Saturday, July 4, 2026
HomeVijayanagaraಸ್ಲಂ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ಹಾಗೂ ಜಾಮಿಟ್ರಿ ಬಾಕ್ಸ್ ವಿತರಣೆ: ಶಿಕ್ಷಣಕ್ಕೆ ಉತ್ತೇಜನ ನೀಡಿದ ಸ್ಲಂ ಜನರ...

ಸ್ಲಂ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ಹಾಗೂ ಜಾಮಿಟ್ರಿ ಬಾಕ್ಸ್ ವಿತರಣೆ: ಶಿಕ್ಷಣಕ್ಕೆ ಉತ್ತೇಜನ ನೀಡಿದ ಸ್ಲಂ ಜನರ ಸಂಘಟನೆ

ಹೊಸಪೇಟೆ, ವಿಜಯನಗರ:
ಸ್ಲಂ ಜನರ ಸಂಘಟನೆ ಕರ್ನಾಟಕ, ವಿಜಯನಗರ ಜಿಲ್ಲಾ ಹೊಸಪೇಟೆ ಸಮಿತಿ ವತಿಯಿಂದ ಸ್ಲಂ ಪ್ರದೇಶದ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ಹಾಗೂ ಜಾಮಿಟ್ರಿ ಬಾಕ್ಸ್ ವಿತರಣೆ ಕಾರ್ಯಕ್ರಮವನ್ನು ಸಮಾಜಸೇವಕ ಚಾಂದ್ ಬಾಷಾ ಅವರ ಪ್ರಾಯೋಜಕತ್ವದಲ್ಲಿ ನಗರದ ಗೌತಮ ಬುದ್ಧ ಎ.ಸಿ. ಫಂಕ್ಷನ್ ಹಾಲ್‌ನಲ್ಲಿ ಆಯೋಜಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಲಂ ಜನರ ಸಂಘಟನೆ ಕರ್ನಾಟಕ, ವಿಜಯನಗರ ಜಿಲ್ಲಾ ಸಮಿತಿಯ ಜಿಲ್ಲಾಧ್ಯಕ್ಷ ಹೆಚ್. ಶೇಷ ವಹಿಸಿ ಮಾತನಾಡಿದರು. ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಕಂಡ ಕನಸಿನಂತೆ ಸ್ಲಂ ಪ್ರದೇಶದ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಅವರು ಉತ್ತಮ ಶಿಕ್ಷಣ ಪಡೆದು ಉನ್ನತ ಸ್ಥಾನಕ್ಕೇರಬೇಕು. ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳು ವಿದ್ಯಾಭ್ಯಾಸವನ್ನು ಅರ್ಧಕ್ಕೆ ಕೈಬಿಡದೆ, ಗುರಿಯೊಂದಿಗೆ ಮುಂದುವರಿಯಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಸಂಘದ ಜಿಲ್ಲಾಧ್ಯಕ್ಷ ಕೆ.ಪಿ. ಉಮಾಪತಿ, ಗೌರವಾಧ್ಯಕ್ಷ ಎಂ.ಸಿ. ವೀರಸ್ವಾಮಿ, ಸ್ಲಂ ಜನರ ಸಂಘಟನೆ ಕರ್ನಾಟಕ ವಿಜಯನಗರ ಜಿಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಎನ್. ವೆಂಕಟೇಶ್, ಮಹಿಳಾ ಘಟಕದ ಅಧ್ಯಕ್ಷೆ ಹುಲಿಗೆಮ್ಮ, ಸಂಘಟನಾ ಕಾರ್ಯದರ್ಶಿ ಗುತ್ತಿ ಕೈಲಾಸ್, ಸಮಾಜಸೇವಕ ಚಾಂದ್ ಬಾಷಾ, ಅಂಬೇಡ್ಕರ್ ಸಂಘದ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ವರುಲು, ಶೇಕ್ ಮೆಹಬೂಬ್ ಬಾಷಾ, ಲತಾ, ಜಾಫ್ರೀನ್, ನಾಗವೇಣಿ, ಶಹನಾಜ್, ಪಾಂಡು, ಹೊನ್ನಪ್ಪ, ಭರತ್ ಕುಮಾರ್ ಸಿ.ಆರ್., ಚಿರಂಜೀವಿ, ಉಮೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಐವತ್ತಕ್ಕೂ ಹೆಚ್ಚು ಸ್ಲಂ ಪ್ರದೇಶದ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ಹಾಗೂ ಜಾಮಿಟ್ರಿ ಬಾಕ್ಸ್‌ಗಳನ್ನು ವಿತರಿಸಿ, ಅವರ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲಾಯಿತು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments