Sunday, June 7, 2026
HomeKotturuಪರಿಸರ ಕಾಪಾಡುವುದು ನಮ್ಮೆಲ್ಲರ ಹೊಣೆ – ಪಿಎಸ್ಐ ಗೀತಾಂಜಲಿ ಶಿಂಧೆ

ಪರಿಸರ ಕಾಪಾಡುವುದು ನಮ್ಮೆಲ್ಲರ ಹೊಣೆ – ಪಿಎಸ್ಐ ಗೀತಾಂಜಲಿ ಶಿಂಧೆ

ವರದಿ: ಶಿವರಾಜ್ ಕನ್ನಡಿಗ
ಕೊಟ್ಟೂರು: ಪರಿಸರ ಕಲುಷಿತವಾಗದಂತೆ ಮುನ್ನಚ್ಚರಿಕೆ ವಹಿಸುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದು ಪಿಎಸ್ಐ ಗೀತಾಂಜಲಿ ಶಿಂಧೆ ಹೇಳಿದರು.

ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಶುಕ್ರವಾರ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಗಿಡ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿ ಕಲುಷಿತ ಪರಿಸರದಿಂದ ಮುಂದಿನ ಪೀಳಿಗಿಯವರಿಗೆ ಅಪಾಯವಾಗುವ ಸಾಧ್ಯತೆಗಳಿವೆ ಎಂದು ಆತಂಕ ವ್ಯಕ್ತಪಡಿಸಿದರು. ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಹಾಗೂ ಇತರೆ ವಸ್ತುಗಳ ಬಳಕೆಯನ್ನು ನಿಷೇಧಿಸಲು ಕಾರ್ಯನ್ಮೋಖರಾಗೋಣ ಎಂದರು.

ಡೆಲ್ಲಿ ವರ್ಲ್ಡ್ ಸ್ಕೂಲ್ ಮಕ್ಕಳು, ಶಿಕ್ಷಕರಾದ ಶಂಕರ್, ಸಾಧನ, ಪತ್ರಕರ್ತರು ದಾದಾಪೀರ್, ಹೆಚ್. ಪುಟ್ಟಗೌರಿ ಹಾಗೂ ಪೊಲೀಸ್ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments