Saturday, October 3, 2026
HomeDistrictsBallariಅಲ್ಲಂ ಸುಮಂಗಳಮ್ಮ ಮಹಿಳಾ ಕಾಲೇಜಿನಲ್ಲಿ ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆರಕ್ತದಾನ ಅತ್ಯಂತ ಶ್ರೇಷ್ಠದಾನ: ಡಾ.ಇಂದ್ರಾಣಿ...

ಅಲ್ಲಂ ಸುಮಂಗಳಮ್ಮ ಮಹಿಳಾ ಕಾಲೇಜಿನಲ್ಲಿ ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆರಕ್ತದಾನ ಅತ್ಯಂತ ಶ್ರೇಷ್ಠದಾನ: ಡಾ.ಇಂದ್ರಾಣಿ ಕರೆ

ಬಳ್ಳಾರಿ,ಅ.01:ರಕ್ತವು ಮಾನವ ದೇಹದ ಅತ್ಯಂತ ಅಮೂಲ್ಯವಾದ ಜೀವದ್ರವ್ಯವಾಗಿದ್ದು, ರಕ್ತದಾನ ಮಾಡುವುದು ಅತ್ಯಂತ ಶ್ರೇಷ್ಠ ದಾನವಾಗಿದೆ ಎಂದು ಜಿಲ್ಲಾ ಎಚ್‌ಐವಿ/ಏಡ್ಸ್ ನಿಯಂತ್ರಣಾಧಿಕಾರಿಗಳಾದ ಡಾ.ಇಂದ್ರಾಣಿ ಅವರು ತಿಳಿಸಿದರು.

ನಗರದ ಶ್ರೀಮತಿ ಅಲ್ಲಂ ಸುಮಂಗಳಮ್ಮ ಸ್ಮಾರಕ ಮಹಿಳಾ ಮಹಾವಿದ್ಯಾಲಯದ ಆವರಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ ಹಾಗೂ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ರಾಷ್ಟಿçÃಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈ ವರ್ಷ ‘ಮಾನವೀಯತೆ – ಒಂದು ಹನಿ ರಕ್ತ ನೀಡಿ ಜೀವ ಉಳಿಸಿ’ ಎಂಬ ಘೋಷವಾಕ್ಯದೊಂದಿಗೆ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದು ತಿಳಿಸಿದ ಅವರು, ಆರೋಗ್ಯವಂತ 18ರಿಂದ 60 ವರ್ಷದೊಳಗಿನ ಯಾವುದೇ ಅರ್ಹ ವ್ಯಕ್ತಿಗಳು ಲಿಂಗಭೇದವಿಲ್ಲದೆ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಬಹುದು ಎಂದರು.
ರಕ್ತವನ್ನು ಯಾವುದೇ ಕಾರ್ಖಾನೆಯಲ್ಲಿ ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ; ಅಪಘಾತಗಳು, ಶಸ್ತçಚಿಕಿತ್ಸೆ, ಹೆರಿಗೆ ಮತ್ತು ಕ್ಯಾನ್ಸರ್‌ನಂತಹ ಗಂಭೀರ ಚಿಕಿತ್ಸಾ ಸಂದರ್ಭಗಳಲ್ಲಿ ರಕ್ತದ ಅವಶ್ಯಕತೆ ಹೆಚ್ಚಿರುತ್ತದೆ. ಹೀಗಾಗಿ ಜಿಲ್ಲೆಯಲ್ಲಿ ರಕ್ತದ ಕೊರತೆಯಾಗದಂತೆ ನೋಡಿಕೊಳ್ಳಲು ಸಾರ್ವಜನಿಕರು, ಕಾಲೇಜುಗಳು ಮತ್ತು ಸ್ವಯಂಸೇವಾ ಸಂಸ್ಥೆಗಳು ಕೈಜೋಡಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಿ. ಸತೀಶ್ ಅವರು ಮಾತನಾಡಿ, ಪ್ರತಿಯೊಬ್ಬರೂ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿಯಬೇಕು ಎಂದು ಹೇಳಿದರು.

ಸಂಸ್ಥೆಗಳಿಗೆ ಸನ್ಮಾನ:
ಇದೇ ಸಂದರ್ಭದಲ್ಲಿ 100ಕ್ಕೂ ಹೆಚ್ಚು ರಕ್ತಚೀಲಗಳನ್ನು ಸಂಗ್ರಹಿಸಲು ಸಹಕರಿಸಿದ ಟಿವಿಎಂ ಕಾಲೇಜು, ಅಮ್ಮ ಫೌಂಡೇಶನ್, ಸಂಜಯ್ ಗಾಂಧಿ ಪಾಲಿಟೆಕ್ನಿಕ್ ಕಾಲೇಜು, ಸರಳಾದೇವಿ ಸತೀಶ್ ಚಂದ್ರ ಅಗರ್ವಾಲ್ ಕಾಲೇಜು, ಎಲ್&ಟಿ ಪಿಎಸ್‌ಸಿ, ಕೋಳೂರು ಸಬ್ ಸೆಂಟರ್, ಸ್ಮಯರ್ ಆಸ್ಪತ್ರೆ ಹಾಗೂ ಚಾಗನೂರು ಸೇರಿದಂತೆ ಹಲವು ಸಂಸ್ಥೆಗಳು ಮತ್ತು ಸಂಘಟನೆಗಳ ಪ್ರತಿನಿಧಿಗಳನ್ನು ಗೌರವಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ವಿವಿಧ ಸ್ವಯಂಸೇವಾ ಸಂಸ್ಥೆಗಳ ಪ್ರತಿನಿಧಿಗಳು, ರಕ್ತಕೇಂದ್ರದ ಅಧಿಕಾರಿಗಳು, ಕಾಲೇಜಿನ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಐಸಿಟಿಸಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಜಿಲ್ಲಾ ಮೇಲ್ವಿಚಾರಕರಾದ ಬಿ. ಗಿರೀಶ್ ಅವರು ವಂದನಾರ್ಪಣೆ ನೆರವೇರಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments