ವರದಿ: ಶಿವರಾಜ್ ಕನ್ನಡಿಗ
ಕೊಟ್ಟೂರು:
ಪಟ್ಟಣದ ಹಲವು ಕಡೆಗಳಲ್ಲಿ ಕಸದ ರಾಶಿ ಕಣ್ಣಿಗೆ ರಾಚುತ್ತಿದೆ. ಕಸ ನಿರ್ವಹಣೆಯಲ್ಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದ್ದು, ಇದರ ವಿರುದ್ಧ ಪಟ್ಟಣದ ಸಾರ್ವಜನಿಕರು ಆಕ್ರೋಶ ಹೊರಹಾಕುತ್ತಿದ್ದಾರೆ.
ಕೊಟ್ಟೂರು ಪಟ್ಟಣದಲ್ಲಿ ಒಣ ಮತ್ತು ಹಸಿ ಕಸವನ್ನು ಪ್ರತ್ಯೇಕಿಸಿ ಹಾಕಲು ತೊಟ್ಟಿಗಳಿಲ್ಲ. ಹೀಗಾಗಿ, ಜನರು ಸಹ ಎಲ್ಲೆಂದರಲ್ಲಿ ಕಸ ಎಸೆದು ಹೋಗುತ್ತಿದ್ದಾರೆ.
ಮನೆಯಿಂದ ಕಸ ಸಂಗ್ರಹಿಸಲು ಸರ್ಕಾರ ವಾಹನ ನೀಡಿದೆ. ಆದರೆ, ವಾಹನಗಳು ಸರಿಯಾದ ಸಮಯಕ್ಕೆ ಹಾಗೂ ನಿಗದಿತ ದಿನದಂದು ಮನೆಗಳಿಗೆ ಬರುವುದಿಲ್ಲ. ಕಸ ಸಂಗ್ರಹಕ್ಕೆ ವೇಳಾಪಟ್ಟಿಯೇ ಇಲ್ಲದಂತಾಗಿದೆ. ಕೆಲ ಬಡಾವಣೆಗೆ ವಾಹನಗಳೇ ಬರುವುದಿಲ್ಲ. ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಸುರಿಯುವುದನ್ನು ರೂಢಿಸಿಕೊಂಡಿದ್ದಾರೆ.
ಕಸ ನಿರ್ವಹಣೆಗೂ ತಮಗೂ ಸಂಬಂಧವಿಲ್ಲದಂತೆ ಪಟ್ಟಣ ಪಂಚಾಯತ ಸಿಬ್ಬಂದಿ ವರ್ತಿಸುತ್ತಿದ್ದಾರೆ. ಕಸ ನಿರ್ವಹಣೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಿ, ಕಸದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕೆಂಬುದು ಜನರು ಒತ್ತಾಯಿಸುತ್ತಿದ್ದಾರೆ.
ಕೊಟ್ಟೂರು ಪಟ್ಟಣದಲ್ಲಿ ಎಲ್ಲಿ ನೋಡಿದರೂ ಕಸ, ದುರ್ವಾಸನೆ, ಮಲೀನಗೊಂಡ ಪರಿಸರ ಕಾಣುತ್ತಿದೆ. ಇದನ್ನು ಸರಿಪಡಿಸಿ ಸ್ವಚ್ಛ ಪಟ್ಟಣ ನಿರ್ಮಾಣಕ್ಕೆ ಮುಖ್ಯಾಧಿಕಾರಿಗಳು ಇಚ್ಛಾಶಕ್ತಿ ತೋರಬೇಕು’ ಎಂದು ಸ್ಥಳೀಯರು ಕೋರುತ್ತಿದ್ದಾರೆ.
ಪಟ್ಟಣದ ಎಲ್ಲಾ ಬಡಾವಣೆಗಳಲ್ಲೂ, ಕೆಲ ಮುಖ್ಯ ರಸ್ತೆಗಳ ಪಕ್ಕದಲ್ಲಿ ಕಸ ಸಂಗ್ರಹವಾಗುತ್ತಿದೆ. ಅದೇ ಸ್ಥಳ, ದಲ್ಲಿ ಬಿಡಾಡಿ ದನಗಳು, ಬೀದಿ ನಾಯಿಗಳು, ಕಸದ ರಾಶಿಯನ್ನು ರಸ್ತೆಯ ತುಂಬೆಲ್ಲ ಚಿಲ್ಲಾಪಿಲ್ಲಿ ಮಾಡುತ್ತಿವೆ. ಕಸವು ದುರ್ವಾಸನೆ ಬೀರುತ್ತಿದ್ದು, ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡುವ ಸ್ಥಿತಿ ಉಂಟಾಗಿದೆ.
ಮಲೀನಗೊಂಡ ಪರಿಸರ ಕಾಣುತ್ತಿದೆ. ಇದನ್ನು ಸರಿಪಡಿಸಿ ಸ್ವಚ್ಛ ಪಟ್ಟಣ ನಿರ್ಮಾಣಕ್ಕೆ ಅಧಿಕಾರಿಗಳು ಇಚ್ಛಾಶಕ್ತಿ ತೋರಬೇಕು’ ಎಂದು ಸ್ಥಳೀಯರು ಕೋರುತ್ತಿದ್ದಾರೆ.
ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡುವ ಸ್ಥಿತಿ ಉಂಟಾಗಿದೆ.
ಕಸದ ವಾಹನಗಳು ಕೆಲ ವಾರ್ಡ್ಗಳಲ್ಲಿ ಬೆಳಿಗ್ಗೆ ಬರುತ್ತವೆ. ಕೆಲವೆಡೆ ಮಧ್ಯಾಹ್ನ ಬರುತ್ತವೆ. ಕೆಲಸಕ್ಕೆ ಹೋಗುವವರು ಮಧ್ಯಾಹ್ನ ಮನೆಯಲ್ಲಿ ಇರುವುದಿಲ್ಲ. ಹಾಗಾಗಿ ವಾಹನಕ್ಕೆ ಕಸ ಹಾಕಲು ಸಾಧ್ಯವಾಗುತ್ತಿಲ್ಲ. ಪ್ರತಿ ವಾರ್ಡ್‌ಗೂ ಪ್ರತ್ಯೇಕ ವಾಹನ ಮತ್ತು ನಿರ್ದಿಷ್ಟ ಸಮಯ ನಿಗದಿ ಮಾಡಬೇಕು ಎಂದು ಜನರು ಒತ್ತಾಯಿಸುತ್ತಿದ್ದಾರೆ.
ಕಸ ನಿರ್ವಹಣೆ: ಪಟ್ಟಣದ ಮುಖ್ಯಾಧಿಕಾರಿ ಮೌನ
ಕೊಟ್ಟೂರು ಪಟ್ಟಣದಲ್ಲಿ ಕಸ ನಿರ್ವಹಣೆಯಲ್ಲಿ ಸಾಕಷ್ಟು ಸಮಸ್ಯೆಯಾಗುತ್ತಿದೆ. ಜನರಿಂದ ಆರಿಸಿದ ಕಸ ಸಮಸ್ಯೆಗೆ ಸ್ಪಂದಿಸದೇ ಮುಖ್ಯಾಧಿಕಾರಿಗಳು ಮೌನವಾಗಿದ್ದಾರೆ’ ಎಂದು ಜನರು ದೂರಿದರು.
ಕಸದ ನಿರ್ವಹಣೆ ಸಮಸ್ಯೆಗೆ ಪರಿಹಾರ ಸೂಚಿಸಬೇಕು. ಸ್ವಚ್ಛತೆಗೆ ಆದ್ಯತೆ ನೀಡಿ ಕೊಟ್ಟೂರು ಪಟ್ಟಣ ಪಟ್ಟಣವನ್ನು ಮಾದರಿ ಪಟ್ಟಣವಾಗಿ ರೂಪಿಸಬೇಕು’ ಎಂದು ಒತ್ತಾಯಿಸಿದರು
