Friday, July 31, 2026
HomeSandurಬರಕ್ಕೆ ಬಾಡಿದ ಬೆಳೆಗಳು; ಅನ್ನದಾತನ ನೆರವಿಗೆ ಸರ್ಕಾರ ಧಾವಿಸಲಿ: ಆರ್. ಅಶೋಕ್

ಬರಕ್ಕೆ ಬಾಡಿದ ಬೆಳೆಗಳು; ಅನ್ನದಾತನ ನೆರವಿಗೆ ಸರ್ಕಾರ ಧಾವಿಸಲಿ: ಆರ್. ಅಶೋಕ್

ಸಂಡೂರು, ಜು.30: ಬರ ಪರಿಸ್ಥಿತಿ ಪರಿಶೀಲನೆ ಪ್ರವಾಸದ ಎರಡನೇ ದಿನದ ಅಂಗವಾಗಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಗುರುವಾರ ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ವಿಠಲಾಪುರ ಗ್ರಾಮಕ್ಕೆ ಭೇಟಿ ನೀಡಿ, ಬರ ಹಾಗೂ ನೀರಿನ ಕೊರತೆಯಿಂದ ಹಾನಿಗೊಳಗಾದ ರೈತರ ಜಮೀನುಗಳನ್ನು ಪರಿಶೀಲಿಸಿದರು. ಈ ವೇಳೆ ರೈತರೊಂದಿಗೆ ನೇರವಾಗಿ ಸಂವಾದ ನಡೆಸಿ, ಅವರ ಸಮಸ್ಯೆಗಳು ಹಾಗೂ ಅಹವಾಲುಗಳನ್ನು ಆಲಿಸಿದರು.

ಮಳೆ ಕೈಕೊಟ್ಟ ಪರಿಣಾಮ ಹಾಗೂ ನೀರಿನ ಅಭಾವದಿಂದ ಹೊಲಗಳಲ್ಲಿನ ಬೆಳೆಗಳು ಸಂಪೂರ್ಣ ಬಾಡಿ ನಿಂತಿದ್ದು, ಅಪಾರ ಶ್ರಮ ಮತ್ತು ಸಾಲದ ಹಣ ಹೂಡಿ ಬೆಳೆ ಬೆಳೆದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆ ನಷ್ಟದಿಂದ ರೈತರ ಜೀವನೋಪಾಯಕ್ಕೆ ಧಕ್ಕೆಯಾಗಿದ್ದು, ಮುಂದಿನ ಕೃಷಿ ಚಟುವಟಿಕೆಗಳ ಬಗ್ಗೆ ಆತಂಕ ವ್ಯಕ್ತವಾಗುತ್ತಿದೆ.

ಪರಿಶೀಲನೆಯ ಬಳಿಕ ಮಾತನಾಡಿದ ಆರ್. ಅಶೋಕ್ ಅವರು, ರಾಜ್ಯದ ಹಲವು ಭಾಗಗಳಲ್ಲಿ ರೈತರು ಬರದ ಸಂಕಷ್ಟವನ್ನು ಎದುರಿಸುತ್ತಿದ್ದರೂ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು. ಇಂತಹ ಗಂಭೀರ ಪರಿಸ್ಥಿತಿಯಲ್ಲೂ ರೈತರ ಸಮಸ್ಯೆಗಳಿಗೆ ಸ್ಪಂದಿಸುವ ಬದಲು ಸರ್ಕಾರ ರಾಜಕೀಯ ಚಟುವಟಿಕೆಗಳಲ್ಲೇ ನಿರತವಾಗಿರುವುದು ವಿಷಾದನೀಯ ಎಂದು ಅವರು ಹೇಳಿದರು.

ರಾಜ್ಯ ಸರ್ಕಾರ ಕೂಡಲೇ ಸಮಗ್ರ ಬೆಳೆ ಹಾನಿ ಸಮೀಕ್ಷೆ ನಡೆಸಿ, ರೈತರಿಗೆ ಯಾವುದೇ ವಿಳಂಬವಿಲ್ಲದೆ ಬೆಳೆ ನಷ್ಟ ಪರಿಹಾರ ಹಾಗೂ ಅಗತ್ಯ ನೆರವು ಒದಗಿಸಬೇಕು. ಅನ್ನದಾತನ ಬದುಕನ್ನು ಕಾಪಾಡುವುದು ಸರ್ಕಾರದ ಮೊದಲ ಆದ್ಯತೆಯಾಗಬೇಕು ಎಂದು ಅವರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಸಂಬಂಧಿತ ಇಲಾಖೆಯ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ಪಕ್ಷದ ಮುಖಂಡರು ಹಾಗೂ ರೈತರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments