Saturday, July 18, 2026
HomeDistrictsBallariಕರಾಮುವಿಗೆ ಪ್ರವೇಶಾತಿ ಪ್ರಾರಂಭ

ಕರಾಮುವಿಗೆ ಪ್ರವೇಶಾತಿ ಪ್ರಾರಂಭ

ಬಳ್ಳಾರಿ,ಜು.16: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಶೈಕ್ಷಣಿಕ ವರ್ಷ 2026-27ರ ಜುಲೈ ಆವೃತ್ತಿಯ ಯುಜಿಸಿ ಅನುಮೋದಿತ ವಿವಿಧ ಶಿಕ್ಷಣಕ್ರಮಗಳ ಪ್ರವೇಶಾತಿಯು ಪ್ರಾರಂಭವಾಗಿದ್ದು, ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಬಳ್ಳಾರಿ ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕ ನಾಗೇಶ್.ಎಂ ತಿಳಿಸಿದ್ದಾರೆ.
ವಿಶ್ವವಿದ್ಯಾನಿಲಯದ ವಿವಿಧ ಪದವಿ, ಸ್ನಾತಕೋತ್ತರ ಪದವಿ ಸೇರಿದಂತೆ ಹಲವು ಕೋರ್ಸ್ಗಳಿಗೆ ಬಳ್ಳಾರಿ ಪ್ರಾದೇಶಿಕ ಕೇಂದ್ರದಲ್ಲಿ ಆನ್‌ಲೈನ್ ಮೂಲಕ ಪ್ರವೇಶಾತಿ ಪ್ರಕ್ರಿಯೆ ನಡೆಯುತ್ತಿದೆ.

ಲಭ್ಯವಿರುವ ಪ್ರಮುಖ ಕೋರ್ಸ್ಗಳು:
ಬಿ.ಎ., ಬಿ.ಕಾಂ., ಬಿ.ಎಸ್ಸಿ., ಬಿ.ಬಿ.ಎ., ಬಿ.ಸಿ.ಎ., ಬಿ.ಲಿಬ್.ಐ.ಎಸ್ಸಿ., ಬಿ.ಎಸ್.ಡಬ್ಲ್ಯೂ., ಎಂ.ಎ., ಎಂ.ಕಾಂ., ಎಂ.ಎಸ್ಸಿ., ಎಂ.ಬಿ.ಎ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ., ಎಂ.ಲಿಬ್.ಐ.ಎಸ್ಸಿ. ಹಾಗೂ ವಿವಿಧ ಪಿಜಿ ಸರ್ಟಿಫಿಕೇಟ್, ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಶಿಕ್ಷಣ ಕ್ರಮಗಳು.

ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 8 ಲಕ್ಷಕ್ಕಿಂತ ಕಡಿಮೆ ಇದ್ದಲ್ಲಿ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ವತಿಯಿಂದ ಪದವಿ / ಸ್ನಾತಕೋತ್ತರ ಪದವಿ ಕೋರ್ಸ್ಗಳಿಗೆ ಉಚಿತ ಪ್ರವೇಶಾತಿ ಪಡೆಯಬಹುದು. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ.

ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ, ರಕ್ಷಣಾ ಇಲಾಖೆ / ಮಾಜಿ ಸೈನಿಕರ ವಿದ್ಯಾರ್ಥಿಗಳಿಗೆ, ಆಟೋ/ಕ್ಯಾಬ್ ಚಾಲಕರು ಮತ್ತು ಅವರ ಮಕ್ಕಳಿಗೆ ಶೇ.10 ವಿಶೇಷ ರಿಯಾಯಿತಿ ಇರುತ್ತದೆ. ಕೋವಿಡ್‌ನಿಂದಾಗಿ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ, ದೃಷ್ಟಿಹೀನ ವಿದ್ಯಾರ್ಥಿಗಳಿಗೆ ಹಾಗೂ ತೃತೀಯ ಲಿಂಗಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ ನೀಡಲಾಗಿದೆ.
ಪ್ರವೇಶಾತಿ ಪಡೆಯಲು ಸೆಪ್ಟೆಂಬರ್ 15 ಕೊನೆಯ ದಿನವಾಗಿದೆ. ವಿದ್ಯಾರ್ಥಿಗಳು ಪ್ರವೇಶಾತಿ ಪೋರ್ಟಲ್ (https://www.google.com/search?q=https://ksouportal.com/views/ApplicantLogin.aspx) ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಮೊ.9986696487 ಗೆ ಕರೆ ಮಾಡಬಹುದು ಅಥವಾ ಖುದ್ದಾಗಿ ‘ಕರಾಮುವಿ ಪ್ರಾದೇಶಿಕ ಕೇಂದ್ರ, ಜಿಲ್ಲಾ ಕ್ರೀಡಾಂಗಣದ ಹತ್ತಿರ, ಪ್ರಾದೇಶಿಕ ವಿಜ್ಞಾನ ಕೇಂದ್ರದ ಹಿಂಭಾಗ, ನಲ್ಲಚೆರವು ಪ್ರದೇಶ, ಬಳ್ಳಾರಿ’ ಇಲ್ಲಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments