Friday, September 4, 2026
HomeDistrictsBengaluru Cityಅತಿ ಕಿರಿಯ ವಯಸ್ಸಿನಲ್ಲೇ 600 ಮೀಟರ್ ಓಟದ ದಾಖಲೆ: ತನವ್ ಮೋಹನ್ ಕುಮಾರ್‌ಗೆ ಮುಖ್ಯಮಂತ್ರಿ ಡಿ.ಕೆ....

ಅತಿ ಕಿರಿಯ ವಯಸ್ಸಿನಲ್ಲೇ 600 ಮೀಟರ್ ಓಟದ ದಾಖಲೆ: ತನವ್ ಮೋಹನ್ ಕುಮಾರ್‌ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಭಿನಂದನೆ

ಬೆಂಗಳೂರು, ಸೆಪ್ಟೆಂಬರ್ 2: ಅತಿ ಕಿರಿಯ ವಯಸ್ಸಿನಲ್ಲಿಯೇ 600 ಮೀಟರ್ ಓಟವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ದಾಖಲೆ ನಿರ್ಮಿಸಿರುವ ತನವ್ ಮೋಹನ್ ಕುಮಾರ್ ಅವರ ಸಾಧನೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಭಿನಂದಿಸಿದ್ದಾರೆ.

ಬಳ್ಳಾರಿ ಜಿಲ್ಲೆಯ ಕಂಪ್ಲಿ ನಿವಾಸಿಗಳಾದ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯ ಮೋಹನ್ ಕುಮಾರ್ ದಾನಪ್ಪ ಹಾಗೂ ಸೌಮ್ಯಶ್ರೀ ಮೋಹನ್ ಕುಮಾರ್ ದಂಪತಿಯ ಪುತ್ರ ತನವ್ ಮೋಹನ್ ಕುಮಾರ್, ಕೇವಲ 3 ವರ್ಷ 10 ತಿಂಗಳ ವಯಸ್ಸಿನಲ್ಲಿಯೇ, ದಿನಾಂಕ 05-07-2026ರಂದು ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆದ 600 ಮೀಟರ್ ಓಟವನ್ನು 5 ನಿಮಿಷ 44 ಸೆಕೆಂಡ್‌ಗಳಲ್ಲಿ ಪೂರ್ಣಗೊಳಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ದಾಖಲೆ ನಿರ್ಮಿಸಿದ್ದಾರೆ.

ತನವ್ ಮೋಹನ್ ಕುಮಾರ್ ಅವರ ಈ ಗಮನಾರ್ಹ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಅಭಿನಂದನಾ ಪತ್ರದಲ್ಲಿ, ಅತಿ ಕಿರಿಯ ವಯಸ್ಸಿನಲ್ಲಿಯೇ 600 ಮೀಟರ್ ಓಟವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ದಾಖಲೆ ನಿರ್ಮಿಸಿರುವ ತನವ್ ಮೋಹನ್ ಕುಮಾರ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಇಷ್ಟು ಚಿಕ್ಕ ವಯಸ್ಸಿನಲ್ಲಿಯೇ ಕ್ರೀಡಾ ಕ್ಷೇತ್ರದಲ್ಲಿ ತಮ್ಮ ಪ್ರತಿಭೆ, ಆತ್ಮವಿಶ್ವಾಸ, ಪರಿಶ್ರಮ ಮತ್ತು ಸಾಧನೆಯ ಛಲವನ್ನು ಪ್ರದರ್ಶಿಸಿ ಗಮನಾರ್ಹ ಸಾಧನೆ ಮಾಡಿರುವುದು ಅತ್ಯಂತ ಶ್ಲಾಘನೀಯ ಎಂದು ಮುಖ್ಯಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮುಂದಿನ ದಿನಗಳಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮಾಡಿ ಕರ್ನಾಟಕ ರಾಜ್ಯ ಹಾಗೂ ದೇಶಕ್ಕೆ ಕೀರ್ತಿ ತರಲಿ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಾರೈಸಿದ್ದು, ತನವ್ ಮೋಹನ್ ಕುಮಾರ್ ಅವರ ಉಜ್ವಲ ಭವಿಷ್ಯಕ್ಕಾಗಿ ಶುಭ ಹಾರೈಸಿದ್ದಾರೆ.

ಕೇವಲ ಮೂರು ವರ್ಷ ಹತ್ತು ತಿಂಗಳ ವಯಸ್ಸಿನಲ್ಲಿಯೇ 600 ಮೀಟರ್ ಓಟವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ರಾಷ್ಟ್ರೀಯ ಮಟ್ಟದ ದಾಖಲೆ ನಿರ್ಮಿಸಿರುವ ತನವ್ ಮೋಹನ್ ಕುಮಾರ್ ಅವರ ಸಾಧನೆಗೆ ಸಾರ್ವಜನಿಕರು, ಕ್ರೀಡಾ ವಲಯ ಹಾಗೂ ವಿವಿಧ ಗಣ್ಯರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments