Monday, November 2, 2026
HomeDistrictsBallariಕುರುಗೋಡು ನೂತನ ತಹಶೀಲ್ದಾರ್ ಆಗಿ ಯು. ನಾಗರಾಜ್ ಅಧಿಕಾರ ಸ್ವೀಕಾರ

ಕುರುಗೋಡು ನೂತನ ತಹಶೀಲ್ದಾರ್ ಆಗಿ ಯು. ನಾಗರಾಜ್ ಅಧಿಕಾರ ಸ್ವೀಕಾರ

[ವರದಿ : ಜಿ ಎಂ ಬಸಯ್ಯ]
ಕುರುಗೋಡು: ತಾಲ್ಲೂಕಿನ ನೂತನ ತಹಶೀಲ್ದಾರ್ ಆಗಿ ಯು. ನಾಗರಾಜ್ ಅವರು ಸೋಮವಾರ ಕುರುಗೋಡು ತಾಲ್ಲೂಕು ಕಚೇರಿಯಲ್ಲಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು.

ಯು. ನಾಗರಾಜ್ ಅವರು ಈ ಹಿಂದೆ ಗಂಗಾವತಿ, ಹರಿಹರ, ಸಂಡೂರು ಹಾಗೂ ಬಳ್ಳಾರಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಕರ್ತವ್ಯ ನಿರ್ವಹಿಸಿದ್ದು, ಆಡಳಿತಾತ್ಮಕ ಕ್ಷೇತ್ರದಲ್ಲಿ ಅನುಭವ ಹೊಂದಿದ್ದಾರೆ.

ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಮೊದಲಿಗೆ ಕಚೇರಿಯ ಸಿಬ್ಬಂದಿಗಳ ಸಭೆ ನಡೆಸಿ, ತಾಲ್ಲೂಕು ಕಚೇರಿಯ ಆಡಳಿತಾತ್ಮಕ ಕಾರ್ಯವೈಖರಿ ಹಾಗೂ ವಿವಿಧ ವಿಭಾಗಗಳ ಸಂಪೂರ್ಣ ಮಾಹಿತಿ ಪಡೆದುಕೊಳ್ಳಲಾಗುವುದು. ಬಳಿಕ ಆಡಳಿತಕ್ಕೆ ಹೆಚ್ಚಿನ ಚುರುಕು ನೀಡುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸರ್ಕಾರದ ಆಡಳಿತಾತ್ಮಕ ಕೆಲಸಗಳನ್ನು ಸಂಪೂರ್ಣ ಪ್ರಾಮಾಣಿಕತೆ ಹಾಗೂ ಜವಾಬ್ದಾರಿಯಿಂದ ನಿರ್ವಹಿಸಲಾಗುವುದು. ಸಾರ್ವಜನಿಕರು ಮತ್ತು ರೈತರು ತಮ್ಮ ಸಣ್ಣಪುಟ್ಟ ಕೆಲಸಗಳಿಗಾಗಿ ಅನಗತ್ಯವಾಗಿ ತಾಲ್ಲೂಕು ಕಚೇರಿಗೆ ಅಲೆದಾಡುವ ಪರಿಸ್ಥಿತಿಯನ್ನು ತಪ್ಪಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಕಚೇರಿಯ ಕೆಲಸಗಳನ್ನು ಸುಗಮವಾಗಿ ಹಾಗೂ ಸಕಾಲದಲ್ಲಿ ಪೂರ್ಣಗೊಳಿಸಲು ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು.

ನೂತನ ತಹಶೀಲ್ದಾರ್ ಅವರ ಅಧಿಕಾರ ಸ್ವೀಕಾರದೊಂದಿಗೆ ಕುರುಗೋಡು ತಾಲ್ಲೂಕಿನ ಆಡಳಿತಾತ್ಮಕ ಕಾರ್ಯಚಟುವಟಿಕೆಗಳಿಗೆ ಹೊಸ ಚುರುಕು ದೊರೆಯುವ ನಿರೀಕ್ಷೆಯಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments