Thursday, October 15, 2026
HomeVijayanagaraಸಂಕ್ಲಾಪುರದ 64.50 ಎಕರೆ ಸರ್ಕಾರಿ ಜಮೀನು ಅನ್ಯ ಉದ್ದೇಶಕ್ಕೆ ಬಳಸದಿರಿ: ಭರತ್ ಕುಮಾರ್ ಸಿಆರ್ ಆಗ್ರಹ

ಸಂಕ್ಲಾಪುರದ 64.50 ಎಕರೆ ಸರ್ಕಾರಿ ಜಮೀನು ಅನ್ಯ ಉದ್ದೇಶಕ್ಕೆ ಬಳಸದಿರಿ: ಭರತ್ ಕುಮಾರ್ ಸಿಆರ್ ಆಗ್ರಹ

ಹೊಸಪೇಟೆ:ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಸಂಕ್ಲಾಪುರ ಗ್ರಾಮದ ಸರ್ವೆ ನಂ. 185/2ರಲ್ಲಿರುವ 64.50 ಎಕರೆ ಸರ್ಕಾರಿ ಜಮೀನನ್ನು ಅನ್ಯ ಉದ್ದೇಶಗಳಿಗೆ ಬಳಕೆ ಮಾಡದೆ, ನಿವೇಶನ ರಹಿತ ಬಡವರು, ಮಧ್ಯಮ ವರ್ಗದವರು ಹಾಗೂ ಗಣಿ ಬಾಧಿತ ಪ್ರದೇಶದ ಜನರಿಗೆ ನಿವೇಶನ ಹಂಚಿಕೆ ಮಾಡಲು ಮೀಸಲಿಡಬೇಕು ಎಂದು ಯುವ ಮುಖಂಡ ಭರತ್ ಕುಮಾರ್ ಸಿಆರ್ ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಹೊಸಪೇಟೆ ತಾಲೂಕಿನಲ್ಲಿ ಹಲವು ವರ್ಷಗಳಿಂದ ಸ್ವಂತ ನಿವೇಶನ ಹಾಗೂ ಮನೆ ಇಲ್ಲದೆ ಬಾಡಿಗೆ ಮನೆಗಳಲ್ಲಿ ಜೀವನ ಸಾಗಿಸುತ್ತಿರುವ ಅನೇಕ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿವೆ. ದುಬಾರಿ ಬಾಡಿಗೆ ಪಾವತಿಸಿ ಜೀವನ ನಡೆಸುವುದು ಅವರಿಗೆ ಆರ್ಥಿಕವಾಗಿ ಹೊರೆಯಾಗುತ್ತಿದೆ. ಆದ್ದರಿಂದ ಅರ್ಹ ಫಲಾನುಭವಿಗಳನ್ನು ಗುರುತಿಸಿ, ಸಂಕ್ಲಾಪುರ ಗ್ರಾಮದ ಈ ಸರ್ಕಾರಿ ಜಮೀನಿನಲ್ಲಿ ನಿವೇಶನಗಳನ್ನು ಹಂಚಿಕೆ ಮಾಡುವ ಮೂಲಕ ನಿರ್ಗತಿಕ ಕುಟುಂಬಗಳಿಗೆ ನೆರವಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ವಿಶೇಷವಾಗಿ ಗಣಿ ಬಾಧಿತ ಪ್ರದೇಶಗಳಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು, ಕೂಲಿ ಕಾರ್ಮಿಕರು ಹಾಗೂ ಬಡ ರೈತಾಪಿ ಕುಟುಂಬಗಳಿಗೆ ನಿವೇಶನ ಮತ್ತು ವಸತಿ ಸೌಲಭ್ಯ ಕಲ್ಪಿಸುವುದು ಅತ್ಯಂತ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ 64.50 ಎಕರೆ ಜಮೀನನ್ನು ಗಣಿ ಬಾಧಿತರು ಸೇರಿದಂತೆ ನಿವೇಶನ ರಹಿತ ಅರ್ಹ ಕುಟುಂಬಗಳ ವಸತಿ ಉದ್ದೇಶಕ್ಕೆ ಮೀಸಲಿಡಬೇಕು. ಯಾವುದೇ ಕಾರಣಕ್ಕೂ ಈ ಜಮೀನನ್ನು ಬೇರೆ ಉದ್ದೇಶಕ್ಕೆ ಬಳಸಬಾರದು ಎಂದು ಭರತ್ ಕುಮಾರ್ ಸಿಆರ್ ತಿಳಿಸಿದ್ದಾರೆ.

ವಿಜಯನಗರ ಜಿಲ್ಲೆ ನೂತನ ಜಿಲ್ಲೆಯಾಗಿದ್ದು, ಈ ಭಾಗದ ಸಮಗ್ರ ಅಭಿವೃದ್ಧಿಗೆ ಸರ್ಕಾರ ವಿಶೇಷ ಗಮನ ಹರಿಸಬೇಕು. ಜಿಲ್ಲೆಯ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಅನುಕೂಲವಾಗುವಂತೆ ಸರ್ಕಾರಿ ಕಾನೂನು ಕಾಲೇಜು, ಎಂಜಿನಿಯರಿಂಗ್ ಕಾಲೇಜು, ವೈದ್ಯಕೀಯ ಕಾಲೇಜು, ತೋಟಗಾರಿಕೆ ಕಾಲೇಜು ಸೇರಿದಂತೆ ಅಗತ್ಯವಾದ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವುದು ಅವಶ್ಯಕವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಗಣಿ ಬಾಧಿತ ಜನರ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡಬೇಕು. ಬಡವರು, ಕೂಲಿ ಕಾರ್ಮಿಕರು ಹಾಗೂ ನಿವೇಶನ ರಹಿತ ಕುಟುಂಬಗಳ ಹಿತದೃಷ್ಟಿಯಿಂದ ಸಂಕ್ಲಾಪುರ ಗ್ರಾಮದ ಸರ್ವೆ ನಂ. 185/2ರ 64.50 ಎಕರೆ ಸರ್ಕಾರಿ ಜಮೀನನ್ನು ಸಂರಕ್ಷಿಸಿ, ಅರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಯುವ ಮುಖಂಡ ಭರತ್ ಕುಮಾರ್ ಸಿಆರ್ ಒತ್ತಾಯಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments