Friday, July 31, 2026
HomeSandurಸಂಗೀತ ಪರಂಪರೆಯ ಅರಿವಿನಿಂದ ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ಹೆಚ್ಚಳ: ವೆಂಕಟೇಶ್

ಸಂಗೀತ ಪರಂಪರೆಯ ಅರಿವಿನಿಂದ ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ಹೆಚ್ಚಳ: ವೆಂಕಟೇಶ್

ಬಳ್ಳಾರಿ,ಜು.31: ವಿದ್ಯಾರ್ಥಿನಿಯರ ಪ್ರತಿಭೆಯನ್ನು ಉತ್ತೇಜಿಸುವ ಹಾಗೂ ಭಾರತೀಯ ಸಂಗೀತ ಪರಂಪರೆಯನ್ನು ತಿಳಿಯಲು ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸುವುದರಿಂದ ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ಹೆಚ್ಚಾಗುತ್ತದೆ ಎಂದು ಸಂಡೂರು ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯ ನಿರ್ದೇಶಕ ವೆಂಕಟೇಶ್ ಅವರು ಹೇಳಿದರು.

ಸಂಡೂರು ಪಟ್ಟಣದ ಡಾ. ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿನಿಯರಿಗೆ ಗುರುವಾರ ಆಯೋಜಿಸಿದ್ದ ‘ಶಾಸ್ತ್ರೀಯ ಸಂಗೀತ’ ಕಲಿಕಾ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿನಿಯರು ಶಿಕ್ಷಣದ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಶಾಸ್ತ್ರೀಯ ಸಂಗೀತವು ನಮ್ಮ ಸಾಂಸ್ಕೃತಿಕ ಪರಂಪರೆಯ ಅಮೂಲ್ಯ ಭಾಗವಾಗಿದ್ದು, ವಿದ್ಯಾರ್ಥಿನಿಯರಲ್ಲಿ ಶಿಸ್ತು, ಏಕಾಗ್ರತೆ ಹಾಗೂ ಆತ್ಮವಿಶ್ವಾಸವನ್ನು ಬೆಳೆಸಲು ಸಹಕಾರಿಯಾಗಿದೆ ಎಂದು ತಿಳಿಸಿದರು.

ಈ ತರಬೇತಿಯಿಂದ ವಿದ್ಯಾರ್ಥಿನಿಯರಲ್ಲಿರುವ ಸಂಗೀತ ಪ್ರತಿಭೆ ಹೊರಹೊಮ್ಮಲು ಹಾಗೂ ರಾಜ್ಯ, ರಾಷ್ಟ್ರ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅವಕಾಶ ಸಿಗಲಿದೆ. ವಿದ್ಯಾರ್ಥಿನಿಯರ ಪ್ರತಿಭೆ ಅನಾವರಣಕ್ಕೆ ಶಾಸ್ತ್ರೀಯ ಸಂಗೀತ ತರಬೇತಿ ಸಹಕಾರಿ ಆಗಲಿದೆ ಎಂದು ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ನಾಗರಾಜ್ ಅವರು ಸ್ವಾಗತ ಮತ್ತು ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ನುಡಿಗಳಾನ್ನಾಡಿದರು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನೇತ್ರಾವತಿ, ಬಿ.ತಾಯಪ್ಪ, ವಿಠಲ್, ರಾಜೇಶ್, ಆಸಿಯಾ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗ ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments