Wednesday, September 23, 2026
HomeDistrictsBallariಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಗೆ ರೂ.75-100 ಕೋಟಿ ಅನುದಾನ ಬಳಕೆ- ಕ್ರೀಡಾಪಟುಗಳಲ್ಲಿ ಕ್ರೀಡಾ ಮನೋಭಾವಕ್ಕೆ ಕರೆ

ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಗೆ ರೂ.75-100 ಕೋಟಿ ಅನುದಾನ ಬಳಕೆ- ಕ್ರೀಡಾಪಟುಗಳಲ್ಲಿ ಕ್ರೀಡಾ ಮನೋಭಾವಕ್ಕೆ ಕರೆ

ಬಳ್ಳಾರಿ,ಸೆ.23: ಜಿಲ್ಲೆಯಲ್ಲಿ ಕ್ರೀಡಾ ಮೂಲಸೌಕರ್ಯಗಳನ್ನು ಬಲಪಡಿಸಲು ಕೆ.ಎಂ.ಇ.ಆರ್.ಸಿ ಅನುದಾನದಡಿ ಸುಮಾರು 75 ಕೋಟಿಯಿಂದ 100 ಕೋಟಿ ರೂ. ಗೂ ಅಧಿಕ ಹಣವನ್ನು ಒದಗಿಸಲಾಗುತ್ತಿದ್ದು, ಡಿ.ಎಂ.ಎಫ್ ನಿಧಿಯ ಮೂಲಕವೂ ಹೆಚ್ಚುವರಿ ಸೌಲಭ್ಯಗಳನ್ನು ಕಲ್ಪಿಸಲು ಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತಾಶ್ರಯದಲ್ಲಿ ‘ನಾಡ ಹಬ್ಬದ ಸಡಗರ – ಕ್ರೀಡೆಯ ಸಂಭ್ರಮ!’ ಧ್ಯೇಯದೊಂದಿಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ‘ದಸರಾ ಕ್ರೀಡಾಕೂಟ ಹಾಗೂ ಸಿ.ಎಂ. ಕಪ್ 2026’ ಗೆ ಚಾಲನೆ ನೀಡಿ ಅವರು ಮಾತನಾಡಿದರು.
ಬೆಂಗಳೂರಿನಿAದ ಬಳ್ಳಾರಿಗೆ ಸ್ಥಳಾಂತರಗೊAಡಿರುವ ಹಾಕಿ ಕ್ರೀಡಾಂಗಣ ಮತ್ತು ಕ್ರೀಡಾ ವಸತಿ ನಿಲಯವು ಜಿಲ್ಲೆಯ ಹೆಮ್ಮೆಯಾಗಿದ್ದು, ಅದಕ್ಕೆ ಅಗತ್ಯವಿರುವ ಮೂಲ ಸೌಲಭ್ಯಗಳನ್ನು ಒದಗಿಸಲಾಗಿದೆ. ಇದರ ಜೊತೆಗೆ ಬಳ್ಳಾರಿಯ ಬಿ.ಡಿ.ಎ ಫುಟ್‌ಬಾಲ್ ಕ್ರೀಡಾಂಗಣದ ನವೀಕರಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು.

ಕಲಬುರಗಿಯಲ್ಲಿ ನಡೆದ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕೂಟದ 100 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟçಮಟ್ಟಕ್ಕೆ ಆಯ್ಕೆಯಾಗಿರುವ ಬಳ್ಳಾರಿಯ ಸುದೀಕ್ಷಾ, ಪ್ಯಾರಾ ಈಜುಪಟು ಗೋಪಿಚಂದ್ ಹಾಗೂ ಇತ್ತೀಚೆಗೆ 4 ಕಿ.ಮೀ ಮ್ಯಾರಥಾನ್‌ನಲ್ಲಿ ಪ್ರಥಮ ಬಹುಮಾನ ಪಡೆದ ಕ್ರೀಡಾ ಶಾಲೆಯ ವಿದ್ಯಾರ್ಥಿ ಖ್ವಾಜಾ ಅವರ ಸಾಧನೆಯನ್ನು ಇದೇ ವೇಳೆ ಪ್ರಶಂಶಿಸಿದರು.

ಕ್ರೀಡೆಯು ಕೇವಲ ಗೆಲುವು-ಸೋಲಿಗೆ ಸೀಮಿತವಾಗಿರದೆ ಶಿಸ್ತು, ಸೌಹಾರ್ದತೆ, ಟೀಮ್ ಸ್ಪಿರಿಟ್ ಮತ್ತು ಕ್ರೀಡಾ ಮನೋಭಾವವನ್ನು (ಸ್ಪೋರ್ಟ್ಸ್ಮನ್‌ಶಿಪ್) ಕಲಿಸುತ್ತದೆ. ಮಾನಸಿಕ ಹಾಗೂ ದೈಹಿಕವಾಗಿ ಸದೃಢವಾಗಿರುವ ನಾಗರಿಕರಿಂದ ಮಾತ್ರ ದೇಶದ ಸಮೃದ್ಧಿ ಸಾಧ್ಯ ಎಂದು ಕರೆ ನೀಡಿ, ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜು ತಲ್ವಾರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಬಳ್ಳಾರಿಯ ಗ್ರಾಮೀಣ ಹಾಗೂ ನಗರ ಪ್ರದೇಶದ ಯುವಜನತೆಯಲ್ಲಿರುವ ಕೌಶಲ್ಯ ಮತ್ತು ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ರಾಷ್ಟç ನಿರ್ಮಾಣ ಚಟುವಟಿಕೆಗಳಲ್ಲಿ ತೊಡಗುವಂತೆ ಪ್ರೋತ್ಸಾಹಿಸುವುದು ನಮ್ಮ ಇಲಾಖೆಯ ಪ್ರಮುಖ ಗುರಿಯಾಗಿದೆ ಎಂದು ತಿಳಿಸಿದರು.

ಉದಯೋನ್ಮುಖ ಕ್ರೀಡಾಪಟುಗಳನ್ನು ಗುರುತಿಸಿ ಸೂಕ್ತ ತರಬೇತಿ ನೀಡುವುದು ಮತ್ತು ಯುವಕ-ಯುವತಿ ಮಂಡಳಿಗಳನ್ನು ನೋಂದಾಯಿಸಿ ಅವರಿಗೆ ಅಗತ್ಯ ಪ್ರೋತ್ಸಾಹ ನೀಡುವುದು ಇಲಾಖೆಯ ಪ್ರಮುಖ ಆದ್ಯತೆಯಾಗಿದೆ. ಪ್ರತಿ ವರ್ಷ ತಾಲ್ಲೂಕು, ಜಿಲ್ಲಾ ಹಾಗೂ ವಿಭಾಗ ಮಟ್ಟದ ಕ್ರೀಡಾಕೂಟಗಳನ್ನು ಆಯೋಜಿಸಿ, ಪ್ರತಿಭಾವಂತ ಕ್ರೀಡಾಪಟುಗಳನ್ನು ಮುಂದಿನ ಹಂತಕ್ಕೆ ಬೆಂಗಳೂರಿಗೆ ಕಳುಹಿಸಿಕೊಡಲಾಗುತ್ತಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಒಳಾಂಗಣ ಮತ್ತು ಹೊರಾಂಗಣ ಕ್ರೀಡಾಂಗಣಗಳು ಹಾಗೂ 2014ರಲ್ಲಿ ಜೆಎಸ್‌ಡಬ್ಲೂö್ಯ ಸಹಯೋಗದೊಂದಿಗೆ ಬಿಡಿಎಎ ಮೈದಾನ ನಿರ್ಮಾಣಗೊಂಡಿವೆ. ಡಿಎಂಎಫ್ ವತಿಯಿಂದ ಸಿರುಗುಪ್ಪದಲ್ಲಿ ಕ್ರೀಡಾಂಗಣ ನಿರ್ಮಿಸಲಾಗಿದೆ. ಕೆಕೆಆರ್‌ಡಿಬಿ ವತಿಯಿಂದ 7 ಕೋಟಿ ರೂ. ವೆಚ್ಚದಲ್ಲಿ ಕಂಪ್ಲಿ ಮತ್ತು ಕುರುಗೋಡಿನಲ್ಲಿ ಒಳಾಂಗಣ ಕ್ರೀಡಾಂಗಣಗಳ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ.

ಕೆಎಂಆರ್‌ಸಿ ವತಿಯಿಂದ ಬಳ್ಳಾರಿ ಹಾಗೂ ಸಿರುಗುಪ್ಪದಲ್ಲಿ 27 ಕೋಟಿ ಮತ್ತು ಸಂಡೂರಿನಲ್ಲಿ 24 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಕ್ರೀಡಾ ಇಲಾಖೆಯ ಅಭಿವೃದ್ಧಿ ಕಾರ್ಯಗಳ ಮಾಹಿತಿ ನೀಡಿದರು.
ಏಷ್ಯನ್ ಗೇಮ್ಸ್, ಪ್ಯಾರಾ ಒಲಿಂಪಿಕ್ಸ್ ಸೇರಿದಂತೆ ವಿವಿಧ ಹಂತಗಳಲ್ಲಿ ವಿಜೇತರಾದ ಜಿಲ್ಲೆಯ ಕ್ರೀಡಾಪಟುಗಳಿಗೆ ಇಲಾಖೆಯಿಂದ ನಿರಂತರ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ಅಭಿಮತ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ಕ್ರೀಡಾಪಟುಗಳನ್ನು ಸಾಂಕೇತಿಕವಾಗಿ ಸನ್ಮಾನಿಸಿ ಗೌರವಿಸಲಾಯಿತು. ಇದಕ್ಕೂ ಮುನ್ನ ಜಿಲ್ಲಾಧಿಕಾರಿಯವರು, ಕ್ರೀಡಾ ಧ್ವಜಾರೋಹಣ ನೆರವೇರಿಸಿ, ಕ್ರೀಡಾ ದೀಪ ಬೆಳಗಿಸಿದರು. ಬಳಿಕ ಕ್ರೀಡಾಕೂಟಗಳು ನಡೆದವು. ಕ್ರೀಡಾಪಟುಗಳಿಗೆ ನೋಂದಣಿ ವ್ಯವಸ್ಥೆ ಮಾಡಲಾಗಿತ್ತು.
ಈ ವೇಳೆ ಫುಟ್‌ಬಾಲ್ ಅಸೋಶಿಯೇಶನ್ ನ ನಿರಂಜನ್, ಭಾರತೀಯ ಸೇವಾದಳದ ಗಣೇಶ್ ಬಾರೀಕರ ಸೇರಿದಂತೆ ಕ್ರೀಡಾಪಟುಗಳು ಹಾಗೂ ಇತರರು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments