ವರದಿ: ಶಿವರಾಜ್ ಕನ್ನಡಿಗ
ಕೊಟ್ಟೂರು: ವಿಜಯನಗರ ಜಿಲ್ಲಾ ಉಸ್ತುವಾರಿ ಹಾಗೂ ಮುಜರಾಯಿ, ಮೀನುಗಾರಿಕೆ ಮತ್ತು ಬಂದರು ಸಚಿವರಾದ ಶ್ರೀ ಕೆ.ಎಸ್. ಬಸವಂತಪ್ಪ ಅವರು ಶನಿವಾರ ಕೊಟ್ಟೂರಿಗೆ ಆಗಮಿಸಿದ ವೇಳೆಯಲ್ಲಿ ಕೊಟ್ಟೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಹಿರಿಯ ಮುಖಂಡರ ನೇತೃತ್ವದಲ್ಲಿ ಅತ್ಯಂತ ವಿಜೃಂಭಣೆಯಿಂದ ಸ್ವಾಗತಿಸಿ, ಆತ್ಮೀಯವಾಗಿ ಸನ್ಮಾನಿಸಲಾಯಿತು.
ಪಟ್ಟಣದ ರೇಣುಕಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಹಿರಿಯ ಮುಖಂಡರಾದ ಎಮ್.ಎಮ್.ಜೆ. ಸತ್ಯಪ್ರಕಾಶ್ ಅವರು ಮಾನ್ಯ ಸಚಿವರಿಗೆ ಶಾಲ ಹೊದಿಸಿ, ಹೂಮಾಲೆ ಹಾಕಿ ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಕೊಟ್ಟೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಐ.ಎಂ. ದಾರುಕೇಶ್, ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ದೊಡ್ಡರಾಮ್ಮಣ್ಣ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅನಿಲ್ ಹೊಸಮನಿ, ಪ್ರಮುಖ ಮುಖಂಡರಾದ ಬದ್ದಿ ಮರಿಸ್ವಾಮಿ, ಅಡಿಕಿ ಮಂಜುನಾಥ ಸೇರಿದಂತೆ ಪಕ್ಷದ ವಿವಿಧ ಹಂತದ ಪದಾಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ನೂರಾರು ಸಂಖ್ಯೆಯ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
