Welcome to Hai Sandur   Click to listen highlighted text! Welcome to Hai Sandur
Tuesday, July 15, 2025
HomeDistrictsBallariರಾಷ್ಟ್ರೀಯ ಲೋಕ್ ಅದಾಲತ್ ಮೂಲಕ ವಿವಿಧ ಪ್ರಕಣಗಳ ಸಂಧಾನ : ನ್ಯಾಯಾಧೀಶೆ ಕೆ.ಜಿ ಶಾಂತಿ

ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ ವಿವಿಧ ಪ್ರಕಣಗಳ ಸಂಧಾನ : ನ್ಯಾಯಾಧೀಶೆ ಕೆ.ಜಿ ಶಾಂತಿ

ಬಳ್ಳಾರಿ:ಜು:12: ಜಿಲ್ಲೆಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಂಡಿದ್ದು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆ ಒಳಗೊಂಡು ಒಟ್ಟು 31 ನ್ಯಾಯಾಲಯಗಳಲ್ಲಿ ಶನಿವಾರ ರಾಷ್ಟ್ರೀಯ ಲೋಕ್ ಅದಾಲತ್ ನಡೆದು ಸಾರ್ವಜನಿಕರು, ಪಕ್ಷಕಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀ ಸಂಧಾನ ಮಾಡಿಕೊಳ್ಳುವ ಮೂಲಕ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಅವಕಾಶವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಜಿ.ಶಾಂತಿ ಅವರು ಹೇಳಿದರು.

ನಗರದ ತಾಳೂರು ರಸ್ತೆಯ ಹೊಸ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ವಿಡಿಯೋ ಕಾನ್ಫರೆನ್ಸ್ ಹಾಲ್‌ನಲ್ಲಿ ಶನಿವಾರ ಏರ್ಪಡಿಸಿದ್ಧ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.

ರಾಜೀ ಸಂಧಾನದಲ್ಲಿ ಪಾಲ್ಗೊಂಡು ತಮಗಾಗುವ ಆರ್ಥಿಕ ಹೊರೆ ಹಾಗೂ ಸಮಯ ಪೋಲಾಗುವುದನ್ನು ತಪ್ಪಿಸಲು ಈ ಲೋಕ್ ಅದಾಲತ್ ಸಹಾಯವಾಗಲಿದೆ. ರಾಜಿ ಸಂಧಾನದಲ್ಲಿ ಪ್ರಕರಣ ಇತ್ಯರ್ಥವಾದರೆ ನ್ಯಾಯಾಲಯಕ್ಕೆ ತುಂಬಿದ ಶುಲ್ಕವನ್ನು ಸಂಪೂರ್ಣ ಮರುಪಾವತಿ ಮಾಡಲಾಗುವುದು ಎಂದು ತಿಳಿಸಿದರು.

ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 69,354 ವಿವಿಧ ಚಾಲ್ತಿ ಪ್ರಕರಣಗಳಿದ್ದು, ಅದರಲ್ಲಿ ಈಗಾಗಲೇ ರಾಜೀ ಆಗಬಹುದಾದ 19784 ಪ್ರಕರಣಗಳನ್ನು ಗುರುತಿಸಿದ್ದು, ಈಗಾಗಲೇ 11931 ಪ್ರಕರಣಗಳು ರಾಜೀಯಾಗಿವೆ ಇದರಲ್ಲಿ ಸಿವಿಲ್ ದಾವೆಗಳು ಅಂದರೆ ಜಮೀನುಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು, ಮನೆ ಹಾಗೂ ನಿವೇಶನಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು, ಭೂಸ್ವಾಧೀನ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ದರಖಾಸ್ತು ಅರ್ಜಿಗಳು, ಕಾರ್ಮಿಕ ಪ್ರಕರಣಗಳು, ಮರಳು ಕಳ್ಳ ಸಾಗಾಣಿಕೆ ಪ್ರಕರಣಗಳು, ಚೆಕ್‌ಬೌನ್ಸ್ ಪ್ರಕರಣಗಳು, ಮೋಟರ್ ವಾಹನ ಅಪಘಾತ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಹಾಗೂ ರಾಜೀ ಆಗಲು ಅರ್ಹವಿರುವ ಕ್ರಿಮಿನಲ್ ಪ್ರಕರಣಗಳು ಸೇರಿದಂತೆ ಹಲವಾರು ಪ್ರಕರಣಗಳನ್ನು ರಾಜೀಗಾಗಿ ಗುರುತಿಸಲಾಗಿದೆ ಎಂದರು.

ಪ್ರತಿದಿನ ರಾಜೀಗಾಗಿ ಆಯ್ಕೆ ಮಾಡಿದ ಪ್ರಕರಣಗಳನ್ನು ಸಂಬಂಧಪಟ್ಟ ವಕೀಲರು ಹಾಗೂ ಪಕ್ಷಗಾರರೊಂದಿಗೆ ಮುಂಚಿತವಾಗಿಯೇ ರಾಜೀ ಸಂಧಾನದಿಂದಾಗುವ ಪ್ರಯೋಜನಗಳ ಬಗ್ಗೆ ತಿಳಿಸಲಾಗುತ್ತದೆ. ಅವರ ಮನ ಒಲಿಸಿ ರಾಜೀ ಸಂಧಾನ ಮಾಡಿಕೊಳ್ಳಲು 67 ಜನ ಮಧ್ಯಸ್ಥಿಕೆದಾರರು ಇದ್ದಾರೆ ಎಂದು ತಿಳಿಸಿದರು.

ಈ ವೇಳೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಉಪಸ್ಥಿತರಿದ್ದರು

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

Latest news
Click to listen highlighted text!