Friday, September 11, 2026
HomeDistrictsBallariಆರೋಗ್ಯ ಕಾರ್ಯಕ್ರಮಗಳಲ್ಲಿ ಶೇ. 100 ರಷ್ಟು ಪ್ರಗತಿ ಸಾಧಿಸಿ: ಡಾ. ಶೋಭಾ ಸೂಚನೆ

ಆರೋಗ್ಯ ಕಾರ್ಯಕ್ರಮಗಳಲ್ಲಿ ಶೇ. 100 ರಷ್ಟು ಪ್ರಗತಿ ಸಾಧಿಸಿ: ಡಾ. ಶೋಭಾ ಸೂಚನೆ

ಬಳ್ಳಾರಿ,ಸೆ.11:ಸಾರ್ವಜನಿಕರಿಗೆ ಸರ್ಕಾರದ ಆರೋಗ್ಯ ಸೇವೆಗಳನ್ನು ಸಮರ್ಪಕವಾಗಿ ತಲುಪಿಸುವ ನಿಟ್ಟಿನಲ್ಲಿ ವಿವಿಧ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳಲ್ಲಿ ಶೇಕಡಾ 100 ರಷ್ಟು ಪ್ರಗತಿ ಸಾಧಿಸಬೇಕು ಎಂದು ಬೆಂಗಳೂರಿನ ಆರೋಗ್ಯ ಸೌಧದ ಪಿಸಿಪಿಎನ್‌ಡಿಟಿ ಹಾಗೂ ಕೆಪಿಎಂಇ ವಿಭಾಗದ ಉಪನಿರ್ದೇಶಕಿ ಮತ್ತು ಬಳ್ಳಾರಿ ಜಿಲ್ಲಾ ನೋಡಲ್ ಅಧಿಕಾರಿ ಡಾ. ಶೋಭಾ ಅವರು ಕರೆ ನೀಡಿದರು.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತಾಯಿ ಮತ್ತು ಮಕ್ಕಳ ಆರೋಗ್ಯ, ಕುಟುಂಬ ಕಲ್ಯಾಣ, ಸೋಂಕಿತ ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ರೋಗಗಳ ನಿಯಂತ್ರಣ, ಕ್ಷಯರೋಗ ಹಾಗೂ ಕುಷ್ಠರೋಗ ನಿರ್ಮೂಲನೆ, ಅಸಾಂಕ್ರಾಮಿಕ ರೋಗಗಳ ನಿಯಂತ್ರಣ ಸೇರಿದಂತೆ ಎಲ್ಲ ಪ್ರಮುಖ ರಾಷ್ಟಿçÃಯ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ತಿಳಿಸಿದರು.

ಹೆಣ್ಣು ಭ್ರೂಣ ಹತ್ಯೆ ತಡೆಗಟ್ಟಲು ಸಾರ್ವಜನಿಕರಲ್ಲಿ ವ್ಯಾಪಕ ಜಾಗೃತಿ ಮೂಡಿಸಬೇಕು ಹಾಗೂ ನಕಲಿ ವೈದ್ಯರನ್ನು ಪತ್ತೆಹಚ್ಚಿ ಜಿಲ್ಲಾ ಮಟ್ಟಕ್ಕೆ ತಕ್ಷಣ ವರದಿ ಸಲ್ಲಿಸಬೇಕು ಎಂದು ಅವರು ವೈದ್ಯಾಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಇದೇ ವೇಳೆ, ಎಬಿ-ಎಆರ್‌ಕೆ (ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ) ಯೋಜನೆಯಡಿ ಹೆಚ್ಚಿನ ಪ್ರಗತಿ ಸಾಧಿಸಿ ಆರೋಗ್ಯ ಸಂಸ್ಥೆಗಳನ್ನು ಬಲಪಡಿಸುವಂತೆ ಸಲಹೆ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಲಕಾನಂದ ಡಿ. ಮಳಗಿ ಅವರು ಮಾತನಾಡಿ, ತಾಯಿ ಮತ್ತು ಮಗುವಿನ ಆರೋಗ್ಯ ರಕ್ಷಣೆಗಾಗಿ ಗರ್ಭಿಣಿಯರು 12 ವಾರಗಳ ಒಳಗೆ ನೋಂದಣಿ ಮಾಡಿಸಿಕೊಳ್ಳುವಂತೆ ನೋಡಿಕೊಳ್ಳಬೇಕು. ಹೆಚ್ಚಿನ ಅಪಾಯವಿರುವ (ತೊಡಕಿನ) ಗರ್ಭಿಣಿಯರನ್ನು ಗುರುತಿಸಿ ನಿರಂತರ ತಪಾಸಣೆ ನಡೆಸಬೇಕು. ರಕ್ತಹೀನತೆ ತಡೆಗಟ್ಟಲು ಐರನ್ ಮತ್ತು ಕ್ಯಾಲ್ಸಿಯಂ ಮಾತ್ರೆಗಳನ್ನು ಸಮರ್ಪಕವಾಗಿ ವಿತರಿಸಬೇಕು ಎಂದರು.
ನಗರ ಹಾಗೂ ಗ್ರಾಮೀಣ ಕೊಳಚೆ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗಗಳು ಉಲ್ಬಣಗೊಳ್ಳದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ನಿಗದಿತ ಗುರಿ ಸಾಧನೆಯೊಂದಿಗೆ ಬಳ್ಳಾರಿ ಜಿಲ್ಲೆಯನ್ನು ಮುಂಚೂಣಿಗೆ ತರಲು ಶ್ರಮಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಶಸ್ತçಚಿಕಿತ್ಸಕ ಡಾ. ಎನ್. ಬಸರೆಡ್ಡಿ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಆರ್. ಅಬ್ದುಲ್ಲಾ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಮರಿಯಂಬಿ ವಿ.ಕೆ., ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಇಂದ್ರಾಣಿ ವಿ., ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ವೀರೇಂದ್ರ ಕುಮಾರ್ ಕೆ.ಜಿ., ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಹನುಮಂತಪ್ಪ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು, ಎಲ್ಲಾ ತಾಲೂಕುಗಳ ಆರೋಗ್ಯಾಧಿಕಾರಿಗಳು, ಆಡಳಿತ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments