Saturday, September 5, 2026
HomeDistrictsBengaluru Cityರಾಜ್ಯ ಪೊಲೀಸ್ ದೂರು ಪ್ರಾಧಿಕಾರಕ್ಕೆ ಅಧ್ಯಕ್ಷರನ್ನ ನೇಮಿಸಿ- ಮೋಹನ್ ಕುಮಾರ್ ದಾನಪ್ಪ

ರಾಜ್ಯ ಪೊಲೀಸ್ ದೂರು ಪ್ರಾಧಿಕಾರಕ್ಕೆ ಅಧ್ಯಕ್ಷರನ್ನ ನೇಮಿಸಿ- ಮೋಹನ್ ಕುಮಾರ್ ದಾನಪ್ಪ

ಬೆಂಗಳೂರು: ಸೆ5, ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದಲ್ಲಿ ತೆರವಾದ ಅಧ್ಯಕ್ಷರ ಸ್ಥಾನಕ್ಕೆ ನೂತನ ಅಧ್ಯಕ್ಷರನ್ನು ನೇಮಿಸುವಂತೆ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯ ಮೋಹನ್ ಕುಮಾರ್ ದಾನಪ್ಪ ಒಳಾಡಳಿತ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ!

ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳಾದ ಜಸ್ಟಿಸ್ ಶ್ರೀ ಎನ್.ಕೆ.ಸುಧೀಂದ್ರ ರಾವ್‌ರವರ ಅಧಿಕಾರವಧಿಯು ಜುಲೈ 31 ರಂದು ಪೂರ್ಣಗೊಂಡಿದ್ದರಿಂದ ಪ್ರಸ್ತುತ ಪ್ರಾಧಿಕಾರದಲ್ಲಿ ಅಧ್ಯಕ್ಷರ ಸ್ಥಾನ ತೆರವಾಗಿ 1 ತಿಂಗಳು ಕಳೆದಿದ್ದು ನೂತನ ಅಧ್ಯಕ್ಷರ ನೇಮಕವಾಗದಿರುವುದ್ದರಿಂದ ಪ್ರಾಧಿಕಾರದಲ್ಲಿ ಹಲವಾರು ಪ್ರಕರಣಗಳು ದಾಖಲಾಗಿದ್ದು ಕೆಲವು ಪ್ರಕರಣಗಳು ಗೌರವಾನ್ವಿತ ಕರ್ನಾಟಕ ಉಚ್ಚ ನ್ಯಾಯಾಲಯದ ನಿರ್ದೇಶನಕ್ಕೊಳಪಟ್ಟ ಮತ್ತು ಕೆಲವು ಪ್ರಕರಣಗಳು ದೂರುದಾರರ ಸ್ವಾತಂತ್ರ್ಯ ಹಾಗೂ ಹಕ್ಕುಗಳಿಗೆ ಸಂಬಂದಿಸಿದ ದೂರುಗಳು ಸೇರಿದಂತೆ ಹಲವು ಪ್ರಕರಣಗಳು ಈಗಾಗಲೇ ವಿಚಾರಣೆ ನಡೆದು ಅಂತಿಮ ವಿಲೇವಾರಿ ಹಂತದಲ್ಲಿದ್ದ ಸಂದರ್ಭದಲ್ಲಿ ಅಧ್ಯಕ್ಷರ ಸ್ಥಾನ ಖಾಲಿಯಾಗಿರುವುದ್ದರಿಂದ ಪ್ರಕರಣಗಳ ತ್ವರಿತ ವಿಲೇವಾರಿ ಹಾಗೂ ಆಡಳಿತಾತ್ಮಕ ನಿರಂತರತೆಗೆ ಅಡಚಣೆ ಉಂಟಾಗಿ ದೂರುದಾರರ ಹಿತಾಸಕ್ತಿಯ ಮೇಲೆ ನೇರ ಪರಿಣಾಮ ಬೀಳುತ್ತಿರುವುದ್ದರಿಂದ ಪ್ರಾಧಿಕಾರದ ಮತ್ತು ಸಾರ್ವಜನಿಕರ ವಿಶ್ವಾಸಾರ್ಹತೆಗೆ ಧಕ್ಕೆಯಾಗುತ್ತಿದ್ದು ಪ್ರಾಧಿಕಾರಕ್ಕೆ ಅಧ್ಯಕ್ಷರ ಸೇವೆಯು ಅತ್ಯಗತ್ಯವಾಗಿದ್ದು ಸಕಾಲದಲ್ಲಿ ದೂರುದಾರರ ದೂರುಗಳನ್ನು ತ್ವರಿತಗತಿಯಲ್ಲಿ ವಿಲೇ ಮಾಡಲು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರ ನೇಮಕಾತಿ ಮಾಡಲು ತ್ವರಿತವಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಪತ್ರ ಬರೆದಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments