Saturday, June 20, 2026
HomeDistrictsBallariಯೋಗದಿಂದ ಉತ್ತಮ ಆರೋಗ್ಯ ಮತ್ತು ಮಾನಸಿಕ ನೆಮ್ಮದಿ ಸಾಧ್ಯ: ಡಾ.ಟಿ. ಫಣೇಂದರ್

ಯೋಗದಿಂದ ಉತ್ತಮ ಆರೋಗ್ಯ ಮತ್ತು ಮಾನಸಿಕ ನೆಮ್ಮದಿ ಸಾಧ್ಯ: ಡಾ.ಟಿ. ಫಣೇಂದರ್

ಬಳ್ಳಾರಿ,ಜೂ.20:ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಸಾರ್ವಜನಿಕರಲ್ಲಿ ಆರೋಗ್ಯ ಮತ್ತು ಯೋಗದ ಮಹತ್ವದ ಕುರಿತು ಜಾಗೃತಿ ಮೂಡಿಸಲು ಶುಕ್ರವಾರ ನಗರದಲ್ಲಿ ಬೃಹತ್ ‘ನಡಿಗೆ ಜಾಥಾ’ (ವಾಕಥಾನ್) ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಹಾಗೂ ವಿವಿಧ ಯೋಗ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಾಥಾಕ್ಕೆ ನಗರದ ನೂತನ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ಡಾ.ಟಿ. ಫಣೇಂದರ್ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಯೋಗದಿಂದ ದೇಹಕ್ಕೆ ಮತ್ತು ಮನಸ್ಸಿಗೆ ಅನೇಕ ಆರೋಗ್ಯಕರ ಪ್ರಯೋಜನಗಳಿವೆ. ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಕಂಡುಬರುತ್ತಿರುವ ಸಕ್ಕರೆ ಕಾಯಿಲೆ (ಡಯಾಬಿಟಿಸ್) ಮತ್ತು ರಕ್ತದೊತ್ತಡದ (ಬಿಪಿ) ದಂತಹ ಸಮಸ್ಯೆಗಳನ್ನು ನಿಯಂತ್ರಿಸಲು ಯೋಗ ಅತ್ಯುತ್ತಮ ಮಾರ್ಗವಾಗಿದೆ. ಆರೋಗ್ಯಕರ ಮತ್ತು ಸ್ವಸ್ಥ ಸಮಾಜ ನಿರ್ಮಾಣಕ್ಕಾಗಿ ಜೂ.21 ರಂದು ಯೋಗ ದಿನಾಚರಣೆಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.

ಆಧುನಿಕ ಜೀವನಶೈಲಿಯಲ್ಲಿ ಎದುರಾಗುವ ಒತ್ತಡ ಮತ್ತು ಆರೋಗ್ಯ ಸಮಸ್ಯೆಗಳಿಗೆ ಯೋಗ ಅತ್ಯುತ್ತಮ ಮದ್ದಾಗಿದೆ. ಯೋಗವನ್ನು ಕೇವಲ ಒಂದು ದಿನಕ್ಕೆ ಸೀಮಿತಗೊಳಿಸದೆ, ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದ ಭಾಗವಾಗಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಸಾರ್ವಜನಿಕರನ್ನು ಪ್ರೇರೇಪಿಸಲು ಈ ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಜಾಥಾವು ನೂತನ ಜಿಲ್ಲಾಡಳಿತ ಭವನದ ಆವರಣದಿಂದ ಪ್ರಾರಂಭಗೊAಡು ಸಂಗA ವೃತ್ತ, ಗಡಿಗಿ ಚೆನ್ನಪ್ಪ ವೃತ್ತದ ಮೂಲಕ ರೈಲ್ವೆ ಸ್ಟೇಷನ್ ರಸ್ತೆಯ ಮೂಲಕ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಆವರಣಕ್ಕೆ ತಲುಪಿ ಅಂತ್ಯಗೊಂಡಿತು

ಜಾಥಾದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಯೋಗ ಪಟುಗಳು, ಸಾರ್ವಜನಿಕರು ಹಾಗೂ ಹಿರಿಯ ನಾಗರಿಕರು ಅತ್ಯಂತ ಉತ್ಸಾಹದಿಂದ ಪಾಲ್ಗೊಂಡಿದ್ದರು. ‘ಆರೋಗ್ಯವೇ ಭಾಗ್ಯ’, ‘ದಿನವೂ ಮಾಡಿ ಯೋಗ, ದೂರವಿಡಿ ರೋಗ’ ಎಂಬ ಘೋಷಣೆಗಳುಳ್ಳ ಫಲಕಗಳನ್ನು ಹಿಡಿದು ಸಾರ್ವಜನಿಕರ ಗಮನ ಸೆಳೆಯಲಾಯಿತು.
ಈ ವೇಳೆ ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲೆಯ ವಿವಿಧ ಯೋಗ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments