HomeKotturuಕಿಡಿಗೇಡಿಗಳ ದುಷ್ಕೃತ್ಯಕ್ಕೆ ಕಸದ ತಿಪ್ಪೆಗುಂಡಿಗಳು ಭಸ್ಮ, ಅಗ್ನಿಶಾಮಕ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

ಕಿಡಿಗೇಡಿಗಳ ದುಷ್ಕೃತ್ಯಕ್ಕೆ ಕಸದ ತಿಪ್ಪೆಗುಂಡಿಗಳು ಭಸ್ಮ, ಅಗ್ನಿಶಾಮಕ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

ವರದಿ: ಶಿವರಾಜ್ ಕನ್ನಡಿಗ
ಕೊಟ್ಟೂರು: ತಾಲ್ಲೂಕಿನ ಹರಾಳು ಗ್ರಾಮದ ಹಗರಿ ಹಳ್ಳದ ಸಮೀಪದಲ್ಲಿದ್ದ ಐದಕ್ಕೂ ಹೆಚ್ಚು ಕಸದ ತಿಪ್ಪೆಗುಂಡಿಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಅವು ಸಂಪೂರ್ಣ ಸುಟ್ಟು ಭಸ್ಮವಾಗಿವೆ.
ಕೃಷಿ ಹೊಲಗಳಿಗೆ ಉಪಯೋಗವಾಗಬೇಕಿದ್ದ ಸಾವಯವ ಗೊಬ್ಬರ ಬೂದಿಯಾಗಿ ಮಾರ್ಪಟ್ಟಿದೆ.

ಘಟನೆ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ಇಲಾಖೆಯ ಠಾಣಾಧಿಕಾರಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಅವರ ಸಮಯಪ್ರಜ್ಞೆಯಿಂದ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ಸಂಭವಿಸಬಹುದಾದ ದೊಡ್ಡ ಅನಾಹುತ ತಪ್ಪಿದೆಯೆಂದು ಗ್ರಾಮಸ್ಥರು ತಿಳಿಸಿದ್ದಾರೆ.

ಘಟನಾ ಸ್ಥಳದ ಪಕ್ಕದಲ್ಲೇ ಟ್ರಾನ್ಸ್‌ಫಾರ್ಮರ್ ಇದ್ದ ಕಾರಣ ಬೆಂಕಿ ಅದಕ್ಕೂ ವ್ಯಾಪಿಸುವ ಭೀತಿ ಎದುರಾಗಿತ್ತು. ಆದರೆ ಕೆಇಬಿ ಇಲಾಖೆಯ ಸಿಬ್ಬಂದಿ ಕೂಡಲೇ ಎಚ್ಚೆತ್ತುಕೊಂಡು ಅಗತ್ಯ ಕ್ರಮ ಕೈಗೊಂಡ ಪರಿಣಾಮ ಹೆಚ್ಚಿನ ಹಾನಿ ತಪ್ಪಿದೆ.

ಈ ಘಟನೆ ಗ್ರಾಮದಲ್ಲಿ ಆತಂಕ ಮೂಡಿಸಿದ್ದು, ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments