Thursday, September 17, 2026
HomeSandurಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಳ್ಳಾರಿ,ಸೆ.15: ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧೀನದಲ್ಲಿರುವ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ ಬಳ್ಳಾರಿ (ಗ್ರಾಮಾಂತರ), ಸಂಡೂರು ಹಾಗೂ ಸಿರುಗುಪ್ಪ (ಕಂಪ್ಲಿ) ಯೋಜನೆಗಳ ವ್ಯಾಪ್ತಿಯಲ್ಲಿ ಈ ನೇಮಕಾತಿ ನಡೆಯಲಿದ್ದು, ಒಟ್ಟು 35 ಅಂಗನವಾಡಿ ಕಾರ್ಯಕರ್ತೆ ಹಾಗೂ 141 ಅಂಗನವಾಡಿ ಸಹಾಯಕಿ ಗೌರವ ಸೇವೆ ಹುದ್ದೆಗಳು ಖಾಲಿ ಇವೆ. ಆಯಾ ಗ್ರಾಮ ಅಥವಾ ವಾರ್ಡ್ನ ಸ್ಥಳೀಯ ಅರ್ಹ ಮಹಿಳೆಯರು ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-10-2026 (ಸಂಜೆ 5:30ರ ಒಳಗೆ).
ಖಾಲಿ ಇರುವ ಹುದ್ದೆಗಳ ಸಂಪೂರ್ಣ ವಿವರಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮಹಾನಗರ ಪಾಲಿಕೆ, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ, ಜಿಲ್ಲಾ ಉಪನಿರ್ದೇಶಕರ ಕಚೇರಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಮುಚ್ಚಿದ ಲಕೋಟೆಯಲ್ಲಿ ರಜಾದಿನಗಳನ್ನು ಹೊರತುಪಡಿಸಿ ಕಚೇರಿ ವೇಳೆಯಲ್ಲಿ ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ನೇರವಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ:
ಉಪನಿರ್ದೇಶಕರ ಕಚೇರಿ, ಬಳ್ಳಾರಿ: 9945254537,
ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಸಂಡೂರು: 8971982008,
ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಸಿರುಗುಪ್ಪ: 9449575444,
ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಬಳ್ಳಾರಿ ಗ್ರಾಮೀಣ: 8971982008 ಗೆ ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments