ವರದಿ:ಶಿವರಾಜ್ ಕನ್ನಡಿಗ
ಕೊಟ್ಟೂರು, ಮಾ.30: ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ–2026 ಅಂಗವಾಗಿ ಮಂಡಲ ಮಟ್ಟದ ಕಾರ್ಯಾಗಾರವು ಏಪ್ರಿಲ್ 1 ಮತ್ತು 2ರಂದು ಕೊಟ್ಟೂರಿನ ಉಜ್ಜಿನಿ ರಸ್ತೆಯಲ್ಲಿರುವ ಮರುಳಸಿದ್ದೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.
ಈ ಕಾರ್ಯಾಗಾರದಲ್ಲಿ ಪಕ್ಷದ ಪದಾಧಿಕಾರಿಗಳಿಗೆ ಪಕ್ಷದ ತತ್ವ-ಸಿದ್ಧಾಂತಗಳು, ಪ್ರಸ್ತುತ ರಾಜಕೀಯ ಸವಾಲುಗಳು ಹಾಗೂ ಅವುಗಳಿಗೆ ಎದುರಿಸುವ ಕಾರ್ಯತಂತ್ರಗಳ ಕುರಿತು ಜಿಲ್ಲಾ ಮತ್ತು ರಾಜ್ಯ ಮಟ್ಟದ ಹಿರಿಯ ನಾಯಕರು ತರಬೇತಿ ನೀಡಲಿದ್ದಾರೆ. ಕಾರ್ಯಕರ್ತರ ಸಂಘಟನೆ ಬಲವರ್ಧನೆ ಹಾಗೂ ಪರಿಣಾಮಕಾರಿ ಕಾರ್ಯಚಟುವಟಿಕೆಗಳ ಬಗ್ಗೆ ವಿಶೇಷ ಮಾರ್ಗದರ್ಶನ ನೀಡಲಾಗುತ್ತದೆ.
ಕಾರ್ಯಕ್ರಮದಲ್ಲಿ ಬಳ್ಳಾರಿ ವಿಭಾಗದ ಸಹ ಪ್ರಭಾರಿಯಾದ ಚನ್ನ ಬಸವನಗೌಡ ಪಾಟೀಲ್, ಜಿಲ್ಲಾ ಅಧ್ಯಕ್ಷ ಸಂಜೀವ್ ರೆಡ್ಡಿ, ಮಂಡಲ ಅಧ್ಯಕ್ಷ ಪ್ರಕಾಶ್ ಬೆಣಕಲ್ ಸೇರಿದಂತೆ ಹಲವು ಸ್ಥಳೀಯ ನಾಯಕರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ.
ಈ ಕುರಿತು ಕೊಟ್ಟೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಪಂಪಾಪತಿ ಅಂಗಡಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
