ಬಳ್ಳಾರಿ,ಸೆ.16:ಇಂದಿನ ತೀವ್ರ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೇವಲ ಶೈಕ್ಷಣಿಕ ಅರ್ಹತೆಯಷ್ಟೇ ಸಾಲದು, ಯುವಜನರು ಉದ್ಯೋಗ ಪಡೆಯಲು ವೃತ್ತಿಪರ ಕೌಶಲ್ಯಾಭಿವೃದ್ಧಿ ಅತ್ಯಂತ ಪೂರಕ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಭಿಪ್ರಾಯಪಟ್ಟರು.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಕೌಶಲ್ಯಾಭಿವೃದ್ಧಿ ಕೇಂದ್ರದ ವತಿಯಿಂದ ಕೇಂದ್ರದ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ಕೌಶಲ್ಯ ತರಬೇತಿ ಪ್ರಮಾಣಪತ್ರ ವಿತರಣೆ’ ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ನೆರವಾಗುವ ನೂತನ ‘ಜಾಬ್ ಪೋರ್ಟಲ್’ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
ನಿರಂತರ ಕೌಶಲ್ಯ ಕಲಿಕೆಯಿಂದ ಮಾತ್ರ ಕಾರ್ಯಕ್ಷೇತ್ರದಲ್ಲಿ ನೈಪುಣ್ಯತೆ ಸಾಧಿಸಿ ಆರ್ಥಿಕವಾಗಿ ಸಬಲರಾಗಲು ಸಾಧ್ಯ ಎಂದರು.
ಸAಜೀವರಾಯನಕೋಟೆ ಸಮೀಪ 600 ಎಕರೆ ವಿಸ್ತೀರ್ಣದಲ್ಲಿ 5,000 ಕೋಟಿ ರೂ. ಬಂಡವಾಳ ಹೂಡಿಕೆಯೊಂದಿಗೆ ಅಂತಾರಾಷ್ಟಿçÃಯ ಮಟ್ಟದ ಜೀನ್ಸ್ ಗಾರ್ಮೆಂಟ್ ಪಾರ್ಕ್ ಸ್ಥಾಪಿಸಲಾಗುವುದು. ಈ ಯೋಜನೆಯ ಮೂಲಕ ಸೃಷ್ಟಿಯಾಗುವ ಒಟ್ಟು ಉದ್ಯೋಗಗಳಲ್ಲಿ ಶೇ. 80 ರಷ್ಟು ಅವಕಾಶಗಳನ್ನು ಬಳ್ಳಾರಿ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಸ್ಥಳೀಯ ಯುವಜನರಿಗೆ ನೀಡಲಾಗುವುದು ಎಂದು ಶಾಸಕರು ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ ಸಂಸ್ಥೆಯ ಚಟುವಟಿಕೆಗಳಿಗೆ ತಮ್ಮ ‘ಟಚ್ ಫಾರ್ ಲೈಫ್’ ಫೌಂಡೇಶನ್ ವತಿಯಿಂದ 10 ಲಕ್ಷ ರೂ. ಧನಸಹಾಯ ನೀಡುವುದಾಗಿ ಘೋಷಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಅವ್ವಾರು ಮಂಜುನಾಥ್ ಮಾತನಾಡಿ, ಕೈಗಾರಿಕಾ ಕ್ಷೇತ್ರದ ಬೇಡಿಕೆಗೆ ತಕ್ಕಂತೆ ಯುವಜನರು ಪ್ರಾಯೋಗಿಕ ಜ್ಞಾನ ಹಾಗೂ ತಾಂತ್ರಿಕ ಕೌಶಲ್ಯಗಳನ್ನು
ರೂಢಿಸಿಕೊಳ್ಳಬೇಕೆಂದು ಕರೆ ನೀಡಿದರು.
ಗೌರವ ಕಾರ್ಯದರ್ಶಿ ಕೆ.ಸಿ. ಸುರೇಶಬಾಬು, ಐಟಿ ಕಮಿಟಿ ಚೇರ್ಮನ್ ಪಿ. ವೇಣುಗೋಪಾಲ ಗುಪ್ತ ಹಾಗೂ ಸಿಇಒ ಡಾ. ಡಿ.ಎಲ್. ರಮೇಶಗೋಪಾಲ್ ಅವರು ಸಂಸ್ಥೆಯ ಕಾರ್ಯಚಟುವಟಿಕೆ ಮತ್ತು ಜಾಬ್ ಪೋರ್ಟಲ್‌ನ ಮಹತ್ವದ ಕುರಿತು ವಿವರಿಸಿದರು.
ಉದ್ಯೋಗ ಮಾಹಿತಿ ವೆಬ್‌ಸೈಟ್: www.jobroots.in
ಸಂಪರ್ಕ ಸಂಖ್ಯೆ: 8660455326, 9880654649 (ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ).
ವೇದಿಕೆಯಲ್ಲಿ ಸಂಸ್ಥೆಯ ಪದಾಧಿಕಾರಿಗಳಾದ ಎಸ್. ದೊಡ್ಡನಗೌಡ, ಸೊಂತ ಗಿರಿಧರ್, ಪಿ. ಪಾಲಣ್ಣ, ಡಾ. ಮರ್ಚೇಡ್ ಮಲ್ಲಿಕಾರ್ಜುನಗೌಡ, ವಿ. ರಾಮಚಂದ್ರ, ಎಸ್. ಸತ್ಯನಾರಾಯಣ ಉಪಸ್ಥಿತರಿದ್ದರು. ಕಾಳಿದಾಸ ಕಾರ್ಯಕ್ರಮ ನಿರೂಪಿಸಿ, ನಾಗಳ್ಳಿ ರಮೇಶ್ ವಂದಿಸಿದರು.
