HomeKotturuಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ರಾಜ್ಯ ಸಂಘದಿಂದ ಅರ್ಜಿ ಆಹ್ವಾನ

ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ರಾಜ್ಯ ಸಂಘದಿಂದ ಅರ್ಜಿ ಆಹ್ವಾನ

ವರದಿ:ಶಿವರಾಜ್ ಕನ್ನಡಿಗ,

ಕೊಟ್ಟೂರು :- ರಾಜ್ಯ ಸರ್ಕಾರಿ ನೌಕರರ ಕೇಂದ್ರ ಸಂಘ, ಬೆಂಗಳೂರು ಇವರು ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚಿನ ಅಂಕದೊಂದಿಗೆ ಉತ್ತೀರ್ಣರಾದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡುವ ಕುರಿತು ಆನ್ಲೈನ್ ಅಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ತಂದೆ ಅಥವಾ ತಾಯಿ ರಾಜ್ಯ ಸರಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ನೌಕರರಾಗಿರಬೇಕು (ಕೆ.ಜಿ.ಐ.ಡಿ ಸಂಖ್ಯೆ ಹೊಂದಿರಬೇಕು). ನಿಗಮ, ಮಂಡಳಿ, ಪ್ರಾಧಿಕಾರ, ಸ್ಥಳೀಯ ಸಂಸ್ಥೆ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾಸಂಸ್ಥೆಗಳಲ್ಲಿ ನೇಮಕಗೊಂಡ ನೌಕರರ ಮಕ್ಕಳು ಅರ್ಜಿ ಸಲ್ಲಿಸುವಂತಿಲ್ಲ. ವಿದ್ಯಾರ್ಥಿ ಪ್ರಥಮ ಪ್ರಯತ್ನದಲ್ಲೇ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿ.ಯು.ಸಿ. ಪರಿಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.

ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸುವಾಗ ವಿದ್ಯಾರ್ಥಿಗಳು ಪಾಸ್ಪೋರ್ಟ್ ಅಳತೆಯ ಭಾವಚಿತ್ರ, ದೃಢೀಕೃತ ಅಂಕಪಟ್ಟಿ, ಕೆ.ಜಿ.ಐ.ಡಿ. ನಂಬರ್ ಮತ್ತು ಇಲಾಖೆಯ ಸೇವಾ ದೃಢೀಕರಣ ಪತ್ರ, ಸಂಘದ ತಾಲೂಕು ಶಾಖೆ ಅಧ್ಯಕ್ಷರ ಸಹಿ ಮತ್ತು ಮೊಹರಿನೊಂದಿಗೆ ಪಡೆದ ದೃಢೀಕರಣ ಪತ್ರ ಅಪ್ಲೋಡ್ ಮಾಡಬೇಕು. ಮೇ-31 ರೊಳಗೆ http://powermedia.info ಆನ್ಲೈನ್ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕು ಶಾಖೆಯ ಅಧ್ಯಕ್ಷರಾದ ಯೋಗೀಶ್ವರ ದಿನ್ನೆ(78999 61616) ಅವರನ್ನು ಸಂಪರ್ಕಿಸಬಹುದು ಎಂದು ಈ ಮೂಲಕ ಕೊಟ್ಟೂರು ತಾಲೂಕಿನ ನೌಕರ ಭಾಂಧವರಿಗೆ ಮಾಹಿತಿಯನ್ನು ನೀಡುತ್ತಾ, ಕೋರಿರುತ್ತಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments