊತೆಗೆ ಸೂಕ್ತ ಗುರುತಿನ ಚೀಟಿ (ಜನನ ಪ್ರಮಾಣ ಪತ್ರ) ತೆಗೆದುಕೊಂಡು ಬರಬೇಕು. ಮುಖ್ಯವಾಗಿ ಊಟ ಸೇವನೆ ಮಾಡಿರಬೇಕು. ಕ್ಯಾನ್ಸರ್ ಮುಕ್ತ ನಾಳೆಗಾಗಿ ಲಸಿಕೆಯ ಸುರಕ್ಷೆ ಹೊಂದಬೇಕು ಎಂದು ತಿಳಿಸಿದರು. ಇದೇ ವೇಳೆ ಸಾಂಕೇತಿಕವಾಗಿ 14 ವರ್ಷದ ಹೆಣ್ಣು ಮಕ್ಕಳಿಗೆ ಹೆಚ್‌ ಪಿವಿ ಲಸಿಕೆ ನೀಡಿದರು. ಬಳಿಕ ಲಸಿಕೆ ಪಡೆದ ಪ್ರಮಾಣ ಪತ್ರ ವಿತರಿಸಲಾಯಿತು. ಪೋಷಕರು ಹಾಗೂ ಶಾಲಾ ವಿದ್ಯಾರ್ಥಿಗಳು ಇದ್ದರು.

ಈ ಸಂದರ್ಭದಲ್ಲಿ ಹಿರಿಯ ಆರೋಗ್ಯ ನಿರಕ್ಷಣಾಧಿಕಾರಿ ಎಂ ಬಸವನಗೌಡ, ಕೃಷ್ಣಮೂರ್ತಿ, ಸುರಕ್ಷಾಧಿಕಾರಿಗಳಾದ ಪೂಜಾ, ಎನ್. ಕೆ. ನಂದಾ, ಪಿ. ಗೀತಾ. ಫಾರ್ಮಸಿ ಅಬ್ದಲ್ ಸಾಧಿಕ್ ಶಾಲೆಯ ಮುಖ್ಯಗುರು ಉಮೇಶ, ಸಮುದಾಯದ ಟಿ. ಸುದಾ, ಹನುಮಂತಪ್ಪ, ಆಶ್ವನಿ, ಸುಮಿತ್ರ, ಡಿಗೂಫ್ ನೌಕರ ವಿರೇಶ್, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಇತರರು ಇದ್ದರು

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments